ಸಿದ್ದರಾಮಯ್ಯನವರೇ ಹಿಜಾಬ್ ಧರಿಸುವುದು ಮೂಲಭೂತ ಹಕ್ಕು ಎಂದಿದ್ದೀರಿ. ಈಗ ಹಿಜಾಬ್ ಪ್ರತಿಭಟನೆಗೆ ಆಯುಧ ಸಮೇತ ಬಂದು ಸಿಕ್ಕಿ ಬಿದ್ದವರ ಬಗ್ಗೆ ಏನು ಹೇಳುತ್ತೀರಿ? ಅಂತಾ ಬಿಜೆಪಿ ಪ್ರಶ್ನಿಸಿದೆ.
ನಮ್ಮದು ಸ್ವತಂತ್ರ ದೇಶ, ಸಂವಿಧಾನ ನಮಗೆ ನಮ್ಮ ಸಂಸ್ಕೃತಿ, ಸಂಪ್ರದಾಯಗಳನ್ನುಕಾಪಾಡುವ ಹಕ್ಕುಗಳನ್ನು ನೀಡಿದೆ. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಜನರಿಗೆ ತಮ್ಮಿಷ್ಟದ ಉಡುಗೆ ತೊಡುವ ಸ್ವಾತಂತ್ರ್ಯ ನೀಡಿದ್ದಾರೆ ಅಂತಾ ಕಾಂಗ್ರೆಸ್ ಶಾಸಕಿ ಕನೀಝ್ ಫಾತಿಮಾ ಹೇಳಿದ್ದಾರೆ.
ಒಡೆದು ಅಳುವ ನೀತಿ ಕಾಂಗ್ರೆಸ್ ಪಕ್ಷದ ನಾಯಕರಿಗೆ ಬ್ರಿಟಿಷರಿಂದ ಬಂದ ಬಳುವಳಿ. ಧರ್ಮಗಳ ಮಧ್ಯೆ, ಜಾತಿಗಳ ಮಧ್ಯೆ, ಒಡೆದು ಹಾಕುವ ಕಾಂಗ್ರೆಸ್ ಆಟ ನಡೆಯಲ್ಲ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಶಾಲೆಗಳಲ್ಲಿ ಸಮವಸ್ತ್ರ ಕಡ್ಡಾಯಗೊಳಿಸುವ ಯಾವ ಕಾನೂನು ಕೂಡ ಇಲ್ಲ. ಹೀಗಿರುವಾಗ ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಕಾಲೇಜು ಪ್ರವೇಶ ನಿರಾಕರಿಸುವುದು ಅವರ ಮೂಲಭೂತ ಹಕ್ಕಿನ ಉಲ್ಲಂಘನೆ ಅಂತಾ ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.