ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜುಲೈ 21 ರಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್ ನೀಡಿದೆ. ಈ ಹಿಂದೆ ಸೋನಿಯಾ ಅವರಿಗೆ ಜುಲೈ 22ಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಲಾಗಿತ್ತು.
ತಪ್ಪು ಮಾಡದವರು ಯಾರು ಎಂದು ಒಪ್ಪಿಕೊಂಡು ತನಿಖೆ ಎದುರಿಸುವ ಮುಕ್ತ ಮನಸ್ಸು ನಕಲಿ ಗಾಂಧಿ ಕುಟುಂಬಕ್ಕಿಲ್ಲ. ತಪ್ಪು ಮಾಡದೇ ಇದ್ದರೆ ತನಿಖೆಯ ಅಗ್ನಿ ಪರೀಕ್ಷೆ ಎದುರಿಸಲು ಭಯವೇಕೆ? ಎಂದು BJP ಪ್ರಶ್ನಿಸಿದೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆ ನಡೆಸಲಿದ್ದು, ಇಂದು ಕಚೇರಿಗೆ ಭೇಟಿ ನೀಡಿದ್ದಾರೆ. ಮೂವರು ಇಡಿ ಅಧಿಕಾರಿಗಳು ರಾಹುಲ್ ಗಾಂಧಿಯನ್ನು ವಿಚಾರಣೆ ನಡೆಸುತ್ತಿದ್ದಾರೆ. ಪಿಎಂಎಲ್ಎ ಸೆಕ್ಷನ್ 50ರ ಅಡಿಯಲ್ಲಿ ರಾಹುಲ್ ಗಾಂಧಿ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗುತ್ತದೆ. ವಿಚಾರಣೆ ವೇಳೆ ಇಡಿ ಅಧಿಕಾರಿಗಳು ಕೇಳುವ ಪ್ರಶ್ನೆಗೆ ರಾಹುಲ್ರಿಂದ ಲಿಖಿತ ಉತ್ತರ ಪಡೆಯಲಾಗುತ್ತದೆ.
ರಫೇಲ್ ಒಪ್ಪಂದದ ವಿಚಾರವಾಗಿ ಪ್ರಕಟಿಸಿದ ಲೇಖನಕ್ಕೆ ಪ್ರತಿಯಾಗಿ ರಿಲಯನ್ಸ್ ಮುಖ್ಯಸ್ಥ ಅನಿಲ್ ಅಂಬಾನಿ 5000 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಕೇಸನ್ನು ನಾಷನಲ್ ಹೆರಾಲ್ಡ್ ಪತ್ರಿಕೆಯ ಮೇಲೆ ಹೂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.