Money Laundering Case: ಪ್ರಕರಣದಲ್ಲಿ ನಡೆದ ದೊಡ್ಡ ಪಿತೂರಿಯನ್ನು ಬಯಲಿಗೆಳೆಯಲು ಆರೋಪಿಯ ಕಸ್ಟಡಿ ವಿಚಾರಣೆಯಅವಶ್ಯಕತೆ ಇದೆ ಎಂದು ಕೇಂದ್ರೀಯ ಸಂಸ್ಥೆ ತನ್ನ ಅರ್ಜಿಯಲ್ಲಿ ವಾದಿಸಿತ್ತು. ನವದೆಹಲಿಯಲ್ಲಿರುವ ಜಾರಿ ನಿರ್ದೇಶನಾಲಯ ಕಚೇರಿಯಲ್ಲಿ ನಡೆದ ಮೂರನೇ ಸುತ್ತಿನ ವಿಚಾರಣೆಯ ಬಳಿಕ ಮಂಗಳವಾರ ರಾತ್ರಿ ಆರ್.ಕೆ ಆರೋರಾ ಅವರನ್ನು ಅಕ್ರಮ ಹಣವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿ ಬಂಧಿಸಲಾಗಿದೆ.
Jacqueline Fernandez : ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಪಟಿಯಾಲ ಹೌಸ್ ಕೋರ್ಟ್ ನಲ್ಲಿ ಸುಖೇಶ್ ಚಂದ್ರಶೇಖರ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸುಕೇಶ್ ವಿರುದ್ಧ ಜಾಕ್ವೆಲಿನ್ ಹಲವು ಆರೋಪಗಳನ್ನು ಮಾಡಿದರು.
Rakul Preet Singh in Drugs Case : ಕಳೆದ ವರ್ಷ ಬೆಂಗಳೂರು, ಮುಂಬೈ ಮತ್ತು ಹೈದರಾಬಾದ್ನಲ್ಲಿ ಡ್ರಗ್ಸ್ ಪ್ರಕರಣ ಎಷ್ಟು ಸಂಚಲನ ಮೂಡಿಸಿತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಇಡಿ ಹಲವು ಸ್ಟಾರ್ ನಟ - ನಟಿಯರು ಮತ್ತು ಅವರ ಕುಟುಂಬ ಸದಸ್ಯರಿಗೆ ನೋಟಿಸ್ ಜಾರಿ ಮಾಡಿದೆ ಎಂಬ ವರದಿಗಳಿವೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಈಗಾಗಲೇ ಸಮನ್ಸ್ ನೀಡಿರುವ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿಶೇಷ ಕೋರ್ಟ್ನಲ್ಲಿ ವಿಚಾರಣೆಗೆ ಹಾಜರಾಗಲಿದ್ದಾರೆ. ಆಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ.ಅಧಿಕಾರಿಗಳು ಇತ್ತೀಚೆಗಷ್ಟೇ ಚಾರ್ಜ್ಶೀಟ್ ಸಲ್ಲಿಸಿದ್ರು. ಅದರಂತೆ ಡಿ.ಕೆ.ಶಿವಕುಮಾರ್ ಸೇರಿ ಐವರಿಗೆ ನ್ಯಾಯಾಲಯವು ಸಮನ್ಸ್ ಜಾರಿ ಮಾಡಿತ್ತು. ಇಂದು ದೆಹಲಿಯ ರೋಸ್ ಅವೆನ್ಯೂ ಕೋರ್ಟ್ನಲ್ಲಿ ವಿಚಾರಣೆ ಆರಂಭವಾಗಲಿದೆ.
ಕಾರ್ತಿ ಅವರ ತಂದೆ ಪಿ ಚಿದಂಬರಂ ಅವರು ದೇಶದ ಗೃಹ ಸಚಿವರಾಗಿದ್ದಾಗ 2011 ರಲ್ಲಿ 263 ಚೈನೀಸ್ ಪ್ರಜೆಗಳಿಗೆ ವೀಸಾ ನೀಡಿಕೆಗೆ ಸಂಬಂಧಿಸಿದ ಹಗರಣದಲ್ಲಿ ಕಾರ್ತಿ ಮತ್ತು ಉಳಿದವರ ವಿರುದ್ಧ ಮನಿ ಲಾಂಡರಿಂಗ್ ಆರೋಪವನ್ನು ಇಡಿ ದಾಖಲಿಸಿದೆ.
