Samantha viral post: ತಮ್ಮ ಮಾಜಿ ಪತಿ ನಾಗ ಚೈತನ್ಯ ಮತ್ತು ಸೋಭಿತಾ ಧೂಳಿಪಾಲ ಅವರ ವಿವಾಹಕ್ಕೂ ಮುನ್ನ ಸಮಂತಾ ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕವನವೊಂದನ್ನು ಹಂಚಿಕೊಂಡಿದ್ದಾರೆ. ಸದ್ಯ ಈ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.
ನಟ ನಾಗ ಚೈತನ್ಯ ನಾಯಕನಾಗಿ ನಟಿಸಿರುವ ಸೂಪರ್ ಹಿಟ್ ಸಿನಿಮಾ ʼಎಮ್ ಮಾಯೇ ಚೇಸಾವೇʼ ಸಿನಿಮಾ ಬಿಡುಗಡೆಯಾಗಿ 13 ವರ್ಷಗಳಾಗಿವೆ. ಈ ಚಿತ್ರವನ್ನು ಗೌತಮ್ ವಾಸುದೇವ ಮೆನನ್ ನಿರ್ದೇಶಿಸಿದ್ದರು. ಈ ಸಿನಿಮಾದಲ್ಲಿ ಜೆಸ್ಸಿಯಾಗಿ ಸಮಂತಾ ಮತ್ತು ಕಾರ್ತಿಕ್ ಪಾತ್ರದಲ್ಲಿ ನಾಗ ಚೈತನ್ಯ ನಟಿಸಿದ್ದಾರೆ. ನಾಗ ಚೈತನ್ಯ ಈ ಸಿನಿಮಾದಲ್ಲಿ ತನಗಿಂತ ಎರಡು ವರ್ಷ ದೊಡ್ಡ ಹುಡುಗಿಯನ್ನು ಪ್ರೀತಿಸುವ ವ್ಯಕ್ತಿಯಾಗಿ ಕಾಣಿಸಿಕೊಂಡಿದ್ದರು. ಇವರಿಬ್ಬರು ಯಾವ ಕ್ಷಣದಲ್ಲಿ ಜೊತೆಯಾಗಿ ಈ ಸಿನಿಮಾ ಮಾಡಿದ್ರೋ ಗೊತ್ತಿಲ್ಲ ಆ ನಂತರ ಇಬ್ಬರ ನಡುವೆ ಪ್ರೀತಿ ಹುಟ್ಟಿತ್ತು. ಹಿರಿಯರನ್ನು ಒಪ್ಪಿಸಿ ಮದುವೆ ಕೂಡ ಆಗಿದ್ರು.
ಸಾಲು ಸಾಲು ಸಮಸ್ಯೆಗಳ ಬಳಿಕ ಟಾಲಿವುಡ್ ಸ್ಟಾರ್ ನಟ ನಾಗ ಚೈತನ್ಯ ಅವರು ಸಾಮಾಜಿಕ ಜಾಲತಾಣಗಳಿಂದ ದೂರ ಉಳಿದಿದ್ದಾರೆ. ಆಗಾಗ ಇಂಟರ್ನೆಟ್ಗೆ ಬರುವ ಅವರು, ತಮ್ಮ ಸಿನಿಮಾಗಳ ಬಗ್ಗೆ ಟ್ವೀಟ್ ಅಥವಾ ಪೋಸ್ಟ್ ಮಾಡಿ ತಮ್ಮ ಅಭಿಮಾನಿಗಳ ಜೊತೆ ಮಾಹಿತಿ ಹಂಚಿಕೊಳ್ಳುತ್ತಾರೆ. ಇದೀಗ ನಟ ವೆಂಕಟೇಶ್ ದಗ್ಗುಬಾಟಿ ಅವರ ಮಗಳ ಜೊತೆ ಚೈತನ್ಯ ಕಾಣಿಸಿಕೊಂಡಿದ್ದು, ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.