Hamsalekha Birthday: ತಮ್ಮ ಸಾಹಿತ್ಯದ ಮೂಲಕ ಮನ ಗೆದ್ದಿರುವ ನಾದ ಬ್ರಹ್ಮ ಎಂದೇ ಖ್ಯಾತಿ ಪಡೆದಿರುವ ಹಂಸಲೇಖರವರಿಗೆ ಇಂದು 72 ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಸ್ಯಾಂಡಲ್ವುಡ್ ಇವರ ಕೊಡುಗೆ ಅಪಾರ.
ಆರ್ಆರ್ಆರ್ ಚಿತ್ರತಂಡಕ್ಕೆ ಈಗ ಸುಗ್ಗಿ ಕಾಲ. ಸಾಲು ಸಾಲು ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬರ್ತಿವೆ. ಇತ್ತೀಚಿಗೆ ಗೋಲ್ಡನ್ ಗ್ಲೋಬ್ಸ್ ಪ್ರಶಸ್ತಿಗೆ ಪಾತ್ರವಾಗಿದ್ದ ರಾಜಮೌಳಿ ಚಿತ್ರತಂಡ ಇದೀಗ ಆಸ್ಕರ್ ಅಂಗಳದಲ್ಲಿದೆ. ಇನ್ನು ಇದೇ ವೇಳೆ ಈ ʼನಾಟು ನಾಟುʼ ಹಾಡಿನ ಸಂಗೀತ ಸಂಯೋಜಕ ಎಂ.ಎಂ. ಕೀರವಾಣಿ ಅವರು ಪದ್ಮಶ್ರೀ ಗೌರವಕ್ಕೆ ಪಾತ್ರರಾಗಿದ್ದಾರೆ. ಈ ಕುರಿತು ಸಂತೋಷ ವ್ಯಕ್ತಪಡಿಸಿರುವ ನಿರ್ದೇಶಕ ರಾಜಮೌಳಿ, ಸುದೀರ್ಘ ಬರಹದ ಮೂಲಕ ಕೀರವಾಣಿಯವರನ್ನು ಹಾಡಿ ಹೊಗಳಿದ್ದಾರೆ.
ನಾಟು ನಾಟು ಚಿತ್ರದ ಪ್ರಮುಖ ತಾರೆಗಳಾದ ರಾಮ್ ಚರಣ್ ಮತ್ತು ಜೂನಿಯರ್ ಎನ್ಟಿಆರ್ ಮೇಲೆ ಚಿತ್ರಿಸಲಾದ ನೃತ್ಯ ಗೀತೆಯಾಗಿದೆ. ಇದನ್ನು ಎಂಎಂ ಕೀರವಾಣಿ ಸಂಯೋಜಿಸಿದ್ದಾರೆ ಮತ್ತು ಕಾಲ ಭೈರವ ಮತ್ತು ರಾಹುಲ್ ಸಿಪ್ಲಿಗುಂಜ್ ಹಾಡಿದ್ದಾರೆ.
ಈತ ಕಲಿತದ್ದು 10ನೆಯ ತರಗತಿ. ಆದ್ರೆ ಈತನಿಗೆ ಒಲಿದಿದ್ದು ಪದ್ಮಶ್ರೀ ಪ್ರಶಸ್ತಿ. ರೈತನಾಗಿ ವಿಶೇಷ ತಂತ್ರಜ್ಞಾನದ ಮೂಲಕವೇ ಹೊಸ ಹೊಸ ಆವಿಷ್ಕಾರ ಮಾಡಿದಕ್ಕೆ ಸದ್ಯ ಪದ್ಮಶ್ರೀ ಹುಡುಕಿಕೊಂಡು ಬಂದಿದೆ. ಇದೀಗ ಪದ್ಮಶ್ರೀ ಪಡೆಯಲಿರುವ ಆತನ ಸಾಧನೆ ಎಲ್ಲರ ಮೆಚ್ಚುಗೆ ಗೆ ಪಾತ್ರವಾಗಿದೆ.
Padma Awards 2022: ಕೇಂದ್ರ ಸರ್ಕಾರ (Central Government) 2022ನೇ ಸಾಲಿನ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಿದೆ. ಇದರಲ್ಲಿ ಸಿಡಿಎಸ್ ಬಿಪಿನ್ ರಾವತ್ ಮತ್ತು ಯುಪಿ ಮಾಜಿ ಮುಖ್ಯಮಂತ್ರಿ ಕಲ್ಯಾಣ್ ಸಿಂಗ್ ಅವರಿಗೆ ಮರಣೋತ್ತರ ಪದ್ಮವಿಭೂಷಣ (Padma Vibhushan) ಪ್ರಶಸ್ತಿ ಲಭಿಸಲಿದೆ. ಇನ್ನೊಂದೆಡ ಕಾಂಗ್ರೆಸ್ ನಾಯಕ ಗುಲಾಮ್ ನಬಿ ಆಜಾದ್ ಅವರಿಗೂ ಕೂಡ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ.
