ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಚಾರಣೆಗೆ ಒಳಪಡಿಸಲು ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅನುಮತಿ ನೀಡಿರುವ ಕ್ರಮಕ್ಕೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಡಾ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಕ್ರಮ ಎದುರಿಸಲು ಸಜ್ಜಾಗಿದ್ದಾರೆ.ಈಗ ಪ್ರಮುಖ ಆರ್ಟಿಐ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಮೇರೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕಾನೂನು ಕ್ರಮಕ್ಕೆ ಅನುಮೋದನೆ ನೀಡಿದ್ದಾರೆ.
ರಾಜ್ಯಪಾಲರು ಸಾಮಾನ್ಯ ರಾಜಕಾರಣಿಯೋ ಅಥವಾ ಅಧಿಕಾರಿಯೋ ಅಲ್ಲ. ಸಂವಿಧಾನದ ಮುಖ್ಯಸ್ಥರು. ಅನೇಕ ಪ್ರಕರಣಗಳು ಅವರ ಕಚೇರಿಯಲ್ಲಿ ಬಾಕಿ ಉಳಿದು, ಯಾವುದಕ್ಕು ಗಮನ ಹರಿಸದೇ ಏಕಾಏಕಿ ಮುಖ್ಯಮಂತ್ರಿಯವರಿಗೆ ಶೋಕಾಸ್ ನೋಟಿಸ್ ನೀಡಿದ್ದಾರೆ ಎಂದು ಸಚಿವ ಜಿ. ಪರಮೇಶ್ವರ ಅವರು ಹೇಳಿದರು.
ಮೂಡಾ ಪ್ರಕರಣದಲ್ಲಿ ರಾಜ್ಯಪಾಲರು ನೀಡಿರುವ ನೋಟೀಸಿಗೆ ಈಗಾಗಲೇ ಉತ್ತರ ನೀಡಲಾಗಿದೆ . ಸರ್ಕಾರ ನೀಡಿರುವ ಉತ್ತರವನ್ನು ರಾಜಪಾಲರು ಒಪ್ಪಿಕೊಳ್ಳುತ್ತಾರೆ ಎನ್ನುವ ನಂಬಿಕೆಯಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.