ಬೆಂಗಳೂರಲ್ಲಿ ಜಿಟಿಜಿಟಿ ಮಳೆಯಾಗುತ್ತಿದೆ. ಮೆಜೆಸ್ಟಿಕ್, ಬನಶಂಕರಿ, ಎಮ್ಜಿ ರಸ್ತೆ ಸೇರಿದಂತೆ ಹಲವೆಡೆ ಮಳೆಯಾಗಿದೆ. ಇನ್ನೂ ಎರಡು ದಿನ ಬೆಂಗಳೂರಲ್ಲಿ ಮಳೆ ಮುನ್ಸೂಚನೆ. ಮೋಡ ಕವಿದ ವಾತಾವರಣ ಹಾಗೂ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಬೆಂಗಳೂರು ಹವಾಮಾನ ಇಲಾಖೆ ವಿಜ್ಞಾನಿ ನೀಡಿದೆ. ಇನ್ನು ರಾಜ್ಯದಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಮುನ್ಸೂಚನೆ: ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇದೇ ವೇಳೆ ಐಎಂಡಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಿಸಿದೆ.
Monsoon 2022 - ವಾಯುವ್ಯ ಭಾರತದಾದ್ಯಂತ ಇರುವ ರಾಜ್ಯಗಳಲ್ಲಿ ತಾಪಮಾನದಲ್ಲಿ ಭಾರಿ ಏರಿಕೆಯಾಗಿದ್ದು, ಬಾರ್ಮರನಲ್ಲಿ 47.1 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ಈ ವರ್ಷ ದೇಶದಲ್ಲಿಯೇ ದಾಖಲಾದ ಅತ್ಯಧಿಕ ತಾಪಮಾನವಾಗಿದೆ. ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿಯೂ ಕೂಡ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
Monsoon 2022: ಮುಂದಿನ ವಾರ ಕೇರಳಕ್ಕೆ ಮುಂಗಾರು ಆಗಮಿಸುವ ನಿರೀಕ್ಷೆಯಿದೆ. ಮುಂದಿನ ವಾರ ಕೇರಳ ಮತ್ತು ಕರ್ನಾಟಕದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.