ಮತ್ತೊಂದೆಡೆ, ನೀಟ್ 2022 ರ ಅನೇಕ ಆಕಾಂಕ್ಷಿಗಳು ಪರೀಕ್ಷೆಯನ್ನು ಮುಂದೂಡುವಂತೆ ಒತ್ತಾಯಿಸುತ್ತಿದ್ದಾರೆ. ಆದರೆ ಇಲಾಖೆಯು ಪರೀಕ್ಷೆಯನ್ನು ವೇಳಾಪಟ್ಟಿಯ ಪ್ರಕಾರ ನಡೆಸಲಾಗುವುದು ಮತ್ತು ಮುಂದೂಡಲಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿತ್ತು, ಅದಕ್ಕೆ ಪೂರಕವಾಗಿ ಎಂಟ್ರಿ ಕಾರ್ಡ್ನನ್ನು ಬಿಡುಗಡೆ ಮಾಡಿದೆ. ನೀಟ್ ಅಥವಾ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯು ಪದವಿಪೂರ್ವ ವೈದ್ಯಕೀಯ ಕೋರ್ಸ್ಗಳು, ನರ್ಸಿಂಗ್, ಪಶುವೈದ್ಯಕೀಯ ಮತ್ತು ಇತರ ಸಂಬಂಧಿತ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ರಾಷ್ಟ್ರೀಯ ಮಟ್ಟದ ಪ್ರವೇಶ ಪರೀಕ್ಷೆಯಾಗಿದೆ.
NEET 2022: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ- ಪದವಿಪೂರ್ವ (NEET-UG) 2022 ನೋಂದಣಿ ಗಡುವನ್ನು ವಿಸ್ತರಿಸಿದೆ. NEET 2022 ರ ಅರ್ಜಿ ಪ್ರಕ್ರಿಯೆಯನ್ನು ಮೇ 15 ರವರೆಗೆ ವಿಸ್ತರಿಸಲಾಗಿದೆ.
ಪದವಿ ಹಂತದಲ್ಲಿನ ವೈದ್ಯಕೀಯ ಪ್ರವೇಶ ಪರೀಕ್ಷೆಯಲ್ಲಿ ಕಾಣಿಸಿಕೊಳ್ಳಲು ಗರಿಷ್ಠ ವಯಸ್ಸಿನ ಮಿತಿಯನ್ನು NEET-UG ಅನ್ನು ಎಲ್ಲಾ ಅಭ್ಯರ್ಥಿಗಳಿಗೆ ತೆಗೆದುಹಾಕಲಾಗಿದೆ ಎಂದು ದೇಶದ ವೈದ್ಯಕೀಯ ಶಿಕ್ಷಣದ ಉನ್ನತ ನಿಯಂತ್ರಣ ಸಂಸ್ಥೆಯಾದ ರಾಷ್ಟ್ರೀಯ ವೈದ್ಯಕೀಯ ಆಯೋಗ ತಿಳಿಸಿದೆ.
‘ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ ಅಂತಾ ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ ನೀಟ್ ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಇದನ್ನೂ ಓದಿ :"ಸಿದ್ದರಾಮಯ್ಯ ಅವರೆ, ನಮಗೆ ನಮ್ಮ ಜವಾಬ್ದಾರಿಯ ಅರಿವಿದೆ": ಸಿಎಂ ಬೊಮ್ಮಾಯಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.