DK Shivakumar : “ಸಚಿವ ಸುಧಾಕರ್ ಅವರ ವಿರುದ್ಧ ದಾಖಲಾಗಿರುವ ದೂರು ಸಿವಿಲ್ ಪ್ರಕರಣ. ಧಮಕಿಗೂ ಪಿಸಿಆರ್ ದೂರಿಗೂ ಬಹಳ ವ್ಯತ್ಯಾಸವಿದೆ. ಈ ವಿಚಾರವಾಗಿ ನಾನು ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದು, ಇದೊಂದು ಸುಳ್ಳು ಕೇಸ್ ಎಂದು ತಿಳಿದು ಬಂದಿದೆ. ಹೀಗಾಗಿ ಸುಧಾಕರ್ ಅವರು ರಾಜೀನಾಮೆ ನೀಡುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
Karnataka Election 2023: ಬಿಜೆಪಿ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ, ಸಚಿವ ಡಾ.ಕೆ ಸುಧಾಕರ್, ಇದು ಜನರನ್ನು ಸಬಲೀಕರಣಗೊಳಿಸುವ ಪ್ರಣಾಳಿಕೆ. ಎಲ್ಲವೂ ಉಚಿತವೆಂದು ಖಜಾನೆ ಖಾಲಿ ಮಾಡಲು ಬಿಜೆಪಿ ತಯಾರಿಲ್ಲ ಎಂದರು.
Ramya In Chikkaballapur Utsav : ಇಷ್ಟು ವರ್ಷ ಕಾಂಗ್ರೆಸ್ ಪಕ್ಷದಲ್ಲಿದ್ದ ರಮ್ಯಾ ಇದೀಗ ಬಿಜೆಪಿ ಸೇರ್ಪಡೆಯಾಗುತ್ತಾರಾ ಎಂಬ ಅನುಮಾನಗಳು ಕಾಡಲು ಆರಂಭಿಸಿವೆ. ಅದಕ್ಕೆ ಕಾರಣ ಚಿಕ್ಕಬಳ್ಳಾಪುರ ಉತ್ಸವದಲ್ಲಿ ರಮ್ಯಾ ಆಡಿದ ಮಾತುಗಳು.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸಲಿದ್ದಾರೆ. ಆರಂಭದಲ್ಲಿ 114 ಕ್ಲಿನಿಕ್ಗಳು ಏಕಕಾಲಕ್ಕೆ ಲೋಕಾರ್ಪಣೆಯಾಗಲಿದೆ. ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದ್ದು, ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ ಎಂದು ತಿಳಿಸಿದರು.
ಮಕ್ಕಳಲ್ಲಿ ನರ ದೌರ್ಬಲ್ಯ, ಬುದ್ಧಿ ಮಾಂದ್ಯತೆ ಸೇರಿದಂತೆ ಶಾಶ್ವತ ಅಂಗವಿಕಲತೆ ಉಂಟು ಮಾಡುವ ಜೆಇ ಮೆದುಳು ಜ್ವರ (ಜಪಾನೀಸ್ ಎನ್ ಸೆಫಲೈಟಿಸ್) ನಿಯಂತ್ರಣಕ್ಕಾಗಿ ಡಿಸೆಂಬರ್ 5 ರಿಂದ ವಿಶೇಷ ಲಸಿಕಾ ಅಭಿಯಾನ ಆರಂಭವಾಗಲಿದೆ. ಈ ಅಭಿಯಾನದಡಿ 1-15 ವರ್ಷದ ಅಂದಾಜು 48 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
PMBJP scheme : "ಜನೌಷಧಿ ಮಳಿಗೆಗಳಿಂದ ಬಿಪಿಎಲ್ ಮತ್ತು ಬಡ ವರ್ಗದವರಿಗೆ ಹೆಚ್ಚಿನ ಅನುಕೂಲವಾಗುತ್ತಿದ್ದು, ಆರೋಗ್ಯಕ್ಕಾಗಿ ಮಾಡುತ್ತಿರುವ ವೆಚ್ಚ ಗಣನೀಯವಾಗಿ ಕಡಿಮೆಯಾಗುತ್ತಿದೆ. ಮತ್ತಷ್ಟು ಮಳಿಗೆಗಳನ್ನು ತೆರೆದು ಜನರಿಗೆ ಅನುಕೂಲ ಮಾಡಿಕೊಡಲಾಗುತ್ತಿದೆ. ಈ ವರ್ಷ 300 ಕ್ಕೂ ಹೆಚ್ಚು ಮಳಿಗೆಗಳನ್ನು ತೆರೆದು ಉತ್ತಮ ಸಾಧನೆ ಮಾಡಿದ್ದೇವೆ" ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಪೇ ಸಿಎಂ ಕಾಂಗ್ರೆಸ್ನ ಡರ್ಟಿ ಪಾಲಿಟಿಕ್ಸ್ನ ಒಂದು ಭಾಗ ಎಂದು ಸಿಎಂ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದು ಕಾಂಗ್ರೆಸ್ ಅಧಃಪತನವನ್ನು ಸೂಚಿಸುತ್ತಿದೆ ಎಂದು ಸಿಎಂ ಹೇಳಿದ್ದಾರೆ.
