ಈ ಬಾರಿಯ ಅಧಿವೇಶನವನ್ನು ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ. ಬೆಳಿಗ್ಗೆ 9ರಿಂದ ಮಧ್ಯಾಹ್ನ 1ರವರೆಗೆ ಒಂದು ಶಿಫ್ಟ್ ಮತ್ತು ಮಧ್ಯಾಹ್ನ 3ರಿಂದ ಸಂಜೆ 7ರವರೆಗೆ ಇನ್ನೊಂದು ಶಿಫ್ಟ್ ನಲ್ಲಿ ನಡೆಸಲು ನಿರ್ಧರಿಸಲಾಗಿದೆ.
ಸಂಸತ್ತಿನ ಚಳಿಗಾಲದ ಅಧಿವೇಶನ ಪ್ರಾರಂಭವಾಗುವ ಮೊದಲು, 2019 ರ ಈ ಕೊನೆಯ ಅಧಿವೇಶನ ಬಹಳ ಮುಖ್ಯ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಈ ನಿಟ್ಟಿನಲ್ಲಿ ಎಲ್ಲ ಪಕ್ಷಗಳ ಮುಖಂಡರೊಂದಿಗೆ ಮಾತನಾಡಿದ್ದೇನೆ.
ನವೆಂಬರ್ 18 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದೇಶದ ಆರ್ಥಿಕ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಮುಖ್ಯ ವಿರೋಧ ಪಕ್ಷದ ಕಾಂಗ್ರೆಸ್ ಯೋಜಿಸುತ್ತಿದೆ.
ಮೊದಲಿಗೆ ನನ್ನ ಮಂಡ್ಯದ ಸ್ವಾಭಿಮಾನಿ ಜನತೆಗೆ ಧನ್ಯವಾದಗಳು ಎಂದು ಹೇಳಿದ ಸುಮಲತಾ ಅವರು, ಬಳಿಕ ಇಂಗ್ಲಿಷ್ ಭಾಷೆಯಲ್ಲಿ ನಿರರ್ಗಳವಾಗಿ ಮಂಡ್ಯದ ರೈತರು ಮತ್ತು ನೀರಿನ ಸಮಸ್ಯೆಗಳನ್ನು ವಿವರಿಸುತ್ತಾ ಗಮನ ಸೆಳೆದರು.
ಬುಧವಾರದಂದು ರಾಜ್ಯಸಭೆಯಲ್ಲಿ ರಾಷ್ಟ್ರಪತಿಯವರ ಭಾಷಣಕ್ಕೆ ಧನ್ಯವಾದಗಳನ್ನು ಅರ್ಪಿಸಿ ಮಾತನಾಡಿದ ಪ್ರಧಾನಿ ಮೋದಿ ಚುನಾವಣೆಯಲ್ಲಿ ಇವಿಎಂಗಳನ್ನು ದೂರುವ ಬದಲು ಚುನಾವಣಾ ಪ್ರಕ್ರಿಯೆಯಲ್ಲಿನ ಸುಧಾರಣೆಗೆ ಮೆಚ್ಚುಗೆ ವ್ಯಕ್ತಪಡಿಸಬೇಕು ಎಂದು ಹೇಳಿದರು.