ಉತ್ತರ ಕರ್ನಾಟಕದಲ್ಲೇ ಮೊಟ್ಟ ಮೊದಲ ಅತ್ಯಾಧುನಿಕ ಫ್ಲೈಓವರ್ ನಿರ್ಮಾಣಗೊಳ್ಳಲಿದೆ. ಏಳು ರಸ್ತೆಗಳು ಬಂದು ಸೇರುವ ಚೆನ್ನಮ್ಮ ವೃತ್ತದಲ್ಲಿ ನಾಲ್ಕು ಪ್ರಮುಖ ರಸ್ತೆಗಳಿಗೆ ಸಂಪರ್ಕ ಕಲ್ಪಿಸಿ ಪ್ರತಿ ರಸ್ತೆಯಲ್ಲಿ ಸುಮಾರು ಒಂದು ಕಿ.ಮೀ ದೂರದವರೆಗೆ ಫ್ಲೈಓವರ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.
ಕೇಂದ್ರ ಸರ್ಕಾರವು ದೇಶದ ವಿವಿಧ ರಾಜ್ಯಸರ್ಕಾರದ ಸಹಯೋಗದಲ್ಲಿ ಪ್ರತಿದಿನ ಸುಮಾರು 30 ಕಿ.ಮೀ.ಗೂ ಅಧಿಕ ರಾಷ್ಟ್ರೀಯ ಹೆದ್ದಾರಿ ನಿರ್ಮಿಸಲಾಗುತ್ತಿದೆ.ಕರ್ನಾಟಕ ರಾಜ್ಯಕ್ಕೆ ಪ್ರಸಕ್ತ ಸಾಲಿನಲ್ಲಿ 2000 ಕಿ.ಮೀ.ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಪಡಿಸಲು ತಾತ್ವಿಕ ಒಪ್ಪಿಗೆ ದೊರೆತಿರುವುದು ಸಂತಸ ತಂದಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಲ್ಹಾದ್ ಜೋಶಿ ಹೇಳಿದರು.
ರಾಜಕೀಯ ಪಕ್ಷವೊಂದರಲ್ಲಿ ಜಾತಿ, ಧರ್ಮ ಅಥವಾ ಸಮುದಾಯಗಳ ಆಧಾರದ ಮೇಲೆ ಸೆಲ್ ಗಳನ್ನು ರಚಿಸುವ ನಡೆಗಿಂತ ಹೆಚ್ಚಾಗಿ ತಮಗೆ ಪ್ರತಿಭೆ ಮೇಲೆ ರಚಿಸುವುದಕ್ಕೆ ಹೆಚ್ಚು ಒಲವು ಇದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.
ದೇಶಾದ್ಯಂತ 69,000 ಪೆಟ್ರೋಲ್ ಪಂಪ್‌ಗಳಲ್ಲಿ ಇ-ವೆಹಿಕಲ್ ಚಾರ್ಜಿಂಗ್ ಕಿಯೋಸ್ಕ್ ಅಳವಡಿಸುವ ಯೋಜನೆ ಬಗ್ಗೆ ಕೇಂದ್ರ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ಬುಧುವಾರದಂದು ಕೇಂದ್ರ ಗೃಹ ಸಚಿವ ನಿತಿನ್ ಗಡ್ಕರಿ ಅವರಿಗೆ ಕೊರೊನಾ ಧೃಢಪಟ್ಟಿದೆ ಎಂದು ಅವರು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಖಚಿತಪಡಿಸಿದ್ದಾರೆ. ಪ್ರಸ್ತುತ ಅವರು ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.
Jobs in MSME: ನಾವೀನ್ಯತೆ ಮತ್ತು ಉದ್ಯಮಶೀಲತೆಗೆ ಸಹಾಯದ ವ್ಯಾಪ್ತಿಯನ್ನು ವಿಸ್ತರಿಸಬೇಕು, ಇದರಿಂದ ಹೊಸ ಪ್ರತಿಭೆಗಳಿಗೆ ಮುಂದುವರಿಯಲು ಅವಕಾಶಗಳು ಸಿಗುತ್ತವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದರು.
ಶೀಘ್ರದಲ್ಲಿಯೇ ದೇಶದ ಸಾರ್ವಜನಿಕ ಸಾರಿಗೆಯನ್ನು ಆಧುನೀಕರಿಸುವ ಸಾಧ್ಯತೆ ಇದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಗಳು ಜೈವಿಕ ಇಂಧನ, ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಸಾರ್ವಜನಿಕ ಸಾರಿಗೆಗೆ ಬಳಸುವಂತೆ ಅವರು ಕೋರಿದ್ದಾರೆ.
ಕೇಂದ್ರ ಸಚಿವ ಮತ್ತು ಬಿಜೆಪಿ ಮಾಜಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ರಾಮಜನ್ಮಭೂಮಿ ಆಂದೋಲನಕ್ಕೆ ಸಂಬಂಧಪಟ್ಟವರನ್ನು ಸ್ಮರಿಸಿದ್ದು ಇಂದು ಐತಿಹಾಸಿಕ ದಿನ ಎಂದು ಬಣ್ಣಿಸಿದ್ದಾರೆ.
