ಉತ್ತರ ಕರ್ನಾಟಕದ ಜೀವನದಿಯಾಗಿರುವ ಕೃಷ್ಣಾ ನದಿ ಮೈದುಂಬಿ ಹತಿಯುತ್ತಿದೆ. ಆಲಮಟ್ಟಿ ಜಲಾಶಯ ಉತ್ತರ ಕರ್ನಾಟಕದ ಜೀವನಾಡಿಯಾಗಿದೆ. ಈ ಜಲಾಶಯದಲ್ಲಿ ವಿದ್ಯುತ್ ಉತ್ಪಾದನೆ ಮಾಡಲಾಗುತ್ತದೆ. ಜಲಾಶಯ ಸಂಪೂರ್ಣ ಭರ್ತಿಯಾಗಿದೆ.
ಬೆಳಗಾವಿ ಹತ್ತಿರದ ಚನ್ನಮ್ಮನ ಕಿತ್ತೂರು, ನಂದಗಡ, ರಾಜಹಂಸಗಡ ಸೇರಿದಂತೆ ಇನ್ನೂ ಅನೇಕ ಪ್ರವಾಸಿ ತಾಣಗಳ ಕುರಿತು ಜಾಗತಿಕ ಮಟ್ಟದಲ್ಲಿ ಪ್ರಚಾರ ಕೈಗೊಳ್ಳಬೇಕು. ಈ ಭಾಗದ ಜನರ ಧೈರ್ಯ, ಕಾರ್ಯಕ್ಷಮತೆ, ಹಾಗೂ ನೈಸರ್ಗಿಕ ಸಂಪತ್ತುಗಳ ಕುರಿತು ಜಾಗೃತಿ ಮೂಡಿಸಬೇಕು.
ರಾಜ್ಯ ಸರ್ಕಾರ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೇಲಿನ ಒತ್ತಡ ಕಡಿಮೆ ಮಾಡಲು ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮತ್ತೊಂದು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಲು ಚಿಂತನೆ ನಡಿಸಿದ್ದು, ರಾಜ್ಯ ಸರ್ಕಾರ ಉತ್ತರ ಕರ್ನಾಟಕ ಭಾಗದಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾಪನೆ ಮಾಡಬೇಕು ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯ ಅಧ್ಯಕ್ಷ ಶಿವಕುಮಾರ್ ಆರ್. ಮೇಟಿ ಆಗ್ರಹಿಸಿದ್ದಾರೆ.
Karataka Dhamanaka : ಮಾರ್ಚ್ 8 ರಂದು ತೆರೆ ಕಂಡಿರುವ ಸಿನಿಮಾ 'ಕರಟಕ ದಮನಕ' ಈಗಾಗಲೇ ಜನರ ಮನಗೆದ್ದಿದ್ದು ವಿಭಿನ್ನ ರೀತಿಯ ಅಭಿಪ್ರಾಯಗಳು ಕೇಳಿಬರುತ್ತಿವೆ. ಇದೀಗ ಸಿನಿಮಾ ತಂಡ ಉತ್ತರ ಕರ್ನಾಟಕಕ್ಕೆ ಭೇಟಿ ನೀಡಲಿದೆ. ಎಲ್ಲೆಲ್ಲಿ ಇಲ್ಲಿದೆ ಮಾಹಿತಿ ತಿಳಿದುಕೊಳ್ಳಿ.
North Karnataka: ಉತ್ತರ ಕರ್ನಾಟಕದ ವಿಜಯಪುರ, ಕಲಬುರಗಿ, ಬಳ್ಳಾರಿ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಹೊಸ ಹೂಡಿಕೆ ಮತ್ತು ಹೆಚ್ಚುವರಿ ಬಂಡವಾಳ ಹೂಡಿಕೆಯ 8 ಯೋಜನೆಗಳಿಗೆ ದೊರೆತಿರುವ ಅನುಮತಿಗಳಿಂದ ಈ ಜಿಲ್ಲೆಗಳಲ್ಲಿ ಒಟ್ಟಾರೆ ರೂ.10,433 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಆಗಲಿದೆ.
New bus service: ಸಂಘ, ಸಂಸ್ಥೆಗಳ, ಭಕ್ತರ ಬಹುದಿನಗಳ ಬೇಡಿಕೆಗೆ ಅನುಸಾರವಾಗಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಬರುವ ಶುಕ್ರವಾರ ಮಹಾಶಿವರಾತ್ರಿ ದಿನದಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ ಪ್ರಾರಂಭಿಸಲಾಗುತ್ತಿದೆ ಎಂದು ಧಾರವಾಡ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಚನ್ನಪ್ಪಗೌಡರ ತಿಳಿಸಿದ್ದಾರೆ.
