ದೆಹಲಿ ಮೆಟ್ರೋ ಹಂತ-4 ರ ರಿಥಾಲಾ-ನರೇಲಾ-ಕುಂಡ್ಲಿ ಕಾರಿಡಾರ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಜೂನ್ನಲ್ಲಿ ಮೂರನೇ ಬಾರಿಗೆ ಸರ್ಕಾರ ರಚಿಸಿದ ನಂತರ ಮೂಲಸೌಕರ್ಯಗಳ ಮೇಲೆ ವಿಶೇಷ ಗಮನ ಹರಿಸಲಾಗಿದೆ. 9.5 ಕೋಟಿ ರೂಪಾಯಿ ಮೌಲ್ಯದ ನಿರ್ಧಾರಗಳನ್ನು ಸರ್ಕಾರ ಮಾಡಿದೆ.
ಪ್ರಧಾನಿ ಮೋದಿಗೆ ನೈಜೀರಿಯಾದ ಎರಡನೇ ಅತ್ಯುನ್ನತ ನಾಗರಿಕ ಗೌರವ
‘ದಿ ಗ್ರ್ಯಾಂಡ್ ಕಮಾಂಡರ್ ಆಫ್ ದಿ ಆರ್ಡರ್ ಆಫ್ ದಿ ನೈಜರ್’ ಪ್ರಶಸ್ತಿ
ನೈಜೀರಿಯಾ ಅಧ್ಯಕ್ಷ ಬೋಲಾ ಅಹ್ಮದ್ ತಿನುಡು ಅವರಿಂದ ಪ್ರಶಸ್ತಿ ಪ್ರದಾನ
ನಮೋಗೆ ಈ ಗೌರವ ಪಡೆದ ಎರಡನೇ ವಿದೇಶಿ ಗಣ್ಯ ವ್ಯಕ್ತಿ ಎಂಬ ಹೆಗ್ಗಳಿಕೆ
ಇತ್ತೀಚೆಗಷ್ಟೇ ಬಿಡುಗಡೆಯಾದ ‘ಸಾಬರಮತಿ ವರದಿ’ ಸಿನಿಮಾವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಸಿನಿಮಾ ಬಗ್ಗೆ ಟ್ವೀಟ್ ಮಾಡಿರುವ ಮೋದಿ, ಈ ಸತ್ಯ ಹೊರಬರುತ್ತಿರುವುದು ಸಂತಸ ತಂದಿದೆ ಎಂದು ಹೇಳಿದ್ದಾರೆ. "ಚೆನ್ನಾಗಿ ಹೇಳಿದ್ದೀರಿ. ಈ ಸತ್ಯ ಹೊರಬರುವುದು ಒಳ್ಳೆಯದು, ಮತ್ತು ಸಾಮಾನ್ಯ ಜನರು ಅದನ್ನು ನೋಡುವ ರೀತಿಯಲ್ಲಿ ಸತ್ಯ ಹೊರಬರುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಮಹಾರಾಷ್ಟ್ರದ ಎಲೆಕ್ಷನ್ ವೇಳೆ ಕರ್ನಾಟಕ ಸರ್ಕಾರದ ಮೇಲೆ ಮಾಡಿರೋ ಆರೋಪಕ್ಕೆ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.. ಮೋದಿ ಮಾಡಿರೋ ಆರೋಪಕ್ಕೆ ಸಾಬೀತು ಮಾಡಲಿ ಅಂತಾ ಸವಾಲೆಸೆದಿದ್ದಾರೆ. ಅಷ್ಟಕ್ಕೂ ಪ್ರಧಾನಿ ಮೋದಿ ಮಾಡಿರೋ ಆರೋಪ ಏನು..? ಕಾಂಗ್ರೆಸ್ ನಾಯಕರು ಕೊಟ್ಟಿರೋ ತಿರುಗೇಟೇನು.? ಇಲ್ಲಿದೆ ನೋಡಿ..
