ಗುರುವಾರದಂದು ಬಿಜೆಪಿ ಗೋವಾದ 34 ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ ಮತ್ತು ಮಾಜಿ ಸಿಎಂ ಮತ್ತು ಜನಪ್ರಿಯ ಬಿಜೆಪಿ ನಾಯಕ ದಿವಂಗತ ಮನೋಹರ್ ಪರಿಕ್ಕರ್ ಅವರ ಪುತ್ರ ಉತ್ಪಲ್ ಪರಿಕ್ಕರ್ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದಾಗಿ ಈಗ ಅವರಿಗೆ ಕೇಜ್ರಿವಾಲ್ ಅವರು ತಮ್ಮ ಪಕ್ಷದಿಂದ ಸ್ಪರ್ಧಿಸಲು ಆಹ್ವಾನ ನೀಡಿದ್ದಾರೆ.
ನಾಲ್ಕು ಬಾರಿ ಗೋವಾದ ಮುಖ್ಯಮಂತ್ರಿ ಹಾಗೂ ಕೇಂದ್ರ ರಕ್ಷಣಾ ಸಚಿವರಾಗಿದ್ದ ಮನೋಹರ್ ಪರ್ರಿಕರ್ ಭಾನುವಾರದಂದು ಪ್ಯಾಂಕ್ರಿಯಾಟಿಕ್ ಕ್ಯಾನ್ಸರ್ ನಿಂದ ಮೃತಪಟ್ಟಿದ್ದರು.ಈಗ ಅವರ ಅಂತಿಮ ಸಂಸ್ಕಾರವನ್ನು ಗೋವಾದ ಮಿರಾಮಾರ್ ಬಿಚ್ ನಲ್ಲಿ ಅಂತಿಮ ಸಂಸ್ಕಾರವನ್ನು ಸರ್ಕಾರಿ ಗೌರವದ ಮೂಲಕ ನೆರವೇರಿಸಲಾಯಿತು
ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ನಿಧನದ ಬಳಿಕ ನಡೆದ ಮಹತ್ವದ ಬೆಳವಣಿಗೆಯೊಂದರಲ್ಲಿ ಗೋವಾ ವಿಧಾನಸಭಾ ಸ್ಪೀಕರ್ ಪ್ರಮೋದ್ ಸಂವಾತ್ ಅವರನ್ನು ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡುವ ಸಾಧ್ಯತೆ ಇದೇ ಎನ್ನಲಾಗಿದೆ.
ಹಲವು ವರ್ಷಗಳಿಂದ ಕ್ಯಾನ್ಸರ್ ರೋಗಕ್ಕೆ ತುತ್ತಾಗಿದ್ದ ಅವರು 2018ರಿಂದೀಚೆಗೆ ತೀವ್ರ ಅನಾರೋಗ್ಯ ಉಂಟಾದ್ದರಿಂದ ನ್ಯೂಯಾರ್ಕ್, ಗೋವಾ, ಮುಂಬೈ ಮತ್ತು ದೆಹಲಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದಿದ್ದರು.
ಗೋವಾದ ಕೃಷಿ ಸಚಿವ ಈಗ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ರನ್ನು ಜೀಸಸ್ ಗೆ ಹೋಲಿಸಿದ್ದಾರೆ. ಸದನದಲ್ಲಿ ಮಾತನಾಡುತ್ತಾ ಸಿಎಂ ರನ್ನು ಹೊಗಳಿದ ಸಚಿವರು "ಪರಿಕ್ಕರ್ ಅವರು ಜೀಸಸ್ ರೀತಿ ಸೇತುವೆಗಳನ್ನು ನಿರ್ಮಿಸುತ್ತಾರೇ ಹೊರತು ಗೋಡೆಗಳನ್ನಲ್ಲ" ಎಂದು ಹೊಗಳಿದ್ದಾರೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಅವರು ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಗೋವಾ ಸರ್ಕಾರದ ಸಚಿವ ಸಂಪುಟ ಸಭೆ ಕರೆದಿದ್ದಾರೆ. ಏಮ್ಸ್ನಲ್ಲಿ ಪ್ಯಾಂಕ್ರಿಯಾಟಿಕ್ ಕಾಯಿಲೆಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಸೆಪ್ಟೆಂಬರ್ 15 ರಂದು ದಾಖಲಾದ ನಂತರ ಮೊದಲ ಅಧಿಕೃತ ಸಭೆ ನಡೆಸುತ್ತಿದ್ದಾರೆ.
ಕ್ಯಾನ್ಸರ್ ಕಾಯಿಲೆಗೆ ತುತ್ತಾಗಿರುವ ಮನೋಹರ್ ಪರಿಕ್ಕರ್ ಆರೋಗ್ಯದ ದೃಷ್ಟಿಯಿಂದ ಗೋವಾದ ಮುಖ್ಯಮಂತ್ರಿಯನ್ನು ಬದಲಿಸುವ ಚರ್ಚೆ ನಡೆದಿತ್ತು ಆದರೆ ಈಗ ಆ ಎಲ್ಲ ವದಂತಿಗಳಿಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ತೆರೆ ಎಳೆದಿದ್ದಾರೆ. ಪರಿಕರ್ ಅವರೇ ಗೋವಾ ಸಿಎಂ ಆಗಿ ಮುಂದುವರೆಯಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ಯಾಂಕ್ರಿಯಾಟಿಕ್ ಕಾಯಿಲೆಯಿಂದ ಬಳಲುತ್ತಿರುವ ಗೋವಾ ಸಿಎಂ ಮನೋಹರ್ ಪರಿಕ್ಕರ್ ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಎಐಐಎಂಎಸ್)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕರ್ ಅವರು ಆರೋಗ್ಯ ತಪಾಸಣೆಗಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.62 ವರ್ಷದ ಪರಿಕರ್ ಪ್ರಸ್ತುತ ಉತ್ತರ ಗೋವಾದ ಕ್ಯಾಂಡೋಲಿಮ್ನಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಪ್ಯಾಂಕ್ರಿಯಾಟಿಕ್ ರೋಗಕ್ಕೆ ಚಿಕಿತ್ಸೆ ಪಡೆಯುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.