ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಕೊಲೆ ಮಾಡಲು ಬಳಸಿದ ಆಯುಧವನ್ನು ಪತ್ತೆ ಹಚ್ಚಲು ಅರೇಬಿಯನ್ ಸಮುದ್ರದ ಆಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲು ಮಹಾರಾಷ್ಟ್ರದ ಪರಿಸರ ಸಚಿವಾಲಯದಿಂದ ಅನುಮತಿ ಸಿಕ್ಕಿದೆ ಎಂದು ಕೇಂದ್ರ ತನಿಖಾ ದಳ (ಸಿಬಿಐ) ಶುಕ್ರವಾರ ಪುಣೆ ನ್ಯಾಯಾಲಯಕ್ಕೆ ತಿಳಿಸಿದೆ.
ವಿಚಾರವಾದಿಗಳಾದ ನರೇಂದ್ರ ದಾಭೋಲ್ಕರ್, ಗೋವಿಂದ್ ಪನ್ಸಾರೆ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ಬಂಧಿಸಲ್ಪಟ್ಟ ವ್ಯಕ್ತಿ ಇದರ ಹಿಂದಿನ ಸಿದ್ಧತೆಗಳು ಮತ್ತು ಪಿತೂರಿಗಳ ಬಗ್ಗೆ ನಿಖರವಾದ ವಿವರ ನೀಡಿದ್ದಾರೆ ಎಂದು ಎನ್ಡಿಟಿವಿ ವರದಿ ಮಾಡಿದೆ.
ಆರು ವರ್ಷಗಳ ಹಿಂದೆ ಪುಣೆಯಲ್ಲಿ ವಿಚಾರವಾದಿ ನರೇಂದ್ರ ದಾಭೋಲ್ಕರ್ ಅವರನ್ನು ಹತ್ಯೆ ಮಾಡಿದ ಆರೋಪಿ ಕರ್ನಾಟಕ ಪೊಲೀಸರಿಗೆ ತಪ್ಪೊಪ್ಪಿಕೊಂಡಿದ್ದಾನೆ ಎಂದು ಎನ್ಡಿಟಿವಿ ವರದಿ ಮಾಡಿದೆ. ತಪ್ಪೊಪ್ಪಿಕೊಂಡಿರುವ ವ್ಯಕ್ತಿಯನ್ನು 67ವರ್ಷದ ಶರದ್ ಕಲಾಸ್ಕರ್ ಎಂದು ಗುರುತಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.