US Election Results Donald Trump : 2024 ರ ಯುಎಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ರಿಪಬ್ಲಿಕನ್ ಅಭ್ಯರ್ಥಿ ಡೊನಾಲ್ಡ್ ಟ್ರಂಪ್ (Donald Trump) ಅವರು 60 ಮಿಲಿಯನ್ ಮತಗಳೊಂದಿಗೆ ಭರ್ಜರಿ ಜಯ ಸಾಧಿಸಿ, ಯುನೈಟೆಡ್ ಸ್ಟೇಟ್ಸ್ ಆಫ್ ಅಮೇರಿಕಾದ 47ನೇ ಅಧ್ಯಕ್ಷರಾಗಿ ಆಯ್ಕೆಯಾದ ಬೆನ್ನಲ್ಲೆ ಪ್ರಧಾನಿ ನರೇಂದ್ರ ಮೋದಿ ಅವರು ಅಭಿನಂದಿಸಿದರು.
Prime Minister Narendra Modi: ಪ್ರಧಾನಿ ನರೇಂದ್ರ ಮೋದಿ ಅವರು ಸಹ ಸಂತಾಪ ಸೂಚಿಸಿದ್ದು ಪತ್ರ ಬರೆದಿದ್ದಾರೆ. ಈ ಪತ್ರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಾಕಿಕೊಂಡಿರುವ ಕಿಚ್ಚ, "ನಿಮ್ಮ ಸಾಂತ್ವಾನವು ನನ್ನ ಹೃದಯ ತಟ್ಟಿದೆ" ಎಂದು ಬರೆದುಕೊಂಡಿದ್ದಾರೆ.
Channapatna Assembly By-Election: ಮೈತ್ರಿ, ಒಗ್ಗಟ್ಟನ್ನು ಬದಿಗೆ ಸರಿಸಿ ಯೋಗೇಶ್ವರ್ ಕಾಂಗ್ರೆಸ್ಗೆ ಸೇರಿರುವುದರಿಂದ ಅವರ ರಾಜಕೀಯ ಭವಿಷ್ಯ ಹಾಳಾಗಿದೆ. ಎನ್ಡಿಎದಲ್ಲಿ ಯೋಗೇಶ್ವರ್ ಅವರಿಗೆ ಹಿರಿತನವಿತ್ತು. ಈಗ ಕಾಂಗ್ರೆಸ್ಗೆ ಸೇರಿ ಕೊನೆಯ ಸಾಲಿನಲ್ಲಿ ನಿಂತಿದ್ದಾರೆಂದು ಆರ್.ಅಶೋಕ್ ಹೇಳಿದ್ದಾರೆ.
ಆರ್ಥಿಕವಾಗಿ ಸ್ವಾಯತ್ತ ಸಾಧಿಸುತ್ತಿರುವ ಭಾರತವನ್ನು ದುರ್ಬಲಗೊಳಿಸಲು ಅಂತಾರಾಷ್ಟ್ರೀಯ ಮಟ್ಟದ ಸಂಚು ನಡೆಸಲಾಗುತ್ತಿದ್ದು, ಈ ಸಂಚಿನಲ್ಲಿ ಕಾಂಗ್ರೆಸ್ ಭಾಗಿಯಾಗಿದೆ ಎಂದು ಪ್ರಧಾನಿ ಮೋದಿ ಗಂಭೀರ ಆರೋಪ ಮಾಡಿದ್ದಾರೆ.
MUDA Scam: ಬಡವರ ಮಕ್ಕಳ ವಸತಿ ಶಾಲೆ ನಿರ್ಮಾಣಕ್ಕಾಗಿ ಭೂಮಿಯನ್ನು ಡಿ-ನೋಟಿಫಿಕೇಷನ್ ಮಾಡಿಸಿಕೊಂಡು, ಅದನ್ನು ಸಿದ್ದರಾಮಯ್ಯನವರು ಪಡೆದುಕೊಂಡಿದ್ದಾರೆ. ಈ ಪ್ರಕರಣದಲ್ಲಿಯೂ ಸಿದ್ದರಾಮಯ್ಯ ಮೊದಲ ಆರೋಪಿ ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
HD Kumaraswamy vs IGP M Chandrashekhar: ಗಂಗೇನಹಳ್ಳಿ ಡಿ-ನೋಟಿಫಿಕೇಷನ್ ಪ್ರಕರಣ ಸಂಬಂಧ ಮಾಜಿ ಸಿಎಂ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರು ಶುಕ್ರವಾರ(ಸೆ.27) ಸಂಜೆ ದೆಹಲಿಯಿಂದ ಬಂದು ಬೆಂಗಳೂರಿನಲ್ಲಿ ಲೋಕಾಯುಕ್ತ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಶನಿವಾರ(ಸೆ.28) ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಕುಮಾರಸ್ವಾಮಿಯವರು, ಹಾಲಿ ಲೋಕಾಯುಕ್ತ ಐಜಿಪಿಯಾಗಿರುವ ಐಪಿಎಸ್ ಅಧಿಕಾರಿ ಎಂ.ಚಂದ್ರಶೇಖರ್ ವಿರುದ್ಧ ಬಹಿರಂಗವಾಗಿಯೇ ಭ್ರಷ್ಟಾಚಾರದ ಆರೋಪ ಮಾಡಿದ್ದರು.
