ಅತ್ಯಂತ ವೈಜ್ಞಾನಿಕವಾಗಿ ರೂಪುಗೊಂಡ ರಾಷ್ಟ್ರೀಯ ಶಿಕ್ಷಣ ನೀತಿಗೆ (ಎನ್ಇಪಿ) ರಾಜಕೀಯ ಮೇಲಾಟದ ಕಾರಣ ತಿಲಾಂಜಲಿ ಕೊಟ್ಟು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುವುದಾಗಿ ತಿಳಿಸಿದ ಈ ರಾಜ್ಯ ಸರಕಾರ ಇವತ್ತಿನವರೆಗೂ ಯಾವುದೇ ಪ್ರಗತಿಯನ್ನು ಮಾಡದೆ ಇರುವುದು ಒಂದು ಸಾಧನೆ ಎಂದು ಶಾಸಕ ಎಸ್. ಸುರೇಶ್ ಕುಮಾರ್ ಅವರು ವಿಶ್ಲೇಷಿಸಿದರು.
Karnataka New education policy : ರಾಜ್ಯ ಸರ್ಕಾರಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ರಾಷ್ಟ್ರೀಯ ಶಿಕ್ಷಣ ನೀತಿ ರೂಪಿಸಲಾಗಿದೆ. ಶಿಕ್ಷಣ ನೀತಿಯನ್ನು ಕೇಂದ್ರ ಹೇರಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕದಲ್ಲಿ ಮುಂದಿನ ಶೈಕ್ಷಣಿಕ ವರ್ಷದಿಂದ (2023-24) ‘ರಾಷ್ಟ್ರೀಯ ಶಿಕ್ಷಣ ನೀತಿ-2020’ ಅನುಷ್ಠಾನಗೊಳ್ಳಲಿದ್ದು, 3 ವರ್ಷ ಮೇಲ್ಪಟ್ಟ ಮಕ್ಕಳ ‘ಪೂರ್ವ ಬಾಲ್ಯಾವಸ್ಥೆ ಆರೈಕೆ ಮತ್ತು ಶಿಕ್ಷಣ’ವನ್ನು ರಾಜ್ಯದ 20 ಸಾವಿರ ಅಂಗನವಾಡಿಗಳು, ಶಾಲೆಗಳಲ್ಲಿ ಅನುಷ್ಠಾನಗೊಳಿಸಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವರಾದ ಬಿ.ಸಿ ನಾಗೇಶ್ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಹಾಲಪ್ಪ ಆಚಾರ್ ಅವರು ಜಂಟಿ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದರು.
Shrimad Bhagavad Gita Lessons - ಶಾಲಾ ವಿದ್ಯಾರ್ಥಿಗಳಿಗೆ ಭಾರತೀಯ ಸಂಸ್ಕೃತಿಯ ಜ್ಞಾನ (Indian Culture) ನೀಡಲು ಗುಜರಾತ್ ಸರ್ಕಾರ (Gujarat Government) ಮಹತ್ವದ ಹೆಜ್ಜೆಯನ್ನಿಟ್ಟಿದೆ. ಹೌದು, ಇದೀಗ ಅಲ್ಲಿನ ಅಲ್ಲಿನ ಶಾಲೆಗಳಲ್ಲಿ 'ಶ್ರೀಮದ್ ಭಗವದ್ಗೀತೆ'ಯ (Shrimad Bhagavad Gita) ಪಾಠವನ್ನು ಹೇಳಿಕೊಡಲು ಸರ್ಕಾರ ನಿರ್ಧರಿಸಿದೆ. 6 ರಿಂದ 12 ನೇ ತರಗತಿಯ ವಿದ್ಯಾರ್ಥಿಗಳಿಗೋಸ್ಕರ ಈ ಉಪಕ್ರಮವನ್ನು ಆರಂಭಿಸಲಾಗುವುದು ಎನ್ನಲಾಗಿದೆ.
ನೂತನ ರಾಷ್ಟ್ರೀಯ ಶಿಕ್ಷಣ ನೀತಿಯ ಆಶಯಗಳನ್ನು ಸಮರ್ಪಕವಾಗಿ ಜಾರಿಗೆ ತರುವ ಸಲುವಾಗಿ ಉನ್ನತ ಶಿಕ್ಷಣ ಇಲಾಖೆಯ ವಿಶ್ವವಿದ್ಯಾಲಯ ವಿಭಾಗಕ್ಕೆ ಐಎಎಸ್ ಅಧಿಕಾರಿಯೊಬ್ಬರನ್ನು ನಿಯುಕ್ತಿಗೊಳಿಸಲು ಅಗತ್ಯ ಹುದ್ದೆ ಸೃಷ್ಟಿಸುವಂತೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗೆ ನಿರ್ದೇಶಿಸಿದ್ದಾರೆ.