ಒಲಿಂಪಿಕ್ ಪದಕ ವಿಜೇತ ಮತ್ತೆ ರೆಸ್ಲರ್ ಸುಶೀಲ್ ಕುಮಾರ್ ವಿರುದ್ಧ ಕ್ರಿಮಿನಲ್ ಕೇಸ್ ತನಿಖೆ ನಡೆಯುತ್ತಿರುವುದರಿಂದ ಭಾರತೀಯ ರೈಲ್ವೆ ಇಲಾಖೆ ಅಮಾನತು ಮಾಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಮೂಲದ ಗಾಯಕ ಅದ್ನಾನ್ ಸಾಮಿ ಅವರು 2016 ರಲ್ಲಿ ಭಾರತೀಯ ಪ್ರಜೆಯಾಗಿದ್ದು, ಅವರು ಪದ್ಮಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಇದು130 ಕೋಟಿ ಭಾರತೀಯರಿಗೆ ಮಾಡಿದ ಅವಮಾನ ಎಂದು ಎನ್ಸಿಪಿ ಹೇಳಿದೆ.
ಅರಣ್ಯದ ವಿಶ್ವಕೋಶ ಎಂದೇ ಜನಪ್ರಿಯವಾಗಿರುವ ಕರ್ನಾಟಕದ ತುಳಸಿ ಗೌಡರಿಗೆ ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. 2020 ರ ಪದ್ಮ ಪ್ರಶಸ್ತಿಗಳನ್ನು ಶನಿವಾರದಂದು ಘೋಷಿಸಲಾಯಿತು.
ಕುಷ್ಠರೋಗಿಗಳ ಚಿಕಿತ್ಸೆ ಮತ್ತು ಸೇವೆಗಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟ ಸಮಾಜ ಸೇವಕ ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ದಾಮೋದರ್ ಗಣೇಶ್ ಬಾಪತ್ ಅವರು ಛತ್ತೀಸ್ ಗಡ್ ದ ಬಿಲಾಸ್ಪುರ ಜಿಲ್ಲೆಯ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವಯಸ್ಸಾಗಿತ್ತು ಎಂದು ತಿಳಿದುಬಂದಿದೆ.
ಪರಿಸರ ಸಂರಕ್ಷಣೆಗಾಗಿ ನೀಡಿರುವ ಕೊಡುಗೆಯನ್ನು ಪರಿಗಣಿಸಿ ರಾಷ್ಟ್ರಪತಿ ರಾಮ್ ನಾಥ್ ಕೊವಿಂದ್ ಅವರು ಶನಿವಾರದಂದು ಸಾಲು ಮರದ ತಿಮ್ಮಕ್ಕನಿಗೆ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನ ಮಾಡಿದ್ದಾರೆ.ಪ್ರಶಸ್ತಿ ಪ್ರಧಾನ ಮಾಡಿದ ನಂತರ ಸ್ವತಃ ರಾಷ್ಟ್ರಪತಿ ಸಾಲುಮರದ ತಿಮ್ಮಕನವರ ಬಗ್ಗೆ ಟ್ವೀಟ್ ಮೂಲಕ ಬರೆದುಕೊಂಡಿದ್ದಾರೆ.
ಕರ್ನಾಟಕದಿಂದ ಆರ್ಟ್ ಡ್ಯಾನ್ಸರ್ ವಿಭಾಗದಲ್ಲಿ ಪ್ರಭುದೇವ್, ವಿಜ್ಞಾನ ವಿಭಾಗದಲ್ಲಿ ರೋಹಿಣಿ ಗೊಡ್ಬೊಲೆ, ಪುರಾತತ್ವ ತಜ್ಞೆ ಶಾರಾದಾ ಶ್ರೀನಿವಾಸನ್ ಹಾಗೂ ಸರೋದ್ ವಾದಕ ರಾಜೀವ್ ತಾರಾನಾಥ್ ಮತ್ತು ಸಮಾಜಸೇವೆ ಮತ್ತು ಪರಿಸರ ವಿಭಾಗದಲ್ಲಿ ಸಾಲುಮರದ ತಿಮ್ಮಕ್ಕ ಅವರಿಗೆ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿ ಪುರಸ್ಕಾರ ಲಭಿಸಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.