ಬಿಜೆಪಿಯ ರಕ್ತದಲ್ಲಿ ಹೇಗೆ ಕೋಮುವಾದ ಸೇರಿಕೊಂಡಿದೆಯೋ, ಅದೇ ರೀತಿ ಅಂತರ್ಕಲಹವೂ ಸೇರಿಕೊಂಡಿದೆ. ಇತ್ತೀಚಿನ ದಿನಗಳಲ್ಲಿ ಕರ್ನಾಟಕದ ಬಿಜೆಪಿ ನಾಯಕರು ಪರಸ್ಪರ ಕೆಸರೆರಚಾಟ ಮಾಡಿಕೊಳ್ಳದ ದಿನವೇ ಸಿಗಲಾರದು. ಪ್ರತಿನಿತ್ಯ ಬಿಜೆಪಿ ನಾಯಕರು ಆರೋಪ - ಪ್ರತ್ಯಾರೋಪ, ಪರಸ್ಪರ ದೂಷಣೆ - ನಿಂದನೆಯ ಧಾರವಾಹಿ ಮೂಲಕ ಜನರನ್ನು ರಂಜಿಸುತ್ತಿದ್ದಾರೆ ಎಂದಿದ್ದಾರೆ.
Haryana Assembly Elections 2024: ಹರಿಯಾಣ ಚುನಾವಣೆಗೂ ಮುನ್ನ ಪ್ರಣಾಳಿಕೆ ಘೋಷಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯದ ಜನರಿಗೆ 7 ಭರವಸೆಗಳನ್ನು ನೀಡಿದೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಉದಯಭಾನ್ ಮಾತನಾಡಿ, ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದರೆ 500 ರೂ.ಗೆ ಗ್ಯಾಸ್ ಸಿಲಿಂಡರ್ ಮತ್ತು 300 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದು ಹೇಳಿದ್ದಾರೆ.
Trump Bold Immigration Plan: ಅಮೆರಿಕದಲ್ಲಿ ನಡೆಯಲಿರುವ ಅಧ್ಯಕ್ಷೀಯ ಚುನಾವಣೆಯಲ್ಲಿ ಡೊನಾಲ್ಡ್ ಟ್ರಂಪ್ಗೆ ಗೆಲುವಿನ ವಿಶ್ವಾಸವಿದೆ. ಹೀಗಿರುವಾಗ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಅಮೆರಿಕದ ಅಧಿಕಾರ ವಹಿಸಿಕೊಂಡರೆ ಅದರಿಂದ ಭಾರತಕ್ಕೆ ಆಗುವ ಲಾಭವೇನು, ವಲಸೆಗೆ ಸಂಬಂಧಿಸಿದಂತೆ ಅವರ ಅಜೆಂಡಾ ಏನು ಎಂಬ ಚರ್ಚೆಗಳು ಎಲ್ಲೆಡೆ ನಡೆಯುತ್ತಿವೆ.
ಇಂದು ಸುಪ್ರಿಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರ ನಿವಾಸದಲ್ಲಿ ಗಣಪತಿ ಪೂಜೆಯಲ್ಲಿ ಪಾಲ್ಗೊಂಡರು. ಇದೇ ಸಂದರ್ಭದಲ್ಲಿ ಪ್ರಧಾನಿ ಮೋದಿ ಗಣಪತಿಗೆ ಆರತಿ ಮಾಡಿದರು. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಸಾಂಪ್ರದಾಯಿಕ ಮರಾಠಿ ಬಿಳಿ ಟೋಪಿ ಧರಿಸಿ ಕಾಣಿಸಿಕೊಂಡರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.