ಕಾಂಗ್ರೆಸ್ ಮೇಲ್ವರ್ಗದ ಜಾತಿಗೆ ಯಾವಾಗಲೂ ಕಿರುಕುಳ ಕೊಟ್ಟಿದೆ ಎಂದು ಕಾಂಗ್ರೆಸ್ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ ನಡೆಸಿದ್ದಾರೆ. ವೀರೇಂದ್ರ ಪಾಟೀಲ್ 170 ಸೀಟು ತಂದುಕೊಟ್ಟಿದ್ರು. ಕಾಂಗ್ರೆಸ್ ಇತಿಹಾಸದಲ್ಲೇ ಅಷ್ಟು ಸೀಟ್ ಬಂದಿರಲಿಲ್ಲ. ಅನಾರೋಗ್ಯದ ಕಾರಣ ನೀಡಿ ಅವರನ್ನು ಕೆಳಗಿಳಿಸಿದ್ರು ಎಂದು ವಾಗ್ದಾಳಿ ನಡೆಸಿದ್ದಾರೆ.
108 ಸರ್ವರ್ ಹಾಳಾಗಲೂ ಭ್ರಷ್ಟಾಚಾರ ಕಾರಣ ಎಂಬ ಸಿದ್ದರಾಮಯ್ಯಗೆ ಸಚಿವ ಸುಧಾಕರ್ ತಿರುಗೇಟು ನೀಡಿದ್ದಾರೆ. ಟೆಕ್ನಿಕಲ್ ಎರರ್ ಬಗ್ಗೆ ಸಿದ್ದರಾಮಯ್ಯಗೆ ಏನು ಗೊತ್ತು ಎಂದು ಸುಧಾಕರ್ ಪ್ರಶ್ನಿಸಿದ್ದಾರೆ.
ಜಿಮ್ಗಳಲ್ಲಿ ಹಾನಿಕಾರಕ ಪ್ರೊಟೀನ್ ಪೌಡರ್ ಮಾರಾಟ ನಿಯಂತ್ರಣಕ್ಕೆ ಸರ್ಕಾರ ಮುಂದಾಗಿದ್ದು, ಅನಧಿಕೃತ ಪ್ರೋಟೀನ್ ಪುಡಿ ಮಾರಾಟಮಾಡುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳು, ಆಹಾರ ಸುರಕ್ಷತಾ ಅಂಕಿತಾಧಿಕಾರಿಗಳಿಗೆ ಸೂಚನೆ ನೀಡಿದೆ.
ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದರು.
ರಾಜ್ಯದಲ್ಲಿ ಕೋವಿಡ್ ಮೂರನೇ ಡೋಸ್ ಲಸಿಕೆಯನ್ನು 17% ರಷ್ಟು ಮಂದಿ ಮಾತ್ರ ಪಡೆದಿದ್ದಾರೆ. ಉಚಿತವಾಗಿ ನೀಡುತ್ತಿದ್ದರೂ ಲಸಿಕೆ ಪಡೆಯದಿರುವುದು ತೀವ್ರ ಬೇಸರದ ಸಂಗತಿ. ಉತ್ತಮ ಆರೋಗ್ಯಕ್ಕಾಗಿ ಅರ್ಹರೆಲ್ಲರೂ ಲಸಿಕೆ ಪಡೆಯಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮನವಿ ಮಾಡಿದ್ದಾರೆ.
ಆ ಬಳಿಕ ಸುದ್ದಿಗಾರರರೊಂದಿಗೆ ಮಾತನಾಡಿದ ಅವರು, ಮಂಕಿಪಾಕ್ಸ್ ಹಿನ್ನೆಲೆಯಲ್ಲಿ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಂತಾರಾಷ್ಟ್ರೀಯ ಪ್ರಯಾಣಿಕರು ರಾಜ್ಯಕ್ಕೆ ಬಂದಾಗ ಮಾರ್ಗಸೂಚಿಯನ್ನು ಪಾಲಿಸಬೇಕು. ಇಥಿಯೋಪಿಯಾದಿಂದ ಬಂದಿದ್ದ ವ್ಯಕ್ತಿಯೊಬ್ಬರಿಗೆ ಮಂಕಿ ಫಾಕ್ಸ್ ಇರುವ ಅನುಮಾನದ ಮೇಲೆ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆದರೆ ಅದು ಮಂಕಿಪಾಕ್ಸ್ ಅಲ್ಲ, ಸ್ಮಾಲ್ಪಾಕ್ಸ್ ಎಂದು ದೃಢಪಟ್ಟಿದೆ ಎಂದರು.
Corona Fourth Wave:ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಪಾಲನೆ ಮಾಡುವುದು ಕಡ್ಡಾಯವಾಗಲಿದೆ. ಆದರೆ ಸದ್ಯಕ್ಕೆ ನಿಯಮ ಉಲ್ಲಂಘನೆ ಮಾಡಿದ ಸಂದರ್ಭದಲ್ಲಿ ದಂಡ ವಿಧಿಸುವುದಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.
ರಾಜ್ಯ ಆರೋಗ್ಯ ಇಲಾಖೆಯಲ್ಲಿ (Health Department) ನಿರಂತರವಾಗಿ ವಿವಿಧ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮಧ್ಯಪ್ರವೇಶ ಮಾಡಿ, ಆರೋಗ್ಯ ಸಚಿವ ಡಾ.ಸುಧಾಕರ್ (Sudhakar) ಅವರ ರಾಜೀನಾಮೆ ಪಡೆದು ನಿಷ್ಪಕ್ಷಪಾತ ತನಿಖೆಗೆ ಆದೇಶಿಸಬೇಕು ಎಂದು ಆಮ್ ಆದ್ಮಿ ಪಾರ್ಟಿ (Aam Admi Party) ಒತ್ತಾಯಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.