CBSE Board Exam 2021: ಸಿಬಿಎಸ್ಇ (CBSE)ವಿದ್ಯಾರ್ಥಿಗಳಿಗೆ ಒಳ್ಳೆಯ ಸುದ್ದಿಯೊಂದು ಪ್ರಕಟಗೊಂಡಿದೆ. ಸಿಬಿಎಸ್ಇ ಮಂಡಳಿಯ ಹೊಸ ನಿಯಮಗಳ ಪ್ರಕಾರ, ಈಗ ಯಾವುದೇ ವಿದ್ಯಾರ್ಥಿಯನ್ನು 10 ನೇ ತರಗತಿಯಲ್ಲಿ (CBSE Board Exams 2021) FAIL ಮಾಡಲಾಗುವುದಿಲ್ಲ.
ಇತ್ತೀಚೆಗೆ ಹೊಸ ಶಿಕ್ಷಣ ನೀತಿಯನ್ನು ಅನಾವರಣಗೊಳಿಸಿದ ನರೇಂದ್ರ ಮೋದಿ ಸರ್ಕಾರ ದೇಶದ ಶಿಕ್ಷಣ ವ್ಯವಸ್ಥೆಯಲ್ಲಿ ದೊಡ್ಡ ಬದಲಾವಣೆಗಳನ್ನು ಜಾರಿಗೆ ತರಲು ಹೊರಟಿದೆ ಮತ್ತು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಮತ್ತು ಅಖಿಲ ಭಾರತ ತಾಂತ್ರಿಕ ಶಿಕ್ಷಣ ಮಂಡಳಿ (ಎಐಸಿಟಿಇ) ಯಿಂದ ಈ ನಿಟ್ಟಿನಲ್ಲಿ ಸಲಹೆಗಳನ್ನು ಕೋರಿದೆ.
3 ವರ್ಷದಿಂದ 8 ವರ್ಷಗಳವರೆಗೆ ಭಾರತದಲ್ಲಿ ಆರಂಭಿಕ ಬಾಲ್ಯ ಶಿಕ್ಷಣದಂತಹ ಹೊಸ ವಿಷಯ ಪ್ರಾರಂಭವಾಗಲಿದೆ ಎಂದು ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ. ಸದ್ಯ ಮೊದಲ ಮತ್ತು ಎರಡನೆಯ ಪಾಠಗಳನ್ನು ಕೆಜಿಯಲ್ಲಿ ಹೇಳಿಕೊಡಲಾಗುತ್ತದೆ. ಆದರೆ, ಇನ್ಮುಂದೆ ಹಾಗೆ ನಡೆಯುವುದಿಲ್ಲ. ಇಲ್ಲಿ ವಿದ್ಯಾರ್ಥಿಗಳ ಕಾಗ್ನಿಟಿವ ಸ್ಕಿಲ್ ಅಭಿವೃದ್ಧಿಗೊಳಿಸಲಾಗುವುದು.
ನೂತನ ಶಿಕ್ಷಣ ಕಾಯ್ದೆಗನುಗುಣವಾಗಿ ಹಿಂದಿ ಭಾಷೆಯನ್ನು ಎಂಟನೇ ಕ್ಲಾಸ್ ವರೆಗೆ ಕಡ್ಡಾಯ ಮಾಡಲಾಗುತ್ತಿದೆ. ಏಕರೂಪ ಶಿಕ್ಷಣವನ್ನು ಜಾರಿಗೆ ತರುವ ನಿಟ್ಟಿನಲ್ಲಿ ಈಗ ದೇಶಾದ್ಯಂತ ವಿಜ್ಞಾನ ಮತ್ತು ಗಣಿತ ವಿಷಯಗಳನ್ನು ದೇವನಾಗರಿಯಲ್ಲಿ ಬುಡಕಟ್ಟು ಭಾಷೆಗಳನ್ನು ಹಿಡಿದು ಕಲಿಸುವ ಯೋಜನೆ ಇದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.