ರಾಜ್ಯದಲ್ಲಿ ನೂತನ ಬಸ್ ಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು, 2 ಸಾವಿರಕ್ಕಿಂತಲೂ ಅಧಿಕ ವಾಹನ ಚಾಲಕರ ಹಾಗೂ ನಿರ್ವಾಹಕರ ಹುದ್ದೆಗಳ ಭರ್ತಿ ಪ್ರಕ್ರಿಯೆ ಕೂಡ ಚಾಲನೆಯಲ್ಲಿದೆ. ಮುಂಬರುವ ದಿನಗಳಲ್ಲಿ ಗ್ರಾಮೀಣ ಭಾಗದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಚ್ಚುವರಿ ಬಸ್ ಸಂಚಾರ ಕಾರ್ಯಾಚರಣೆ ಆರಂಭಿಸಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಗಾರೆಡ್ಡಿ ತಿಳಿಸಿದರು.
ವಾ.ಕ.ರ.ಸಾ ಸಂಸ್ಥೆಯ ಧಾರವಾಡ ಘಟಕದ ಅನುಸೂಚಿಗಳ ವಾಹನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರಿಗೆ ಚಿಲ್ಲರೆ ಸಮಸ್ಯೆ ನೀಗಿಸುವ ಹಾಗೂ ಡಿಜಿಟಲ್ ಪೇಮೆಂಟ್ ಪ್ರೋತ್ಸಾಹಿಸಿ ಸಮಯ ಉಳಿತಾಯ ಮಾಡುವ ಉದ್ದೇಶದಿಂದ ಯು.ಪಿ.ಆಯ್ ಮುಖಾಂತರ ಕ್ಯೂ.ಆರ್ ಕೋಡ್ ಬಳಸಿ ಟಿಕೇಟ್ ನೀಡುವ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ.
ಬೆಳಕಿನ ಹಬ್ಬ ದೀಪಾವಳಿ ಆಚರಣೆಗೆ ರಾಜ್ಯದ ಹಾಗೂ ಹೊರ ರಾಜ್ಯಗಳ ವಿವಿಧ ಸ್ಥಳಗಳಿಂದ ಆಗಮಿಸುವ ಹಾಗೂ ಹಬ್ಬ ಮುಗಿಸಿಕೊಂಡು ಹಿಂದಿರುಗುವ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ 500ಕ್ಕೂ ಹೆಚ್ಚು ವಿಶೇಷ ಬಸ್ ಗಳ ವ್ಯವಸ್ಥೆ ಮಾಡಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅನುಸೂಚಿಗಳ ಕಾರ್ಯಾಚರಣೆಗೆ ಚಾಲನಾ ಸಿಬ್ಬಂದಿಗಳ ಅವಶ್ಯಕತೆಯಿರುವ ಹಿನ್ನೆಲೆಯಲ್ಲಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳಲ್ಲಿ ವಯೋನಿವೃತ್ತಿ ಹೊಂದಿ 63 ವರ್ಷ ಮೀರದ ನಿವೃತ್ತ ಚಾಲಕರನ್ನು ಚಾಲಕ ಹುದ್ದೆಗೆ ಹಾಗೂ 65 ವರ್ಷ ಮೀರದ ನಿವೃತ್ತ ನಿರ್ವಾಹಕ/ ಸಂಚಾರ ನಿಯಂತ್ರಕರನ್ನು ನಿರ್ವಾಹಕ ಹುದ್ದೆಗೆ ತಾತ್ಕಾಲಿಕವಾಗಿ ನಿಯೋಜಿಸಿಕೊಳ್ಳಲು ಉದ್ದೇಶಿಸಲಾಗಿದೆ ಎಂದು ಕಲಬುರಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.