ಹಾಲಿನ ಪ್ರೋತ್ಸಾಹ ಧನ ಲೀಟರ್ ಗೆ 1.50 ರೂ.ದಷ್ಟು ಕಡಿತ ಮಾಡಲು ಈಗ ಬೆಂಗಳೂರು ಜಿಲ್ಲಾ ಸಹಕಾರ ಹಾಲು ಒಕ್ಕೂಟ ಆದೇಶ ಹೊರಡಿಸಿದೆ.ಈ ಪರಿಷ್ಕೃತ ಆದೇಶ ಜೂನ್ 1 ರಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.
ಕರ್ನಾಟಕದ ಬ್ಯಾಂಕುಗಳನ್ನು ನುಂಗಿ ನೀರು ಕುಡಿದು ಆಗಿದೆ. ಈಗ ನಮ್ಮ ಹೆಮ್ಮೆಯ ನಂದಿನಿ ಸಂಸ್ಥೆ ನುಂಗಲು ಹೊರಟಿದ್ದಾರೆ ಎಂದು ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅವರು ಕೋಲಾರದ ಜೈ ಭಾರತ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು
Nandini vs Amul row: ಬೇರೆ ಬ್ರಾಂಡ್ ಹಾಲುಗಳಿಗೆ ಇಲ್ಲದ ವಿರೋಧ ಅಮೂಲ್‌ಗೆ ಏಕೆ ಎಂದು ಮೂಢ ಬಿಜೆಪಿಗರು ಜಾಣಕುರುಡರಂತೆ ಪ್ರಶ್ನಿಸುತ್ತಿದ್ದಾರೆ. ಬೇರೆ ಬ್ರಾಂಡ್‌ಗಳಿಗೆ ಅಮಿತ್ ಶಾ ಕೃಪಾಕಟಾಕ್ಷ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
Karnataka Election 2023: ನಂದಿನಿಯನ್ನು ಮುಳುಗಿಸುವ ಷಡ್ಯಂತ್ರ ನಡೆದರೂ ಸಮರ್ಥನೆ, ಹಿಂದಿ ಹೇರಿಕೆಗೂ ಸಮರ್ಥನೆ. ಸಿಟಿ ರವಿ ಅವರೇ, ಮಹಾರಾಷ್ಟ್ರ ಕರ್ನಾಟಕದ ನೆಲವನ್ನು ಕಬಳಿಸುವ ಸಂಚಿನ ಬಗ್ಗೆ ಏಕೆ ಮೌನ? ಅದನ್ನೂ ಸಮರ್ಥಿಸಿಕೊಳ್ಳಿ ಎಂದು ಕಾಂಗ್ರೆಸ್ ಕುಟುಕಿದೆ.
ಹಿಂದಿ ಹೇರಿಕೆಗೆ ಕನ್ನಡಿಗರ ವಿರೋಧವಿದೆ ಎಂದು ಗೊತ್ತಿದ್ದರೂ ನಂದಿನಿ ಪ್ರೋ ಬಯೊಟಿಕ್ ಮೊಸರು ಪಾಕೆಟ್ ಮೇಲೆ ಹಿಂದಿಯ 'ದಹಿ' ಎಂದು ಮುದ್ರಿಸಿರುವುದು, ಅದನ್ನು ಕಡ್ಡಾಯವಾಗಿ ಮುದ್ರಿಸುವಂತೆ ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರವು ಕೆಎಂಎಫ್ ಗೆ ಆದೇಶ ನೀಡಿರುವುದು ತಪ್ಪು. ಇದನ್ನು ಒಪ್ಪಲು ಸಾಧ್ಯವಿಲ್ಲ- ಹೆಚ್.ಡಿ. ಕುಮಾರಸ್ವಾಮಿ
Stop Hindi Imposition: ನಂದಿನಿ ಕನ್ನಡಿಗರ ಆಸ್ತಿ, ಕನ್ನಡಿಗರ ಅಸ್ಮಿತೆ ಹಾಗೂ ಕನ್ನಡಿಗರ ಜೀವನಾಡಿ. ಇದು ಗೊತ್ತಿದ್ದರೂ ಹಿಂದಿ ಹೇರಿಕೆಯ ಅಹಂ ತೋರಲಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ದೇಶದಲ್ಲಿ ಬಿಜೆಪಿ ಪಕ್ಷ ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಕಾರ್ಯಕರ್ತರು ಮಾಜಿ ಶಾಸಕ ಕೆ ಪಿ ಬಚ್ಚೇಗೌಡ ನೇತೃತ್ವದಲ್ಲಿ ಚಿಕ್ಕಬಳ್ಳಾಪುರ ನಗರದ ಬಿಬಿ ರಸ್ತೆಯಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ ನಂದಿನಿ ಸಂಸ್ಥೆಯನ್ನು ಗುಜರಾತ್‌ನ ಅಮೂಲ್ ಸಂಸ್ಥೆ ಜೊತೆ ವೀಲೀನಗೊಳಿಸುವ ಹುನ್ನಾರ ಕೂಡಲೇ ನಿಲ್ಲಿಸಬೇಕು ಎಂದು ಆಗ್ರಹಿಸಿದ್ರು.
