ಈ ಅಧಿವೇಶನ ಮುಗಿಯುವುದರೊಳಗೆ ನಮ್ಮ ಹೋರಾಟಕ್ಕೆ ಪ್ರತಿಫಲ ಬೇಕು. ನಮಗೆ 2A ಮೀಸಲಾತಿ ಕೊಡಲೇಬೇಕು. ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುತ್ತೇವೆಂದು ಸರ್ಕಾರಕ್ಕೆ ಜಯ ಮೃತ್ಯುಂಜಯ ಸ್ವಾಮೀಜಿ ಖಡಕ್ ಎಚ್ಚರಿಕೆ ರವಾನಿಸಿದ್ದಾರೆ.
ನಮ್ಮ ಬೇಡಿಕೆ ಈಡೇರಿಸದಿದ್ದರೆ ಹಾವೇರಿ ಜಿಲ್ಲೆಯ ಶಿಗ್ಗಾಂವ್ನಲ್ಲಿರುವ ಸಿಎಂ ಬೊಮ್ಮಾಯಿ ಮನೆ ಮುಂದೆ ಪಂಚಮಸಾಲಿ ಸಮುದಾಯದವರು ಧರಣಿ ನಡೆಸಲಿದ್ದಾರೆ ಎಂದು ಶ್ರೀಗಳು ಎಚ್ಚರಿಕೆ ನೀಡಿದ್ದಾರೆ.
ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಸ್ವಾಮೀಜಿಗಳು 24 ಗಂಟೆಗಳ ಗಡುವು ನೀಡಿರುವುದಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿಂದು ಪ್ರತಿಕ್ರಿಯಿಸಿದ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್, ಹಿಂದುಳಿದ ಉಪಜಾತಿಗೆ ಅನ್ಯಾಯ ಆಗದಂತೆ ನೋಡಬೇಕು ಎಂಬುವುದು ಸಿಎಂಗೆ ಇರುವ ಅಭಿಪ್ರಾಯ.
ಮೀಸಲಾತಿ ಬಗ್ಗೆ ನಿನ್ನೆ ಮುಖ್ಯಮಂತ್ರಿಗಳು ಚರ್ಚೆ ಮಾಡಿದ್ದಾರೆ. ಕಾನೂನು ಇಲಾಖೆಯಿಂದ ಮಾಹಿತಿ ಪಡೆದಿದ್ದಾರೆ. ಪಂಚಮಸಾಲಿಯವರಿಗೆ ಸಿಎಂ ನ್ಯಾಯ ಕೊಡ್ತಾರೆ ಎಂದು ಸಚಿವ ಆರ್.ಅಶೋಕ್ ಹೇಳಿಕೆ ನೀಡಿದ್ದಾರೆ.
ಪಂಚಮಸಾಲಿ ಮೀಸಲಾತಿಗೆ ಸಂಬಂಧಿಸಿದಂತೆ ಇಂದು ಬೆಳಿಗ್ಗೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಜಯಪ್ರಕಾಶ ಹೆಗ್ಡೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಭೇಟಿ ಮಾಡಿ ಮಧ್ಯಂತರ ವರದಿ ಸಲ್ಲಿಸಿದ್ದಾರೆ.
ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರಿಸುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಡ್ಡಗಾಲು ಹಾಕಿಲ್ಲ. ಈ ಬಗ್ಗೆ ಕೇಳಿಬಂದಿರುವ ಆರೋಪ ಸತ್ಯಕ್ಕೆ ದೂರವಾದುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ ಆರ್. ನಿರಾಣಿ ಸ್ಪಷ್ಟಪಡಿಸಿದ್ದಾರೆ.
ವಿದ್ಯಾವಂತರು ಐಸಿಸ್ ಸಂಘಟನೆ ಜತೆ ನಂಟು ಹೊಂದಿರುವುದು ಆತಂಕಕಾರಿ ಬೆಳವಣಿಗೆ. ಶಿವಮೊಗ್ಗ ಮಾತ್ರವಲ್ಲ, ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಇಂತಹ ಬೆಳವಣಿಗೆ ಕಂಡುಬಂದಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ಬೈ.ವಿಜಯೇಂದ್ರ ಹೇಳಿದರು.
ಪಂಚಮಸಾಲಿ ಮೀಸಲಾತಿ ವಿಚಾರ, ಶೂನ್ಯವೇಳೆಯಲ್ಲಿ ಶಾಸಕ ಬಸನಗೌಡ ಯತ್ನಾಳ ಪ್ರಸ್ತಾಪ ಮಾಡಿ ಈವರೆಗೆ ಮೀಸಲಾತಿ ನೀಡಿಲ್ಲ ಎಂದು ವಿಜಯಪುರ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹಾಗೂ ಬೆಳಗಾವಿ ಗ್ರಾಮಂತರ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.