ಮುಡಾದಿಂದ ಸಿಎಂ ಇನ್ನೂ ಮುಕ್ತ ಆಗಿಲ್ಲ. ಅದರ ಬೆನ್ನಲ್ಲೇ ಇದೀಗ ಮತ್ತೊಂದು ಆರೋಪ ಕೇಳಿ ಬಂದಿದೆ.ಗಣಿ ಗುತ್ತಿಗೆ ನೀಡುವ ವಿಚಾರದಲ್ಲಿ ಸಿಎಂ ಕಿಕ್ ಬ್ಯಾಕ್ ತೆಗೆದು ಕೊಂಡಿದ್ದಾರೆ ಹೀಗಾಗಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿ ಅಂತ ಸಾಮಾಜಿಕ ಕಾರ್ಯ ಕರ್ತರೊಬ್ಬರು ರಾಜ್ಯಪಾಲರಿಗೆ ದೂರು ಕೊಟ್ಟಿದ್ದಾರೆ.
ಗಣಿ ಗುತ್ತಿಗೆ ನವೀಕರಣದ ವಿಚಾರಕ್ಕೆ ಸಂಬಂಧಿಸಿದಂತೆ ಹಲವು ಗೊಂದಲಗಳನ್ನು ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಇಂತಹ ಅಪ ಪ್ರಚಾರಗಳು ನಾನು ಅಧಿಕಾರಕ್ಕೆ ಬಂದಾಗಿನಿಂದಲೂ ನಡೆದುಕೊಂಡು ಬರುತ್ತಿದೆ. ಕೆಲವು ದುಷ್ಟಶಕ್ತಿಗಳು ರಾಜಭವನವನ್ನು ತಪ್ಪು ದಾರಿಗೆಳೆಯುವ ಕೆಲಸವನ್ನು ನಿರಂತರವಾಗಿ ಮಾಡುತ್ತಿವೆ ಎಂದು ಮುಖ್ಯಮಂತ್ರಿಯವರು ತಿಳಿಸಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ತಪ್ಪದ ಮುಡಾ ಕೇಸ್ ಸಂಕಷ್ಟ
ಇಂದು CBI ತನಿಖೆ ಆದೇಶ ನಿರ್ಧರಿಸಲಿರುವ ಹೈಕೋರ್ಟ್
ಇಂದು ಧಾರವಾಡ ಹೈಕೋರ್ಟ್ ಪೀಠದಿಂದ ತೀರ್ಪು
ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನರಿಂದ ತೀರ್ಪು
ಇಂದು ಬೆಳಗ್ಗೆ 10:30ಕ್ಕೆ ಹೈಕೋರ್ಟ್‌ನಲ್ಲಿ ತೀರ್ಪು ಪ್ರಕಟ
ಜನವರಿ 27ರಂದು ನಡೆದಿದ್ದ ಅಂತಿಮ ವಿಚಾರಣೆ
ಇಡೀ ದಿನ ವಾದ-ಪ್ರತಿವಾದ ಆಲಿಸಿದ್ದ ನ್ಯಾಯಮೂರ್ತಿಗಳು
ಇಂದು ನಿರ್ಧಾರವಾಗಲಿದೆ ಸಿಎಂ ಸಿದ್ದರಾಮಯ್ಯ ಭವಿಷ್ಯ
ತಣ್ಣಗಾಗಿದ್ದ ಮುಡಾ ಪ್ರಕರಣಕ್ಕೆ ಇಡಿ ನೋಟೀಸ್ ಮೂಲಕ ಮತ್ತೆ ರಾಜಕೀಯ ಬಿರುಗಾಳಿಗೆ ವೇದಿಕೆ ಕಲ್ಪಿಸಿದೆ. ಸಿಎಂ ಪತ್ನಿ ಪಾರ್ವತಿ ಹಾಗೂ ಸಚಿವ ಭೈರತಿ ಸುರೇಶ್ ಗೆ ವಿವಾರಣೆಗೆ ಹಾಜರಾಗು ವಂತೆ ಜಾರಿ ನಿರ್ದೇಶನಾಲಯ ಸಮನ್ಸ್ ಜಾರಿ ಮಾಡಿದೆ. ಇದು ರಾಜ್ಯ ರಾಜಕೀಯಲ್ಲಿ ಭಾರೀ ಬಿರುಗಾಳಿ ಎಬ್ಬಿಸಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣ
ಸಿಎಂ ಪತ್ನಿ ಪಾರ್ವತಿಗೆ ಹೈಕೋರ್ಟ್ ಬಿಗ್ ರಿಲೀಫ್
ಇಂದಿನ ED ಸಮನ್ಸ್‌ಗೆ ತಡೆ ನೀಡಿದ ಹೈಕೋರ್ಟ್
ಹೈಕೋರ್ಟ್ ನ್ಯಾ.ನಾಗಪ್ರಸನ್ನಎ ಪೀಠ ಆದೇಶ