ನಂದಿನಿ ಹಾಲು ಮತ್ತು ಮೊಸರಿನ ದರವನ್ನು ಹೆಚ್ಚಳ ಮಾಡಲಾಗಿದೆ. ಕೆಎಂ ಎಫ್ ಆಡಳಿತ ಮಂಡಳಿ ನಡೆದ ಸಭೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ. ನೂತನ ದರ ಇಂದು ಮಧ್ಯರಾತ್ರಿಯಿಂದಲೇ ಜಾರಿಗೆ ಬರಲಿದೆ.
2022ರ ಆಗಸ್ಟ್ 22 ರಂದು 450 ರೂ.ಗೆ ಮಾರಾಟವಾಗಿದ್ದ ಒಂದು ಲೀಟರ್ ನಂದಿನಿ ತುಪ್ಪ ಈಗ ಲೀಟರ್‌ಗೆ 630 ರೂ.ಗೆ ಮಾರಾಟವಾಗುತ್ತಿದೆ. ಹಬ್ಬದ ಋತು ಆರಂಭವಾಗುವ ಪೂರ್ವದಲ್ಲಿ ಒಂದು ಲೀಟರ್ ತುಪ್ಪ 450 ರೂ.ಗೆ ಮಾರಾಟ ಮಾಡಲಾಗಿತ್ತು. ಹಬ್ಬದ ಋತುವಿನಲ್ಲಿ ಕೆಎಂಎಫ್ ನಿಯಮಿತವಾಗಿ ತುಪ್ಪದ ಬೆಲೆ ಏರಿಕೆಯನ್ನು ಪ್ರಾರಂಭಿಸಿತು.
ನಂದಿನಿ ಮೊಸರು, ಲಸ್ಸಿ ಮತ್ತು ಮಜ್ಜಿಗೆ ದರಗಳನ್ನು ನಿನ್ನೆ ಸಂಜೆ ಮತ್ತೆ ಪರಿಷ್ಕರಿಸಲಾಗಿದೆ. ಈ ಎಲ್ಲ ಹಾಲಿನ ಉತ್ಪನ್ನಗಳ ದರವನ್ನು 50 ಪೈಸೆಯಿಂದ ₹1.50ರಷ್ಟು ಕಡಿಮೆ ಮಾಡಲಾಗಿದೆ. ಭಾನುವಾರ ಈ ಉತ್ಪನ್ನಗಳ ದರಗಳನ್ನು ₹1ರಿಂದ ₹3ರಷ್ಟು ಹೆಚ್ಚಿಸಲಾಗಿತ್ತು. ಗ್ರಾಹಕರಿಂದ ಬೆಲೆ ಏರಿಕೆಗೆ ಅಸಮಾಧಾನ ವ್ಯಕ್ತವಾಗಿದ್ದರಿಂದ ಕೆಎಂಎಫ್ ಈ ಕ್ರಮ ಕೈಗೊಂಡಿದೆ.
ದಕ್ಷಿಣ ಆಫ್ರಿಕದಲ್ಲಿ ನಡೆಯುತ್ತಿದ್ದ ರೋಡೀಸ್ ಸೀಸನ್ 18 ಕೊನೆಗೊಂಡಿದೆ. ರೋಡೀಸ್ ಅತ್ಯಂತ ಜನಪ್ರಿಯ ರಿಯಾಲಿಟಿ ಶೋಗಳಲ್ಲಿ ಒಂದಾಗಿದೆ. ಡೇರ್‌ಡೆವಿಲ್ ಸ್ಟಂಟ್‌ಗಳಿಂದ ಯುವಜನರ ಗಮನವನ್ನು ಈ ಶೋ ಸೆಳೆದಿದೆ.