MGNREGA: ಧಾರವಾಡ ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಒಟ್ಟು 1.69 ಲಕ್ಷ ಉದ್ಯೋಗ ಚೀಟಿಗಳಿವೆ ಇದರಲ್ಲಿ ಸುಮಾರು 81 ಸಾವಿರ ಉದ್ಯೋಗ ಚೀಟಿಗಳಿದ್ದು, 1.56 ಲಕ್ಷ ಜನ ಕೆಲಸಗಾರರಿದ್ದಾರೆ. ಮತ್ತು 4.03 ಲಕ್ಷ ಕಾಮಗಾರಿಗಳನ್ನು ಗುರುತಿಸಲಾಗಿದೆ ಎಂದು ಸಿಇಓ ಅವರು ತಿಳಿಸಿದರು.
ಬರ ಪೀಡಿತ ಪ್ರದೇಶಗಳ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ನರೇಗಾ ಕೆಲಸದ ದಿನಗಳನ್ನು 100 ರಿಂದ 150 ದಿನಗಳಿಗೆ ಹೆಚ್ಚಿಸಲು ಮತ್ತು ಕರ್ನಾಟಕದ ಆರ್ಥಿಕ ವರ್ಷ 2023-24ಕ್ಕೆ ಕಾರ್ಮಿಕ ಬಜೆಟ್ ಅನ್ನು 1300 ಲಕ್ಷದಿಂದ 1800 ಲಕ್ಷ ಕೆಲಸದ ದಿನಗಳಿಗೆ ಹೆಚ್ಚಿಸಲು ಕೇಂದ್ರ ಸರ್ಕಾರಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಮನವಿ ಮಾಡಿದ್ದಾರೆ.
ಬೇಸಿಗೆ ಅವಧಿಯಲ್ಲಿ ಗ್ರಾಮೀಣ ಜನರ ಗುಳೆ ತಡೆಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಹೆಚ್ಚು ಒತ್ತು ನೀಡಿದ್ದು, ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಯೋಜನೆಯಡಿ ಕೊಪ್ಪಳ ಜಿಲ್ಲೆ ನಿತ್ಯ ಲಕ್ಷಕ್ಕೂ ಹೆಚ್ಚು ಜನರಿಗೆ ಕೆಲಸ ನೀಡಿ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದೆ.
ಜಿಲ್ಲಾ ಪಂಚಾಯತ್ ವತಿಯಿಂದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಮಂಜೂರಾಗಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ಹೊಸದಾಗಿ ತಾಂತ್ರಿಕ ಸಹಾಯಕರ ಹುದ್ದೆಗಳಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಮನರೇಗಾ ಯೋಜನೆಯಲ್ಲಿನ ಮೋಸದ ಚಟುವಟಿಕೆಯ ಮತ್ತೊಂದು ಪ್ರಕರಣ ಮಧ್ಯಪ್ರದೇಶದಲ್ಲಿ ಬೆಳಕಿಗೆ ಬಂದಿದ್ದು, ಪಂಚಾಯತ್ ಅಧ್ಯಕ್ಷ , ಕಾರ್ಯದರ್ಶಿ ಮತ್ತು ಜಿರ್ನ್ಯಾ ಜಿಲ್ಲೆಯ ಸಹಾಯಕ ಪಿಪಾರ್ಖೆಡಾ ನಾಕಾ ಪಂಚಾಯತ್ ಅವರು ಬಾಲಿವುಡ್ ನಟಿಯ ಚಿತ್ರಗಳನ್ನು ಸ್ಕೀಮ್ ಫಲಾನುಭವಿಗಳ ನಕಲಿ ಜಾಬ್ ಕಾರ್ಡ್ಗಳನ್ನು ರಚಿಸಲು ಬಳಸಿದ್ದರು. ಖಾತೆಗಳಿಂದ ಹಣವನ್ನು ತೆಗೆದುಕೊಳ್ಳಲು ನಕಲಿ ಜಾಬ್ ಕಾರ್ಡ್ಗಳನ್ನು ಸಹ ಬಳಸಲಾಗುತ್ತಿತ್ತು.
ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಸಮರ್ಪವಾಗಿ ಅನುಷ್ಠಾನಗೊಳ್ಳಿಸಲು ಜಿಲ್ಲಾ ಪಂಚಾಯತ, ತಾಲೂಕ ಪಂಚಾಯತ ಮತ್ತು ಗ್ರಾಮ ಪಂಚಾಯತ ಮಟ್ಟದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಶಾಸನಬದ್ಧ ಬಾಧ್ಯತೆ (Statutory Obligation) ಗಳಾದ ಆದಾಯ ತೆರಿಗೆ, ಪಾವತಿ ಮತ್ತು ಸರಕು ಮತ್ತು ಸೇವಾ ತೆರಿಗೆ ಪಾವತಿ, ರಾಜಧನ ಮತ್ತು ಪಾವತಿ, ವಾರ್ಷಿಕ ಲೆಕ್ಕ ಪತ್ರಗಳ ತಯಾರಿಕೆ ಮತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದಲ್ಲಿ ಹಣಕಾಸು ವ್ಯವಸ್ಥಾಪಕರನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ .
ಸತತ ಬರಗಾಲ, ಅನಿಶ್ಚಿತ ಮಳೆಯ ಪರಿಣಾಮವಾಗಿ ಸಂಕಷ್ಟಕ್ಕೊಳಗಾಗಿರುವ ರೈತರ ನೆರವಿಗೆ ಸರ್ಕಾರಗಳು ಧಾವಿಸಬೇಕಾದ್ದು ಅತಿ ಅಗತ್ಯವಾದ್ದರಿಂದ ಕೂಡಲೇ ಈ ಅನುದಾನ ಬಿಡುಗಡೆ ಮಾಡುವಂತೆ ಸಿಎಂ ಕೋರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.