ಕೋವಿಡ್ -19 ಸಾಂಕ್ರಾಮಿಕ ರೋಗಕ್ಕಿಂತ ದೀರ್ಘಕಾಲದ ಲಾಕ್‌ಡೌನ್ ಹೆಚ್ಚು ಗಂಭೀರ ಬಿಕ್ಕಟ್ಟನ್ನು ಸೃಷ್ಟಿಸುತ್ತದೆ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ವೈರಸ್ ಅನ್ನು ಎದುರಿಸಲು 'ಹೇಗೆ ಬದುಕಬೇಕು' ಎಂದು ಕಲಿಯಲು ಅವರು ಸಲಹೆ ನೀಡಿದರು.
ರಸ್ತೆಯಲ್ಲಿ ನಡೆಯುವ ಪ್ರತಿಯೊಬ್ಬ ಪ್ರಯಾಣಿಕರ ಸುರಕ್ಷತೆಯ ಬಗ್ಗೆ ಕಾಳಜಿ ವಹಿಸಿ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರ ಅಡಿಯಲ್ಲಿ ಬರುವ ಈ ಸಚಿವಾಲಯವು ನಿಜಕ್ಕೂ ಅನೇಕ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಿದೆ.
ಜಂಟಿ ಉದ್ಯಮಗಳು ಸೇರಿದಂತೆ ಹೆದ್ದಾರಿ ಯೋಜನೆಗಳಲ್ಲಿ ಭಾಗವಹಿಸಲು ಚೀನಾ ಕಂಪನಿಗಳಿಗೆ ಭಾರತ ಅವಕಾಶ ನೀಡುವುದಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಬುಧವಾರ ಚೀನಾದೊಂದಿಗಿನ ಗಡಿ ವಿವಾದದ ಮಧ್ಯೆ ಹೇಳಿದ್ದಾರೆ.
ಪ್ರಸ್ತುತ ಮುಂಬೈಗೆ ಹೋಗಲು ಯಾವುದೇ ಧೈರ್ಯವಿಲ್ಲ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.ಮುಂಬೈನಲ್ಲಿ ಕೊರೊನಾ ಪ್ರಕರಣಗಳಲ್ಲಿ ತೀವ್ರ ಹೆಚ್ಚಳ ಕಂಡು ಬಂದಿರುವ ಹಿನ್ನಲೆಯಲ್ಲಿ ಈಗ ಅವರ ಹೇಳಿಕೆ ಬಂದಿದೆ.
ದೇಶದಲ್ಲಿ ಸಾರ್ವಜನಿಕ ಸಾರಿಗೆ ಸೇವೆಗಳು ಶೀಘ್ರದಲ್ಲೇ ಪ್ರಾರಂಭವಾಗಲಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಂಕೇತ ನೀಡಿದ್ದಾರೆ. ಕೊರೊನಾವೈರಸ್‌ನಿಂದಾಗಿ ಜಾರಿಗೆ ಬಂದ ಲಾಕ್‌ಡೌನ್‌ನಿಂದಾಗಿ ಸಾರ್ವಜನಿಕ ಸಾರಿಗೆ ಸೇವೆಗಳನ್ನು ಸದ್ಯ ಸ್ಥಗಿತಗೊಳಿಸಲಾಗಿದೆ.
ಮಾರ್ಚ್ 24 ರಂದು ಮೊದಲ ಲಾಕ್ ಡೌನ್ ಘೋಷಣೆಯ ನಂತರ ಸ್ಥಗಿತಗೊಂಡಿರುವ ಸಾರ್ವಜನಿಕ ಸಾರಿಗೆ ಶೀಘ್ರದಲ್ಲೇ ಕಾರ್ಯರೂಪಕ್ಕೆ ಬರಬಹುದು ಎಂದು ಕೇಂದ್ರ ಸಚಿವ ಸಚಿವ ನಿತಿನ್ ಗಡ್ಕರಿ ಸಾರಿಗೆದಾರರಿಗೆ ಬುಧವಾರ ಭರವಸೆ ನೀಡಿದರು.
ನಿತಿನ್ ಗಡ್ಕರಿ ಅವರೊಂದಿಗಿನ ವಿಡಿಯೋ ಸಂವಾದದಲ್ಲಿ ಮಾತನಾಡಿದ ಸವದಿ, ಲಾಕ್ ಡೌನ್ ನಿಂದಾಗಿ ಕರ್ನಾಟಕದ ಸಾರಿಗೆ ವಲಯದ ಮೇಲೆ ಯಾವ ರೀತಿ ದುಷ್ಪರಿಣಾಮ ಉಂಟಾಗಿದೆ ಎಂಬುದನ್ನು ಎಳೆಎಳೆಯಾಗಿ ಬಿಡಿಸಿಟ್ಟರು.