ಕನಿಷ್ಠ ಬೆಂಬಲ ಯೋಜನೆಯಡಿ ಜೋಳ ನೋಂದಣಿಗೆ ಜೂನ್ 15 ರ ವರೆಗೆ ಅವಕಾಶ ಕಲ್ಪಿಸಲಾಗಿದ್ದು, ಜೂನ್ 30 ರಂದು ಖರೀದಿ ಮುಕ್ತಾಯದ ಅವಧಿಯಾಗಿದೆ. ಬೆಂಗಳೂರಿನ ರಾಜ್ಯ ಕೃಷಿ ಮಾರಾಟ ಮಂಡಳಿಯು ಖರೀದಿ ಏಜೆನ್ಸಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಿಲ್ಲೆಯಲ್ಲಿ 2023-24 ನೇ ಸಾಲಿನ ಮುಂಗಾರು ಋತುವಿನಲ್ಲಿ ಬೆಳೆದ ಭತ್ತವನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ನೋಂದಣಿಗೆ 2023ರ ಡಿ.31 ರ ವರೆಗೆ ಕಾಲವಕಾಶ ನಿಗಧಿಪಡಿಸಲಾಗಿತ್ತು. ರಾಜ್ಯದಲ್ಲಿ 2.5 ಲಕ್ಷ ಮೆಟ್ರಿಕ್ ಟನ್ ಭತ್ತ ಖರೀದಿಸಬೇಕಾಗಿರುವುದರಿಂದ ಪ್ರಸ್ತುತ ಸರ್ಕಾರವು ಭತ್ತ ನೋಂದಣಿ ಅವಧಿಯನ್ನು ಮಾ.31 ರ ವರೆಗೆ ವಿಸ್ತರಿಸಿ ಆದೇಶಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.