ಡಾ ಶಿವರಾಜ್ ಕುಮಾರ ಅವರ ಮಗಳು ನಿವೇದಿತಾ ಅವರು ಮೊದಲ ಬಾರಿಗೆ ಫೈರ್ ಫ್ಲೈ ಸಿನಿಮಾಗೆ ಬಂಡವಾಳ ಹಾಕಿದ್ದರು. ಸದ್ಯ ಈ ಸಿನಿಮಾ ಮೆಚ್ಚುಗೆ ಗಳಿಸಿದೆ.
ʼಫೈರ್ ಫ್ಲೈ’ ಚಿತ್ರದಲ್ಲಿ ವಂಶಿ ಹೀರೋ ಆಗಿ ನಟಿಸಿದ್ದಾರೆ. ನಿರ್ದೇಶನದ ಜವಾಬ್ದಾರಿ ಕೂಡ ಅವರದ್ದೇ ಎಂಬುದು ವಿಶೇಷ. ಆಚ್ಯುತ್ ಕುಮಾರ್, ಸುಧಾರಾಣಿ, ರಚನಾ ಇಂದರ್, ಶೀತಲ್ ಶೆಟ್ಟಿ, ಆನಂದ್ ನೀನಾಸಂ, ಚಿತ್ಕಲಾ ಬಿರಾದರ್, ಮೂಗು ಸುರೇಶ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ಕಾಣಸಿಕೊಂಡಿದ್ದಾರೆ.
Nivedita Shivarajkumar Movie : ನಟ ಶಿವರಾಜ್ ಕುಮಾರ್ ಅವರ ಪುತ್ರಿ ನಿವೇದಿತಾ ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟಿದ್ದಾರೆ. ಈ ಹಿಂದೆ ಹೆಸರ ಜೊತೆಗೆ ಬರುವೆವು ಎಂದು ಚಿತ್ರತಂಡ ತಿಳಿಸಿದ್ದು, ಇದೀಗ ಫೈರ್ ಫ್ಲೈ ಎಂಬ ಶೀರ್ಷಿಕೆ ಅನಾವರಣಗೊಳಿಸಿದೆ.