ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. @CMofKarnataka
ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ಇನ್ನು ಮಂಗಳೂರಿನ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್ ಕಮಿಷನರ್ ಆದೇಶ ಹೊರಡಿಸಿದ್ದಾರೆ. “ಫಾಜಿಲ್ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ ಬಳಿಕವೇ ಫಾಜಿಲ್ ಹತ್ಯೆಗೆ ಕಾರಣ ತಿಳಿದು ಬರಲಿದೆ” ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ನಗರದ ಅಪಾರ್ಟ್ಮೆಂಟ್ ಒಂದರಲ್ಲಿ ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳ ಅಶ್ಲೀಲ ವರ್ತನೆಯ ವೀಡಿಯೋ ವೈರಲ್ ಆಗಿದ್ದು ಈ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.ವೀಡಿಯೋ ಮಾಡಿರುವ ವಿದ್ಯಾರ್ಥಿಯನ್ನು ವಿಚಾರಣೆಗೊಳಪಡಿಸಿ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಬಾಲಿವುಡ್ ನಟ ಸೋನು ಸೂದ್ ಮಂಗಳೂರಿಗೆ ಭೇಟಿ ನೀಡಿದ್ದಾರೆ.. ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅವರನ್ನು ಪ್ರಜ್ಞಾ ಕೌನ್ಸೆಲಿಂಗ್ ಸೆಂಟರ್ ನಿರ್ದೇಶಕಿ ಡಾ.ಹಿಲ್ದಾ ರಾಯಪ್ಪನ್ ಸ್ವಾಗತಿಸಿದ್ದಾರೆ.
ಮಂಗಳೂರಿನ ಉಚ್ಚಿಲ ಬಟ್ಟಪಾಡಿ ಕಡಲ ತೀರದಲ್ಲಿ ಸಿರಿಯಾ ದೇಶದ ಎಂಬಿ ಪ್ರಿನ್ಸೆಸ್ ಮಿಠಲ್ ವ್ಯಾಪಾರಿ ಹಡಗು ಅರಬ್ಬಿ ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ವಿದೇಶಿ ಸರಕು ಸಾಗಾಣೆ ಹಡಗಿನಲ್ಲಿ ಬರೋಬ್ಬರಿ 220 ಮೆಟ್ರಿಕ್ ಟನ್ ತೈಲ ಸೋರಿಕೆಯಾಗಿರುವ ಬಗ್ಗೆ ಆತಂಕ ಶುರುವಾಗಿದೆ. ಚೀನಾದಿಂದ ಲೆಬನಾನ್ಗೆ 8 ಸಾವಿರ ಟನ್ ಸ್ಟೀಲ್ ಕಾಯಿಲ್ ಸಾಗಿಸುತ್ತಿತ್ತು. ಇನ್ನು ಲೆಬನಾನ್ಗೆ ಸಾಗಬೇಕಿದ್ದ ಹಡಗು ಮಂಗಳೂರಿಗೆ ಬಂದಿದ್ದೇಕೆ ಎಂಬ ಪ್ರಶ್ನೆ ಮೂಡಿದೆ. ಈ ಬಗ್ಗೆ ಕೇಂದ್ರ ತನಿಖಾ ದಳದಿಂದ ತನಿಖೆ ನಡೆಸುವ ಸಾಧ್ಯತೆ ಇದೆ.
ಕಳ್ಳನೊಬ್ಬ ಖಾಸಗಿ ಬಸ್ನಲ್ಲಿದ್ದ ಕಲೆಕ್ಷನ್ ಹಣವನ್ನು ಎಗರಿಸಿದ ಘಟನೆ ಮಂಗಳೂರು ನಗರದ ಸ್ಟೇಟ್ಬ್ಯಾಂಕ್ನಲ್ಲಿ ನಡೆದಿದೆ.. ಖಾಸಗಿ ಬಸ್ವೊಂದರ ಡ್ರೈವರ್–ಕಂಡಕ್ಟರ್ ಊಟ ಮಾಡಲು ತೆರಳಿದ್ದ ವೇಳೆ ಬಸ್ನಲ್ಲಿ ಇಟ್ಟಿದ್ದ ಕಲೆಕ್ಷನ್ ಹಣ 4,500 ರೂಪಾಯಿಯನ್ನು ಎಗರಿಸಿದ್ದಾನೆ.. ಈ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
ರಕ್ಷಿತ್ ಶೆಟ್ಟಿ ಅಭಿನಯದ 777 ಚಾರ್ಲಿ ಸಿನಿಮಾ ನಿನ್ನೆ ತೆರೆ ಕಂಡಿದೆ. ಇದರ ಪ್ರೀಮಿಯರ್ ಶೋ ವೀಕ್ಷಿಸಿದ ಮಂಗಳೂರು ಕಮಿಷನರೇಟ್ ಪೊಲೀಸರು ಇದೀಗ ಶ್ವಾನದಳಕ್ಕೆ ನಾಯಿಗೆ ‘ಚಾರ್ಲಿ’ ಎಂದು ನಾಮಕರಣ ಮಾಡಿದ್ದಾರೆ.