ಸೇನಾ ಮೌತ್ ಪೀಸ್ ಸಾಮ್ನಾದಲ್ಲಿ ಪ್ರಕಟವಾದ ತಮ್ಮ ಸಾಪ್ತಾಹಿಕ ಅಂಕಣದಲ್ಲಿ ರಾವತ್, ನ್ಯಾಷನಲ್ ಹೆರಾಲ್ಡ್ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ನೆಹರೂ ಅವರು ಸೃಷ್ಟಿಸಿದ ಅಸ್ತ್ರವಿದ್ದಂತೆ ಹೊರತು ಆಸ್ತಿಯಲ್ಲ ಎಂದು ಆರೋಪಿಸಿದ್ದಾರೆ.
ರಾಹುಲ್ ಗಾಂಧಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ ರಾಹುಲ್ ಇಡಿ ಮುಂದೆ ಹಾಜರಾಗಲು ಸಮಯಾವಕಾಶ ಕೋರಿದ್ದಾರೆ. ಜೂನ್ 5 ರಂದು ದೇಶಕ್ಕೆ ಆಗಮಿಸುವ ಸಾಧ್ಯತೆಯಿದೆ.
ಬಿಜೆಪಿ ಪ್ರಧಾನ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಇರಾನಿ, ಕೇಜ್ರಿವಾಲ್ ಅವರು "ದೇಶ್ ಕಾ ಗದ್ದರ್ (ದೇಶದ್ರೋಹಿ), ಜೈನ್" ಗೆ ಎಷ್ಟು ದಿನ ಪ್ರೋತ್ಸಾಹ ನೀಡುವುದನ್ನು ಮುಂದುವರಿಸುತ್ತಾರೆ? ಎಂದು ಪ್ರಶ್ನಿಸಿದ್ದಾರೆ.
ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಬುಧವಾರ (ಜೂನ್ 1) ಜಾರಿ ನಿರ್ದೇಶನಾಲಯದ ವಶದಲ್ಲಿರುವ ಆರೋಗ್ಯ ಸಚಿವ ಮತ್ತು ಎಎಪಿ ನಾಯಕ ಸತ್ಯೇಂದ್ರ ಜೈನ್ ಅವರ ಬೆಂಬಲಕ್ಕೆ ಧಾವಿಸುತ್ತಾ ದೆಹಲಿಯಲ್ಲಿ ಮೊಹಲ್ಲಾ ಚಿಕಿತ್ಸಾ ಕೇಂದ್ರಗಳನ್ನು ಆರಂಭಿಸಿದ್ದಕ್ಕೆ ಅವರಿಗೆ ಪದ್ಮವಿಭೂಷಣ ಪ್ರಶಸ್ತಿಯನ್ನು ನೀಡಬೇಕೆಂದು ಹೇಳಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಹಣದ ಮೂಲ ಪತ್ತೆ ಮಾಡಬೇಕಾಗಿದ್ದು, 14 ದಿನಗಳ ಕಾಲ ಆರೋಪಿಯನ್ನು ಕಸ್ಟಡಿಗೆ ನೀಡುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನ್ಯಾಯಾಲಯದಲ್ಲಿ ಮನವಿ ಮಾಡಿಕೊಂಡಿದ್ದರು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಬಂಧಿಸಿದೆ. ಕೋಲ್ಕತ್ತಾ ಮೂಲದ ಕಂಪನಿಗೆ ಸಂಬಂಧಿಸಿದ ಹವಾಲಾ ವಹಿವಾಟು ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಉದ್ಯಮಿಗಳಿಗೆ 200 ಕೋಟಿ ರೂ ವಂಚನೆ ಮಾಡಿರುವ ಅರೋಪ ಎದುರಿಸುತ್ತಿರುವ ಸುಕೇಶ್ ಚಂದ್ರಶೇಖರ್ ಜೊತೆ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಡೇಟಿಂಗ್ ಮಾಡುತ್ತಿದ್ದರು ಎಂದು ಹೇಳಲಾಗಿತ್ತು.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಮುಂಬೈನ ವಿಶೇಷ ರಜಾ ನ್ಯಾಯಾಲಯ ಶನಿವಾರದಂದು14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ತಿಹಾರ್ ಜೈಲಿನಲ್ಲಿರುವ ಆರೋಪಿ ಸುಕೇಶ್ ಚಂದ್ರಶೇಖರ್, ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರಿಗೆ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ. ಇದಷ್ಟೇ ಅಲ್ಲ, ಮೂಲಗಳ ಪ್ರಕಾರ ಸುಕೇಶ್ ನೋರಾ ಫತೇಹಿಗೆ ಐಷಾರಾಮಿ ಕಾರನ್ನು ಉಡುಗೊರೆಯಾಗಿ ನೀಡಿದ್ದರು ಎಂಬ ಅಂಶ ಕೂಡಾ ಬೆಳೆಕಿಗೆ ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.