ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಸ್ವತ್ತುಗಳ ಆಸ್ತಿ ತೆರಿಗೆಯನ್ನು ಪರಿಷ್ಕರಿಸಿ, 2016-17ನೇ ಸಾಲಿನಿಂದ ಆಸ್ತಿ ತೆರಿಗೆ ಮೊತ್ತವನ್ನು ಪಾವತಿಸುವಂತೆ ಸಾರ್ವಜನಿಕರಿಗೆ ನೋಟಿಸ್ ನೀಡುತ್ತಿರುವ ಬಗ್ಗೆ ರಾಮಲಿಂಗಾ ರೆಡ್ಡಿ ಪತ್ರ ಬರೆದಿದ್ದಾರೆ.
ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಶಕ್ತಿ ಯೋಜನೆ ಆರಂಭಗೊಂಡಾಗ 84 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಈಗ 1ಕೋಟಿ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿರುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ. ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ 884 ಹೊಸ ಬಸ್ ಖರೀದಿಸಲಾಗುವುದು. ಈಗಾಗಲೇ 375 ಬಸ್ ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
ನಾವು ಶ್ರದ್ಧೆ, ಭಕ್ತಿಯಿಂದ ರಾಮನನ್ನ ಪೂಜೆ ಮಾಡ್ತೇವಿ. ಕಾಂಗ್ರೆಸ್ನವರು ನಿಜವಾದ ಹಿಂದುಗಳು. ನಾವು ಯಾವತ್ತೂ ಕೂಡ ರಾಜಕಾರಣಕ್ಕೆ ಹಿಂದುತ್ವ ಮತ್ತು ಶ್ರೀರಾಮನನ್ನ ತೆಗೆದುಕೊಂಡು ಬಂದಿಲ್ಲ ಎಂದು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಎಚ್ ಡಿ ಕೆ ಮಾಡಿರುವ ಆರೋಪಗಳು ಸುಳ್ಳು. ನಮ್ಮ ಸರ್ಕಾರದಲ್ಲಿ ಪ್ರಾಮಾಣಿಕ, ದಕ್ಷ ಅಧಿಕಾರಿಗಳಿಗೆ ಮಾತ್ರ ಮಣೆ ಹಾಕುತ್ತೇವೆ ಎಂದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ವರ್ಗಾವಣೆ ದಂಧೆ ಆರೋಪವನ್ನು ತಳ್ಳಿ ಹಾಕಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.