ದೇಶದ ಅಭಿವೃದ್ಧಿಗೆ ಬಿಜೆಪಿ ಅಗತ್ಯವಾಗಿದ್ದು, ಅದರ ದೂರದೃಷ್ಟಿಯಿಂದ ಧನಾತ್ಮಕ ಬದಲಾವಣೆಗಳನ್ನು ತಂದಿದೆ ಎಂದು ಇತ್ತೀಚೆಗೆ ಪಕ್ಷಕ್ಕೆ ಸೇರ್ಪಡೆಗೊಂಡ ಮುಲಾಯಂ ಸಿಂಗ್ ಯಾದವ್ ಅವರ ಕಿರಿಯ ಸೊಸೆ ಅಪರ್ಣಾ ಯಾದವ್ ಹೇಳಿದ್ದಾರೆ.
ಲಕ್ಷಾಂತರ ನಿವಾಸಿಗಳು ಮತ್ತು ನಾಗರಿಕರನ್ನು ಹೊರತುಪಡಿಸಿ ಉಗ್ರ ಮತ್ತು ಸಂಪೂರ್ಣ ಭಾವನಾತ್ಮಕ ಕಲ್ಪನೆಯನ್ನು ನಿರ್ಮಿಸುವ ರಾಷ್ಟ್ರೀಯತೆ ಮೂಲಕ "ಭಾರತ್ ಮಾತಾ ಕಿ ಜೈ" ಘೋಷಣೆ ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಹೇಳಿದ್ದಾರೆ.
ಚುನಾವಣೆಯ ನಂತರ, ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಅಧಿಕಾರಕ್ಕೆ ಬಂದಿರುವ ಜೆಜೆಪಿಯ ದುಶ್ಯಂತ್ ಚೌತಲಾ ಅವರು ಹರಿಯಾಣದ ಹಿತಾಸಕ್ತಿಗಾಗಿ ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ ಎಂದು ಹೇಳಿದರು.
'ಪ್ರತಿಪಕ್ಷದ ಶಾಸಕ ಅಥವಾ ಸಂಸದ ಇರಬಾರದು ಎಂದು ನಾವು ಎಂದೂ ಹೇಳಿಲ್ಲ. ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳು ಪ್ರಜಾಪ್ರಭುತ್ವದಲ್ಲಿ ತಮ್ಮದೇ ಆದ ಪಾತ್ರವನ್ನು ಹೊಂದಿವೆ'- ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಜಮ್ಮು-ಕಾಶ್ಮೀರವನ್ನು ಅಕ್ಟೋಬರ್ 31 ರಿಂದ ಜಮ್ಮು-ಕಾಶ್ಮೀರ ಮತ್ತು ಲಡಾಖ್ ಎಂದು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಾಗಿಸಲಾಗಿದೆ. ಈ ಹಿನ್ನೆಲೆಯಲ್ಲಿ ಜೀ ನ್ಯೂಸ್ನ # ಇಂಡಿಯಾಕಾಡಿಎನ್ಎ ಸಮಾವೇಶದಲ್ಲಿ ಕೇಂದ್ರ ಸಚಿವ ಜನರಲ್ ವಿ.ಕೆ. ಸಿಂಗ್ ತಮ್ಮ ಒಂದು ಕಥೆಯನ್ನು ವಿವರಿಸಿದ್ದಾರೆ.
ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ರಾಷ್ಟ್ರೀಯತೆ ಎಂದರೆ ಜನರ ಸಮಸ್ಯೆಗಳನ್ನು ಬಗೆ ಹರಿಸುವುದೇ ಹೊರತು ಅವುಗಳನ್ನು ಹತ್ತಿಕ್ಕುವುದಲ್ಲ ಎಂದು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದರು.ಅಮೇಥಿಯಲ್ಲಿ ಕೇಂದ್ರ ಮಂತ್ರಿ ಸ್ಮೃತಿ ಇರಾನಿ ಶೂಗಳನ್ನು ವಿತರಿಸುತ್ತಿದ್ದಾರೆ ಎಂದು ಆರೋಪಿಸಿದ ಪ್ರಿಯಾಂಕಾ ಮಾಧ್ಯಮಗಳ ಎದುರಿಗೆ ಇವೆಲ್ಲವನ್ನೂ ಮಾಡುತ್ತಿರುವುದು ತಪ್ಪು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.