ಮಂಗಳೂರಿನಲ್ಲಿ ಹಿಜಾಬ್ ಗದ್ದಲ ವಿಚಾರವಾಗಿ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ದೇಶದ ಸಂವಿಧಾನ, ಕಾನೂನು, ಸುಪ್ರೀಂ ಕೋರ್ಟ್ ತೀರ್ಪು ಇವುಗಳಿಗೆ ಗೌರವ ಇಲ್ಲಾಂದ್ರೆ. ಅವರ ಬಗ್ಗೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಹಿಜಾಬ್ ಧರಿಸುವ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಬೇಕು. ಶಿಕ್ಷಣ ಪಡೆಯಬೇಕಾದ್ರೆ ದೇಶದ ಸಂವಿಧಾನ ಕೋರ್ಟ್ ಏನು ಹೇಳುತ್ತೆ ಹಾಗೆ ನಡೆದುಕೊಳ್ಳಬೇಕು ಎಂದರು.
"ಮುಂದಿನ ಚುನಾವಣೆಯಲ್ಲಿ ಸಂಘದ ಹಿರಿಯರು ಸೂಚಿಸಿದರೆ ಮಾತ್ರ ಸ್ಪರ್ಧಿಸುತ್ತೇನೆ. ಒಂದು ವೇಳೆ ಸ್ಪರ್ಧಿಸಿದರೆ ಆಗ ನಾನು ತಾಕತ್ತಿನಿಂದ ಹೇಳುತ್ತೇನೆ. ನನಗೆ ಮುಸ್ಲೀಂರ ಓಟುಗಳು ಬೇಡ ಹಿಂದೂಗಳ ಮತಗಳಷ್ಟೇ ಸಾಕು" ಎಂದು ತುಳು ಭಾಷೆಯಲ್ಲಿ ಮಾಡಿದ ಭಾಷಣದಲ್ಲಿ ಹೇಳಿದ್ದಾರೆ.
ಮೀನು ಶುದ್ದೀಕರಿಸುವ ಬೃಹತ್ ಟ್ಯಾಂಕಿಗೆ ಬಿದ್ದ ಪಶ್ಚಿಮ ಬಂಗಾಳ ಮೂಲದ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಕಾರ್ಮಿಕರು ಸೋಮವಾರ ಬೆಳಿಗ್ಗೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಕೆರೆಯಲ್ಲಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸುವುದು ಸಾಮಾನ್ಯ. ಬಲೆ, ಕೂಣಿ ಮೂಲಕ ಕೆರೆಯಲ್ಲಿ ಬೆಳೆಸಲಾದ ಮೀನುಗಳನ್ನು ಬೇಟೆಯಾಡಲಾಗುತ್ತದೆ. ಆದ್ರೆ ಇಲ್ಲೊಂದು ಕಡೆ ಇದೇ ಮೊದಲ ಬಾರಿಗೆ ಗಾಳ ಹಾಕಿ ಮೀನು ಹಿಡಿಯುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು.
Muslim Ban In Hindu Temple Issue - ಹಿಂದೂ ದೇವಾಲಯದಲ್ಲಿ (Hindu Temple) ಮುಸ್ಲಿಂ ವ್ಯಾಪಾರಿಗಳ ನಿಷೇಧ (Muslim Businessman Ban) ಹಿನ್ನೆಲೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ (CT Ravi) ಹಿಂದುತ್ವ (Hindutva) ಪರ ಬ್ಯಾಟಿಂಗ್ ನಡೆಸಿದ್ದಾರೆ,
Mangalore:ಬಾಲ್ಯದಲ್ಲಿ ನಾವು ಕಳ್ಳ-ಪೊಲೀಸ್ ಆಟ ಆಡಿರಬೇಕು, ಆದರೆ ನಿಜ ಜೀವನದಲ್ಲಿ ಇದನ್ನು ನೋಡುವುದು ಅಪರೂಪ. ಸಿನಿಮೀಯ ರೀತಿಯಲ್ಲಿ ಪೊಲೀಸರು ಕಳ್ಳನನ್ನು ಹಿಡಿದಿರುವ ಘಟನೆ ಮಂಗಳೂರಿನಲ್ಲಿ ಜರುಗಿದೆ.
ನಾವು ಕಾರ್ಯಕರ್ತರಿಗೆ ಬಾಂಬ್, ಗ್ರೆನೇಡ್ ದೀಕ್ಷೆ ನೀಡಿಲ್ಲ, ಕಾರ್ಯಕರ್ತರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಲು ತ್ರಿಶೂಲ ದೀಕ್ಷೆ ನೀಡಿದ್ದೇವೆ ಎಂದು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ ವೆಲ್ ಹೇಳಿದ್ದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.