ಸಿದ್ದರಾಮಯ್ಯ, ಸಚಿವ ಬೈರತಿಗೂ ಟೆಂಪರರಿ ರಿಲೀಫ್
ಅರ್ಜಿ ವಿಚಾರಣೆ ಫೆಬ್ರವರಿ 10ಕ್ಕೆ ಮುಂದೂಡಿಕೆ
ಈ ಪ್ರಕರಣವು ಕರ್ನಾಟಕದ ಪ್ರಸ್ತುತ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿದ್ದು, ಪ್ರಮುಖವಾಗಿ ಅಕ್ರಮ ಹೂಡಿಕೆ ಮತ್ತು ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದೆ. ಜಪ್ತಿ ಪಡಿಸಿದ ಆಸ್ತಿಗಳು ವಿವಿಧ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟ್‌ಗಳ ಹೆಸರಿನಲ್ಲಿ ದಾಖಲಾಗಿದೆ.
ಮುಡಾ ವಿವಾದದ ಬೆನ್ನಲ್ಲೇ ಪ್ರತ್ಯೇಕ ಕಾಯ್ದೆ ರಚನೆ
ಬಿಡಿಎ ಮಾದರಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ
ಮುಡಾಗೆ ಪ್ರತ್ಯೇಕ ಕಾಯ್ದೆ ರಚನೆಗೆ ಸಂಪುಟ ಅಸ್ತು
ಮುಂದಿನ ವಾರ ಅಧಿವೇಶನದಲ್ಲಿ ವಿಧೇಯಕ ಮಂಡನೆ
MUDA Scam: ಇ.ಡಿಯವರು ತನಿಖೆ ನಡೆಸುತ್ತಿದ್ದಾರೆ. ಇವರು ತನಿಖೆ ನಡೆಸುತ್ತಿರುವುದೇ ಸರಿಯಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು. ಅದನ್ನು ಬಿಟ್ಟು ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕೇಳಿ ಬಂದಿರುವ ಮುಡಾ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 10ಕ್ಕೆ ನಿಗದಿಪಡಿಸಿದೆ. ಮೈಸೂರಿನ ಸಾಮಾಜಿಕ ಕಾರ್ಯಕರ್ತ ಹಾಗೂ ಪ್ರಕರಣದ ದೂರುದಾರ ಸ್ನೇಹಮಯಿ ಕೃಷ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಮಂಗವಾರ ನಡೆಸಿತು.
ʼಭಂಡ ಹಾಗೂ ಭ್ರಷ್ಟ ಮತ್ತು ವಲಸಿಗ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರೇ, ನೀವು ನಿಮ್ಮ ಹಿಂದಿನ ಅವಧಿಯಲ್ಲಿ ಬಲಿಷ್ಠ ಲೋಕಾಯುಕ್ತ ಸಂಸ್ಥೆಗೆ ಬೀಗ ಜಡಿದು ದುರ್ಬಲ ಎಸಿಬಿ ಸ್ಥಾಪಿಸಿದ್ದು ನೀವು ಪರಪ್ಪನ ಅಗ್ರಹಾರದ ಖಾಯಂ ನಿವಾಸಿಯಾಗುವುದನ್ನು ತಪ್ಪಿಸಿಕೊಳ್ಳಲು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯʼವೆಂದು ಬಿಜೆಪಿ ಟ್ವೀಟ್ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.