ಬೆಂಗಳೂರು ಹೊರತು ಪಡಿಸಿದರೆ ಹುಬ್ಬಳ್ಳಿಯ ಬಸ್ ನಿಲ್ದಾಣವು ದೊಡ್ಡದಾಗಿದೆ. ಈ ಜಾಗವನ್ನು ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕಿದೆ. ಶಕ್ತಿ ಯೋಜನೆ ಆರಂಭಗೊಂಡಾಗ 84 ಲಕ್ಷ ಮಹಿಳೆಯರು ಪ್ರಯಾಣಿಸಿದ್ದರು. ಈಗ 1ಕೋಟಿ ಅಧಿಕ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯ ಲಾಭ ಪಡೆದಿರುತ್ತಾರೆ. ಶಕ್ತಿ ಯೋಜನೆಯಿಂದ ಮಹಿಳಾ ಪ್ರಯಾಣಿಕರಿಗೆ ಅನುಕೂಲವಾಗಿದೆ. ಉತ್ತರ ಕರ್ನಾಟಕ ಭಾಗದ ಪ್ರಯಾಣಿಕರಿಗೆ 884 ಹೊಸ ಬಸ್ ಖರೀದಿಸಲಾಗುವುದು. ಈಗಾಗಲೇ 375 ಬಸ್ ಗಳ ಖರೀದಿಗೆ ಟೆಂಡರ್ ಕರೆಯಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಹೇಳಿದರು.
ಹೊಸಪೇಟೆಯ ಕಲುಷಿತ ನೀರು ಸರಬರಾಜು ಪ್ರಕರಣ
ವಿಜಯನಗರ ಕಲುಷಿತ ನೀರು ಸೇವನೆಗೆ ಮೊದಲ ಬಲಿ
ಸೀತಮ್ಮ ಕಲುಷಿತ ನೀರು ಸೇವಿಸಿ ಸಾವಿಗೀಡಾದ ಮಹಿಳೆ
ಹೊಸಪೇಟೆಯ 100 ಹಾಸಿಗೆ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ
ನೀರಲ್ಲಿ ಪಾಚಿ ಮಿಶ್ರಿತ ನೀರು ಗ್ರಾಮಕ್ಕೆ ಸರಬರಾಜು ಆಗಿತ್ತು
ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಅಭಿವೃದ್ಧಿ ಕುರಿತ ಚರ್ಚೆಗೆ ಉತ್ತರ ಕೊಡುವ ವೇಳೆ ಉತ್ತರ ಕರ್ನಾಟಕದ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ.
ಸುವರ್ಣಸೌಧದಲ್ಲಿ ನಡೆದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡುವ ಸಮಿತಿಯ ಸಭೆಯಲ್ಲಿ ಒಟ್ಟು ₹34,115 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ 14 ಉದ್ಯಮಗಳ ಸ್ಥಾಪನೆಗೆ ಅನುಮೋದನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
Bagalkote Kudachi Railway: ಉತ್ತರ ಕರ್ನಾಟಕದ ಎರಡು ಮುಖ್ಯ ರೈಲ್ವೆ ಯೋಜನೆಗಳಾದ ಗದಗ-ವಾಡಿ ಮತ್ತು ಬಾಗಲಕೋಟೆ-ಕುಡಚಿ ನಡುವಿನ ಮಾರ್ಗಗಳ ಪ್ರಗತಿ ಪರಿಶೀಲನೆ ಬಗ್ಗೆ ಪ್ರತ್ಯೇಕ ಸಭೆಗಳನ್ನು ನಡೆಸಿದ ಸಂದರ್ಭದಲ್ಲಿ ಅವರು ಹೀಗೆ ಹೇಳಿದರು.
