New Zealand Tour: ಭಾರತ ಪ್ರವಾಸದಲ್ಲಿ ನ್ಯೂಜಿಲೆಂಡ್ ತಂಡ 3 ಟಿ20 ಮತ್ತು 3 ಏಕದಿನ ಸರಣಿಯನ್ನು ಆಡಲಿದೆ. ಈ ಏಕದಿನ ಸರಣಿಗೆ ನ್ಯೂಜಿಲೆಂಡ್ ತಂಡವನ್ನು ಪ್ರಕಟಿಸಿದೆ. ಈ ಬಾರಿ ಭಾರತ ವಿರುದ್ಧ ನ್ಯೂಜಿಲೆಂಡ್ ತಂಡದ ನಾಯಕತ್ವ ಕೇನ್ ವಿಲಿಯಮ್ಸನ್ ಕೈಯಲ್ಲಿರುವುದಿಲ್ಲ. ಈ ಸರಣಿಯಲ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.
Kane Williamson steps down as Test captain: ನ್ಯೂಜಿಲೆಂಡ್ ಟೆಸ್ಟ್ ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಕೇನ್ ವಿಲಿಯಮ್ಸನ್ ಹೇಳಿದ್ದಾರೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಎಲ್ಲಾ ಮೂರು ಮಾದರಿಗಳಲ್ಲಿ ಆಡುವ ಬಯಕೆಯನ್ನು ಅವರು ವ್ಯಕ್ತಪಡಿಸಿದ್ದಾರೆ. ಅವರು ಏಕದಿನ ಮತ್ತು ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್ ತಂಡವನ್ನು ಮುನ್ನಡೆಸಲಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ ನ್ಯೂಜಿಲೆಂಡ್‌ನ ನಾಯಕತ್ವವು ನನಗೆ ನಂಬಲಾಗದ ವಿಶೇಷ ಗೌರವವಾಗಿದೆ ಎಂದು ವಿಲಿಯಮ್ಸನ್ ಹೇಳಿದರು.
IND vs NZ 1st ODI: ಇನ್ನು ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ್ದ ಟೀಂ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 306 ರನ್ ಕಲೆ ಹಾಕಿದೆ. ಟೀಂ ಇಂಡಿಯಾ ಪರವಾಗಿ ನಾಯಕ ಶಿಖರ್ ಧವನ್ (72), ಶ್ರೇಯಸ್ ಅಯ್ಯರ್ (80) ಮತ್ತು ಶುಭಮನ್ ಗಿಲ್ (50) ಅರ್ಧ ಶತಕ ಬಾರಿಸಿದ್ದಾರೆ. ಇನ್ನೊಂದೆಡೆ ನ್ಯೂಜಿಲೆಂಡ್ ಪರವಾಗಿ ಲಾಕಿ ಫರ್ಗುಸನ್ ಮತ್ತು ಟಿಮ್ ಸೌಥಿ ತಲಾ ಮೂರು ವಿಕೆಟ್ ಪಡೆದಿದ್ದಾರೆ.
India vs New Zealand T20 Final: ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಭಾರತ ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಶುಭಂ ಗಿಲ್, ಸಂಜು ಸ್ಯಾಮ್ಸನ್, ಉಮ್ರಾನ್ ಮಲಿಕ್ ಅವರಂತಹ ಆಟಗಾರರು ಅಂತಿಮ ತಂಡದಲ್ಲಿ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ಓಪನರ್ ಇಶಾನ್ ಕಿಸಾನ್ ಚೆನ್ನಾಗಿದ್ದಂತೆ ಕಂಡರೂ ಮತ್ತೊಬ್ಬ ಓಪನರ್ ರಿಷಬ್ ಪಂತ್ ವೈಫಲ್ಯ ಭಾರತಕ್ಕೆ ಆತಂಕ ತಂದಿದೆ.