ಉತ್ತರ ಪ್ರದೇಶದ ಪ್ರವಾಸೋದ್ಯಮ ಸಚಿವ ಜೈವೀರ್ ಸಿಂಗ್ ಸಮಾಜವಾದಿ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದು, ಎಸ್ಪಿ ನಾಯಕರು 'ರಾಮಚರಿತ್ಮಾನಸ್' ಕುರಿತು ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಹೇಳಿದ್ದಾರೆ. ವಿವಾದದ ಬಗ್ಗೆ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮೌನವನ್ನು ಅವರು ಪ್ರಶ್ನಿಸಿದ್ದಾರೆ.
ಸಮಾಜವಾದಿ ಪಕ್ಷದ ಸಂಸ್ಥಾಪಕ ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ. ತಮ್ಮ ಸ್ವಂತ ಬಲದ ಮೇಲೆ ರಾಜಕೀಯದಲ್ಲಿ ಉನ್ನತ ಹುದ್ದೆಗೇರಿದ ದೇಶದ ಹಿರಿಯ ತಳಮಟ್ಟದ ನಾಯಕರಾಗಿ ಮುಲಾಯಂ ಸಿಂಗ್ ಯಾದವ್ ದೊಡ್ಡ ಸಾಧನೆ ಮಾಡಿದ್ದಾರೆ.
ಸಮಾಜವಾದಿ ಪಕ್ಷದ ಮುಖ್ಯಸ್ಥ & ಉತ್ತರ ಪ್ರದೇಶ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ನಿಧನಕ್ಕೆ ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಸೇರಿ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
Mulayam Singh Yadav Health Update: ಗಂಭೀರ ಆರೋಗ್ಯ ಸ್ಥಿತಿ ಹಿನ್ನೆಲೆ ಗುರುಗ್ರಾಮ್ನ ಮೇದಾಂತ ಆಸ್ಪತ್ರೆಯಲ್ಲಿ ದಾಖಲಾಗಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ಅವರ ಸ್ಥಿತಿ ಹಠಾತ್ ಹದಗೆಟ್ಟಿದೆ. ಭಾನುವಾರ ಮಧ್ಯಾಹ್ನ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಅವರ ಸ್ಥಿತಿ ನೋಡಿದ ವೈದ್ಯರು ಕೂಡಲೇ ಅವರಿಗೆ ವೆಂಟಿಲೇಟರ್ಗೆ ಅಳವಡಿಸಿದ್ದಾರೆ. ಈ ಸಂದರ್ಭದಲ್ಲಿ ಅವರ ಸಹೋದರ ಶಿವಪಾಲ್ ಯಾದವ್ ಮತ್ತು ಪುತ್ರ ಪ್ರತೀಕ್ ಯಾದವ್ ಜೊತೆಗಿದ್ದರು. ಅಖಿಲೇಶ್ ಯಾದವ್ ಕೂಡ ತಂದೆಯ ಸ್ಥಿತಿ ತಿಳಿದ ತಕ್ಷಣ ಲಖನೌನಿಂದ ಗುರುಗ್ರಾಮಕ್ಕೆ ತೆರಳಿದ್ದಾರೆ.
1995 ರ ರಾಜ್ಯ ಅತಿಥಿಗೃಹದ ಘಟನೆಯಲ್ಲಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಮುಲಾಯಂ ಸಿಂಗ್ ಯಾದವ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಹಿಂಪಡೆಯಲು ಬಹುಜನ ಸಮಾಜ ಪಕ್ಷದ ಮುಖ್ಯಸ್ಥೆ ಮಾಯಾವತಿ ನಿರ್ಧರಿಸಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಾಜವಾದಿ ಪಕ್ಷ(ಎಸ್ಪಿ)ದ ವರಿಷ್ಠ ನಾಯಕ ಮುಲಾಯಂ ಸಿಂಗ್ ಯಾದವ್ ಮತ್ತು ಎಸ್ಪಿ ನಾಯಕ ಅಖಿಲೇಶ್ ಯಾದವ್ ಅವರಿಗ ಸಿಬಿಐ ಕ್ಲೀನ್ ಚಿಟ್ ನೀಡಿದೆ.
24 ವರ್ಷಗಳ ದ್ವೇಷವನ್ನುಮರೆತು ಇದೇ ಮೊದಲ ಬಾರಿಗೆ ವೇದಿಕೆಯಲ್ಲಿ ಕಾಣಿಸಿಕೊಂಡ ಮುಲಾಯಂ ಸಿಂಗ್ ಯಾದವ್, ಮಾಯಾವತಿ ಈ ಬಾರಿ ಮೈತ್ರಿಕೂಟದ ಮೂಲಕ ಉತ್ತರ ಪ್ರದೇಶದಲ್ಲಿ ಬಿಜೆಪಿ ಪ್ರಾಬಲ್ಯಕ್ಕೆ ಸವಾಲನ್ನೊಡ್ಡಿದ್ದಾರೆ.
ಲೋಕಸಭಾ ಚುನಾವಣೆಯಲ್ಲಿ ಉತ್ತರಪ್ರದೇಶದಲ್ಲಿ ಸಮಾಜವಾದಿ ಪಕ್ಷ(ಎಸ್ಪಿ) ಅಧಿಕ ಸ್ಥಾನಗಳನ್ನು ವಶಪಡಿಸಿಕೊಳ್ಳಲಿದೆ ಎಂದು ಮುಲಾಯಂ ಸಿಂಗ್ ಯಾದವ್ ಹೇಳಿದ್ದಾರೆ. ಮುಲಾಯಂ ಸಿಂಗ್ ಯಾದವ್ 1996, 2004, 2009 ಮತ್ತು 2014 ರಲ್ಲಿ ಮೇನ್ಪುರಿ ಕ್ಷೇತ್ರದ ಚುನಾವಣೆಯಲ್ಲಿ ಗೆದ್ದಿದ್ದಾರೆ.
ಏಪ್ರಿಲ್-ಮೇ ತಿಂಗಳಿನಲ್ಲಿ ಒಟ್ಟು 7 ಹಂತಗಳಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಗೂ ಮುನ್ನ ಅಖಿಲೇಶ್ ಯಾದವ್ ಮತ್ತು ಮಾಯಾವತಿ ಜಂಟಿಯಾಗಿ 11 ರ್ಯಾಲಿಗಳಲ್ಲಿ ಭಾಗವಹಿಸಲಿದ್ದು, ಎಸ್ಪಿ-ಬಿಎಸ್ಪಿ-ಆರ್ಎಡಿ ಮೈತ್ರಿ ಬೆಂಬಲಿಸುವಂತೆ ಮತದಾರರನ್ನು ಮನವಿ ಮಾಡಲಿದ್ದಾರೆ.
ಪ್ರಸಕ್ತ ಲೋಕಸಭೆಯ ಕೊನೆಯ ಅಧಿವೇಶನದ ಕೊನೆಯ ದಿನವಾದ ಇಂದು ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಹೊಗಳುವ ಮೂಲಕ ಎಲ್ಲರನ್ನು ಒಂದು ಕ್ಷಣ ಅಚ್ಚರಿಗೊಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.