ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಲ್ಲಿ ಅಕ್ರಮಗಳ ಒಂದು ಎರಡು ವಿಡಿಯೋ ಅಲ್ಲ. ಸಾಲು ಸಾಲು ದೃಶ್ಯಗಳು ವೈರಲ್ ಆಗ್ತಿದೆ. ಈ ನಡುವೆ ಒಂದೆಡೆ ತನಿಖೆ ನಡೆಯುತ್ತಿದ್ದರೆ, ಇನ್ನೊಂದೆಡೆ ಕೈದಿಗಳು ಬಿಂದಾಸ್ ಡ್ಯಾನ್ಸ್, ಮದ್ಯ ಸೇವನೆ ಮಾಡ್ತಿರುವ ಕೆಲ ವಿಡಿಯೋಗಳು ಇವತ್ತು ಕೂಡ ವೈರಲ್ ಆಗಿದ್ದು, ಪ್ರಕರಣ ಇನ್ನಷ್ಟು ಗಂಭೀರತೆ ಪಡೆದಿದೆ. ಮತ್ತೊಂದೆಡೆ ಎನ್‌ಐಎ ಮತ್ತು ಡಿಆರ್‌ಐ ಜೈಲಿಗೆ ಭೇಟಿ ನೀಡುವ ಸಾಧ್ಯತೆ ಕೂಡ ಇದೆ.. ಈ ಕುರಿತ ಒಂದು ರಿಪೋರ್ಟ್ ಇಲ್ಲಿದೆ.
ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಮುನ್ನಲೆಗೆ ಬಂದಿದೆ. ಇದೀಗ ಜಿ ಪರಮೇಶ್ವರ್ ಈ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ. ಸಿದ್ದರಾಮಯ್ಯ ೫ ವರ್ಷ ಸಿಎಂ ಆಗಿ ಮುಂದುವರೆಯುತ್ತಾರೆ ಎಂದು ಹೇಳಿದ್ದಾರೆ.
ಸಿಎಂ ಡಿಸಿಎಂ ದೆಹಲಿ ಭೇಟಿ ಬಗ್ಗೆ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ.
ದೆಹಲಿಯಲ್ಲಿ ಒಬಿಸಿ ಸಲಹಾ ಮಂಡಳಿ ಸಭೆ ನಡೆಯುತ್ತಿದೆ. ಸಭೆಯಲ್ಲಿ ಭಾಗಿಯಾಗಲು ಸಿಎಂ, ಡಿಸಿಎಂ ತೆರಳಿದ್ದಾರೆ.
ನಾನು ಪ್ರತಿ ಬಾರಿ ಗೃಹ ಸಚಿವನಾದಾಗ ಬೆಂಗಳೂರು ನಗರ ಸೇರಿದಂತೆ ರಾಜ್ಯದಾದ್ಯಂತ ಮಹಿಳಾ ಸುರಕ್ಷತೆಗೆ ಏನೆಲ್ಲ ಕ್ರಮ ಕೈಗೊಂಡಿದ್ದೇನೆ ಎಂಬುದನ್ನು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಅವರು ಹೇಳಿದರು.
ಬೆಂಗಳೂರಿನ ಹೊಟೆಲ್ ರಾಡಿಸನ್ ಬ್ಲೂನಲ್ಲಿ ಆಯೋಜಿಸಲಾಗಿದ್ದ ಕಾಂಗ್ರೆಸ್ ಪಕ್ಷದ ಪರಿಶಿಷ್ಟಜಾತಿ ಹಾಗೂ ಪರಿಶಿಷ್ಟ ಪಂಗಡದ ಸಚಿವರುಗಳು, ಶಾಸಕರುಗಳು, ಸಂಸದರು ಹಾಗೂ ಮುಖಂಡರುಗಳ ಸಭೆಯನ್ನ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.
ಸಮಾಜದಲ್ಲಿ ನ್ಯಾಯಯುತವಾಗಿ ಪ್ರತಿಭಟನೆ ಮಾಡಿ, ನಕ್ಸಲ್ ಚಟುವಟಿಕೆಗೆ ಸೇರಬೇಡಿ ಎಂದಿದ್ದಾರೆ. ನಕ್ಸಲರನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿದರು.
ಸಿಎಂ ಬದಲಾವಣೆ ವಿಚಾರದಲ್ಲಿ ಸಭೆ ನಡೆಸಿಲ್ಲ, ಬೇರೆಯವರನ್ನು ಸಿಎಂ ಮಾಡಿ ಎಂದೂ ಹೇಳಿಲ್ಲ. ನಮಗೂ ಜವಾಬ್ದಾರಿ ಇದೆ. ಅನಾವಶ್ಯಕವಾಗಿ ಮೀಟಿಂಗ್ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಜಿ ಪರಮೇಶ್ವರ್ ಹೇಳಿದ್ದಾರೆ.
ಸರ್ಕಾರಕ್ಕೆ ಹೆಚ್ಚು ಆಯುಷ್ಯ ಇಲ್ಲ, ಏಪ್ರಿಲ್‌ನಲ್ಲಿ ಚುನಾವಣೆ. ಸಿದ್ದರಾಮಯ್ಯ ತಪ್ಪು ಮಾಡಿರೋದು ಪಕ್ಕಾ ಕನ್ಫರ್ಮ್ ಆಗಿದೆ. ಇದೇ ಕಾರಣಕ್ಕೆ ಸತೀಶ್, ಪರಮೇಶ್ವರ್ ಭೇಟಿ ಮಾಡುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಜೊತೆ ಲೀಗಲ್ ಟೀಂ ಸಭೆ ವಿಚಾರ. ಲೀಗಲ್ ಟೀಂ ಸಲಹೆ ಮೇಲೆ ತೀರ್ಮಾನ ಆಗುತ್ತೆ .ಬೆಂಗಳೂರಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿಕೆ
BNSS ಅಡಿಯಲ್ಲಿ ಕೊಡಬೇಕಿತ್ತು ಅನ್ನೋ ಚರ್ಚೆ ಇದೆ.
ಸರಕಾರ ಸರಿಯಾಗಿ ಅಂದಾಜು ಮಾಡಿ ಕನಿಷ್ಠ ಶೇ.70ರಿಂದ 80ರಷ್ಟು ಪರಿಹಾರ ಕೊಡಬೇಕು. ನಾನು ಕೊಡುವುದು ಆರಂಭದಲ್ಲಿ ಅವರ ಜೀವನೋಪಾಯಕ್ಕೆ ಮಾತ್ರ. ಅನೇಕ ವ್ಯಾಪಾರಿಗಳು ಇಡೀ ಅಸ್ತಿಯನ್ನೇ ಕಳೆದುಕೊಂಡಿದ್ದಾರೆ. ಅವರಿಗೆ ನನ್ನ ಕೈಲಾದ ಮಟ್ಟಿಗೆ ಸಹಾಯ ಮಾಡಿದ್ದೇನೆ. ಎರಡೂ ಸಮುದಾಯಗಳ ಜನರಿಗೂ ನೆರವಾಗಿದ್ದೇನೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೆ ನಂತರ ಆ ಸ್ಥಾನಕ್ಕೆ ಯಾರು ಬರುತ್ತಾರೆ ಎನ್ನುವ ಚರ್ಚೆ ಇದೀಗ ಕಾಂಗ್ರೆಸ್ ವಲಯದಲ್ಲಿ ಕೇಳಿ ಬಂದಿದೆ. ಇದಕ್ಕೆ ಉತ್ತರ ಕೂಡಾ ಪಕ್ಷದಲ್ಲಿಯೇ ಹರಿದಾಡುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.