ಆಮ್ ಆದ್ಮಿ ಪಾರ್ಟಿ ಪಕ್ಷಬೇಧ ಮರೆತು ಹೋರಾಟಕ್ಕೆ ಬೆಂಬಲ ಕೊಡುತ್ತೇವೆ. ಯಾವುದೇ ಕಾರಣಕ್ಕೂ ಖಾಸಗಿಯವರಿಗೆ ಬಿಡಿಎ ಸ್ವತ್ತುಗಳನ್ನು ನೀಡಬಾರದು. ಗುತ್ತಿಗೆ ಹೆಸರಿನಲ್ಲಿ ಹಗಲು ದರೋಡೆ ಮಾಡ್ತಿದ್ದೀರಾ, ಸರ್ಕಾರ ಈಗಲೇ ಎಚ್ಚೆತ್ತು ಬೇಡಿಕೆಗಳನ್ನು ಪೂರೈಸಬೇಕು ಎಂದು ಆಗ್ರಹಿಸಿದರು.
Mukhyamantri Chandru on Darshan Case: ಹಣ ಸಿಗ್ತಿದ್ದಂತೆ ಮೂಲ ದರ್ಶನ್ ಕಳೆದುಹೋಗಿಬಿಟ್ಟ. ನೇಮು ಫೇಮು ಸಿಕ್ತಿದ್ದಂತೆ, ಫ್ಯಾನ್ಸ್ ಜಾಸ್ತಿಯಾಗಿದ್ದಂತೆ ಮೊದಲಿನ ದರ್ಶನ್ ವರ್ತನೆಯಲ್ಲಿ ಬದಲಾವಣೆಯಾಯಿತು. ಸಹವಾಸ ದೋಷವೂ ಇದಕ್ಕೆ ಮುಖ್ಯ ಕಾರಣ. ಆತ ಮನುಷ್ಯತ್ವವನ್ನು ಕಳೆದುಕೊಳ್ಳುತ್ತ ಹೋದ. ನಡವಳಿಕೆಯಲ್ಲಿ ವ್ಯತ್ಯಾಸ ಆಗ್ತಾ ಹೋಯ್ತು. ಮನುಷ್ಯನಾಗಿದ್ದಿದ್ದರೆ ಆತನಿಗೆ ಇಂತಹ ಸ್ಥಿತಿ ಬರುತ್ತಿರಲಿಲ್ಲವೆಂದು ಮುಖ್ಯಮಂತ್ರಿ ಚಂದ್ರು ಹೇಳಿದ್ದಾರೆ.
ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ದಮನಕಾರಿ ನೀತಿಯನ್ನು ವಿರೋಧಿಸಿ, ಆಮ್ ಆದ್ಮಿ ಪಕ್ಷದಿಂದ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಪ್ರತಿಭಟನೆ ನಡೆಸಿತು. ಈ ವೇಳೆ ಖಾಲಿ ಬಿಂದಿಗೆ, ಖಾಲಿ ಬಕೆಟ್ ಹಿಡಿದು ವಿನೂತನವಾಗಿ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು ನೂರು ದಿನ ಕಳೆದರೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ಒಂದು ರೂಪಾಯಿ ಅನುದಾನ ಬಿಡುಗಡೆ ಮಾಡದೆ ಅನ್ಯಾಯ ಎಸಗಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ.ಮುಖ್ಯಮಂತ್ರಿ ಚಂದ್ರು ಕಿಡಿಕಾರಿದರು.
ಕಾಂಗ್ರೆಸ್, ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ ಎಂದು ಆಮ್ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರ ಗುಡುಗಿದರು.
ಸಚಿವ ಸುನೀಲ್ ಕುಮಾರ್ರವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದಕ್ಕೆ ಆಮ್ ಆದ್ಮಿ ಪಾರ್ಟಿ ಮುಖಂಡ ಹಾಗೂ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ವಿರೋಧ ವ್ಯಕ್ತಪಡಿಸಿದ್ದು, ರಾಜಕೀಯೇತರ ವ್ಯಕ್ತಿಯನ್ನು ಅಧ್ಯಕ್ಷರನ್ನಾಗಿ ನೇಮಿಸಬೇಕು ಎಂದು ಆಗ್ರಹಿಸಿದರು.
ಆ ಬಳಿಕ ಮಾತನಾಡಿದ ಪೃಥ್ವಿ ರೆಡ್ಡಿ “ಮುಖ್ಯಮಂತ್ರಿ ಚಂದ್ರುರವರು ನಾಡು, ನುಡಿ, ಜಲಕ್ಕಾಗಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇವುಗಳ ರಕ್ಷಣೆಯು ನಮ್ಮ ಪಕ್ಷದ ಮೂಲ ಸಿದ್ಧಾಂತ ಕೂಡ ಆಗಿದೆ. ಭಾರತವು ರಾಜ್ಯಗಳ ಒಕ್ಕೂಟವಾಗಿದ್ದು, ಆಯಾ ರಾಜ್ಯಗಳಲ್ಲಿ ಆಯಾ ಭಾಷೆಗಳನ್ನು ಪ್ರೋತ್ಸಾಹಿಸುವ ಮೂಲಕ ಪ್ರಾದೇಶಿಕತೆಗೆ ಒತ್ತು ನೀಡಿ ರಾಷ್ಟ್ರದ ಸಮಗ್ರತೆ ಮತ್ತು ಐಕ್ಯತೆಯನ್ನು ಕಾಪಾಡುವುದೇ ಎಎಪಿಯ ಸ್ಪಷ್ಟ ನಿಲುವು.
1997ರಲ್ಲಿ ಆರಂಭವಾದ ಕಾಂಗ್ರೆಸ್ನೊಂದಿಗಿನ ಒಡನಾಟಕ್ಕೆ ಕಾಳಪ್ಪ ಅವರು ಫುಲ್ಸ್ಟಾಪ್ ಇಟ್ಟಿದ್ದು, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿಯವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.