"ಉತ್ತರ ಕರ್ನಾಟಕದ ಜನಪದ ಗೀತ ಸಂಪ್ರದಾಯದಲ್ಲಿ ಸುಮಾರು ೬೫ಕ್ಕೂ ಹೆಚ್ಚು ಪ್ರಕಾರಗಳಿವೆ. ವಿಶಿಷ್ಠವಾದ ವಾದ್ಯಗಳ ಮೂಲಕ ಅವುಗಳನ್ನು ಹಾಡುತ್ತಾ ಮನರಂಜನೆಯ ಮಾಧ್ಯಮವಾಗಿ ಜನಪದವು ಆಗಿನ ಪ್ರಬಲ ಮಾಧ್ಯಮವಾಗಿತ್ತು. ಆದರೆ ಜಾಗತೀಕರಣದ ನೆಲೆಯಲ್ಲಿ ಜನಪದ ಸಾಹಿತ್ಯ, ಕಲೆ, ಸಂಪ್ರದಾಯಗಳು ಅವನತಿಯ ಹಾದಿಯನ್ನು ಹಿಡಿದಿವೆ. ನಮ್ಮ ಸಂಸ್ಕೃತಿಯ ಪ್ರತೀಕವಾದ ಜನಪದ ಪರಂಪರೆಯನ್ನು ನಾವೆಲ್ಲರೂ ಉಳಿಸಿಕೊಂಡು ಬೆಳೆಸಿಕೊಂಡು ಹೋಗಬೇಕಾದ ಅಗತ್ಯವಿದೆ. ಆ ನಿಟ್ಟಿನಲ್ಲಿ ಜನಪದರು ಸಮೂಹ ಸಹಭಾಗಿತ್ವದಲ್ಲಿ ಇಂತಹ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಮನೋಭಾವ ಬೆಳೆಸಿಕೊಳ್ಳಬೇಕು.
Kshetrapati Trailer Released : 'ಗುಳ್ಟು' ಖ್ಯಾತಿಯ ನವೀನ್ ಶಂಕರ್ ನಟಿಸಿರುವ 'ಕ್ಷೇತ್ರಪತಿ' ಸಿನಿಮಾ ಟ್ರೈಲರ್ ರಿಲೀಸ್ ಆಗಿ ಸಖತ್ ಸೌಂಡ್ ಮಾಡುತ್ತಿದೆ. ಮುಂದಿನ ವಾರ ಸಿನಿಮಾ ಬಿಡುಗಡೆಯಾಗಲಿದ್ದು, ಉತ್ತರ ಕರ್ನಾಟಕ ಶೈಲಿಯ ಈ ಈ ಚಿತ್ರ ದೇಶದ ಬೆನ್ನೆಲುಬು ಎನ್ನುವ ರೈತನ ಇಂದಿನ ಸ್ಥಿತಿಗತಿ ಹೇಗಿದೆ? ಎನ್ನುವುದರ ಕಥಾಹಂದರವನ್ನು ಒಳಗೊಂಡಿದೆ.
ಜೂನ್ ತಿಂಗಳು ಮುಗಿದ್ರೂ ಮುಂಗಾರಿನ ದರ್ಶನವಾಗಿಲ್ಲ. ಉತ್ತರ ಕರ್ನಾಟಕದಲ್ಲಂತೂ ಮಳೆರಾಯ ಮಾಯವಾಗಿದ್ದಾನೆ. ನೀರಿಲ್ಲದೆ ಕೆರೆಕಟ್ಟೆ, ಹಳ್ಳ, ನದಿಗಳು ಬತ್ತು ಹೋಗಿ ಎಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಹೀಗಾಗಿ ಮಳೆರಾಯನ ಕೃಪೆಕ್ಕಾಗಿವಿಶೇಷ ಪೂಜೆ ಮಾಡಿದ್ದಾರೆ. ಇದ್ಯಾವ ಪೂಜೆ ಅಂತೀರಾ ಇಲ್ಲಿದೆ ನೋಡಿ ಕಂಪ್ಲೀಟ್ ಡಿಟೇಲ್ಸ್...
ಸವದತ್ತಿ ಜೊತೆ ಉತ್ತರ ಕರ್ನಾಟಕ ದತ್ತು ತೆಗೆದುಕೊಳ್ಳುವೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.. ತಾರತಮ್ಯಗಳನ್ನು ಸರಿಪಡಿಸುವುದೇ ನನ್ನ ಜೀವನದ ಗುರಿ ಎಂದು ಎಚ್ಡಿಕೆ ಹೇಳಿದ್ದಾರೆ.
ಬೆಂಗಳೂರು : ರಾಜ್ಯದಲ್ಲಿ ಕೊರೆಯುವ ಚಳಿಗೆ ಕರಾವಳಿ ಸೇರಿ ಉತ್ತರ ಕರ್ನಾಟಕ ತತ್ತರಿಸಿದೆ. ರಾಜಧಾನಿ ಬೆಂಗಳೂರಿನಲ್ಲಿ ಕನಿಷ್ಠ ಉಷ್ಣಾಂಶವು ದಾಖಲೆ ಪ್ರಮಾಣಕ್ಕಿಳಿದಿದೆ. ಕೋಲಾರ, ಬೆಂಗಳೂರು ಗ್ರಾಮಾಂತರ ತುಮಕೂರು, ಚಿತ್ರದುರ್ಗ ಸೇರಿ ಹಲವು ಭಾಗದಲ್ಲಿ ಚಳಿ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.