Himachal Pradesh CM oath-taking ceremony: ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಇಂದು ಮಧ್ಯಾಹ್ನ 1.30ಕ್ಕೆ ಸುಖವಿಂದರ್ ಸಿಂಗ್ ಸುಖು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ ಉಪ ಮುಖ್ಯಮಂತ್ರಿಯಾಗಿ ಮುಖೇಶ್ ಅಗ್ನಿಹೋತ್ರಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಹೇಳಿದೆ.
ಇಂದು ಸಂಜೆ 4 ಗಂಟೆಗೆ ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ(Atal Bihari Vajpayee) ಏಕನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಮಾರಂಭ ನಡೆಯಲಿದೆ. ಸುಮಾರು 50,000 ಜನ ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿರುವ ಕ್ರೀಡಾಂಗಣದಲ್ಲಿ ಕಾರ್ಯಕ್ರಮಕ್ಕಾಗಿ ವ್ಯವಸ್ಥೆಗಳನ್ನು ಮಾಡಲಾಗುತ್ತಿದೆ.
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರು ಮಾರ್ಚ್ 25 ರಂದು ಇತಿಹಾಸವನ್ನು ಸೃಷ್ಟಿಸಲಿದ್ದು, ಅವರು 30 ವರ್ಷಗಳ ನಂತರ ಮೊದಲ ಬಾರಿಗೆ ಸತತ ಎರಡನೇ ಅವಧಿಗೆ ಯುಪಿ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ, ವರದಿಗಳ ಪ್ರಕಾರ ಈ ಸಮಾರಂಭದಲ್ಲಿ ಒಟ್ಟು 200 ವಿವಿಐಪಿಗಳು ಭಾಗವಹಿಸಲಿದ್ದಾರೆ.
ರಾಜ್ಯದಾದ್ಯಂತ ಮತದಾನ-ಸಂಬಂಧಿತ ಹಿಂಸಾಚಾರದಲ್ಲಿ 50 ಕ್ಕೂ ಅಧಿಕ ಜನರನ್ನು ಕೊಲೆ ಮಾಡಲಾಗಿದೆ ಎಂದು ಬಿಜೆಪಿ ಹೇಳಿಕೊಂಡಿದ್ದು, ಮಾಧ್ಯಮ ವರದಿಗಳ ಬಳಿಕ ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸಮಾರಂಭಕ್ಕೆ ತೆರಳದೆ ಇರಲು ತೀರ್ಮಾನಿಸಿದ್ದಾರೆ.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಪರಸ್ಪರ ಟೀಕಾಪ್ರಹಾರ ನಡೆಸಿದ್ದ ಮೋದಿ ಮತ್ತು ಮಮತಾ ಬ್ಯಾನರ್ಜೀ ಈಗ ಅದಕ್ಕೆಲ್ಲ ತಾತ್ಕಾಲಿಕ ವಿರಾಮ ಬಿದ್ದಂತಾಗಿದೆ.ಪ್ರಧಾನಿ ಮೋದಿ ಈಗ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜೀಯವರನ್ನು ತಮ್ಮ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ್ದಾರೆ. ಇದಕ್ಕೆ ಅವರು ಒಪ್ಪಿಗೆ ನೀಡಿ ಬರುವದಾಗಿ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.