ಬೆಂಗಳೂರು ಉತ್ತರ ಕ್ಷೇತ್ರದ ಸಂಸದ ಡಿ.ವಿ ಸದಾನಂದ ಗೌಡ ಅವರು ನಾಲ್ಕನೆಯವರಾಗಿ ತಮ್ಮ ಸರದಿ ಬಂದಾಗ ಕನ್ನಡದಲ್ಲಿ ಪ್ರಮಾಣವಚನ ಸ್ವೀಕರಿಸಿ ಲೋಕಸಭೆಯಲ್ಲಿ ಕನ್ನಡ ಮೊಳಗಿಸಿದರೆ, 12ನೇಯವರಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಿದ ಮತ್ತೊಬ್ಬ ರಾಜ್ಯದ ಸಂಸದ ಪ್ರಹ್ಲಾದ್ ಜೋಷಿ ಕೂಡಾ ಕನ್ನಡದಲ್ಲಿಯೇ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.
ನಾವು ಸಂಸತ್ತಿಗೆ ಬಂದಾಗ, ಮೈತ್ರಿಪಕ್ಷ ಮತ್ತು ವಿಪಕ್ಷ ಎಂಬುದನ್ನು ಮರೆಯಬೇಕು. ನಾವು ನಿಶ್ಪಕ್ಷ ಮನೋಭಾವದಿಂದ ಸಮಸ್ಯೆಗಳ ಬಗ್ಗೆ ಯೋಚಿಸಬೇಕು ಹಾಗೂ ರಾಷ್ಟ್ರದ ಹಿತದೃಷ್ಟಿಯಿಂದ ಕೆಲಸ ಮಾಡಬೇಕು ಎಂದು ಪ್ರಧಾನಿ ಮೋದಿ ಹೇಳಿದರು.
ಭಾನುವಾರ ಬಿಜೆಪಿ ಸಂಸದೀಯ ನಾಯಕರ ಸಭೆ ನಡೆಸಿತು. ಈ ಮೂಲಕ, 'ಎಲ್ಲರೂ ಒಟ್ಟಾಗಿ, ಎಲ್ಲರ ಅಭಿವೃದ್ಧಿ, ಎಲ್ಲರ ನಂಬಿಕೆ' ಎಂಬ ಮನೋಭಾವವನ್ನು ಪ್ರತಿಬಿಂಬಿಸುವ ಇಂತಹ ಮಸೂದೆಗಳನ್ನು ತರಲು ತಮ್ಮ ಸರ್ಕಾರ ಮುಂದಾಗಲಿದೆ ಎಂದು ಪ್ರಧಾನಿ ಎಲ್ಲ ಭಾರತೀಯರಿಗೆ ಭರವಸೆ ನೀಡಿದರು.
ರಾಜ್ಯಸಭಾ ಸದಸ್ಯರಾಗಿ ಮನಮೋಹನ್ ಸಿಂಗ್ ಅವರ ಸುಮಾರು 30 ವರ್ಷಗಳ ಅಧಿಕಾರಾವಧಿ ಶುಕ್ರವಾರ ಮುಕ್ತಾಯಗೊಂಡಿದ್ದರಿಂದ ಮತ್ತು ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭಾ ಚುನಾವಣೆಯಲ್ಲಿ ಎಚ್.ಡಿ ದೇವೇಗೌಡ ತುಮಕೂರು ಕ್ಷೇತ್ರದಿಂದ ಸೋತಿದ್ದರಿಂದ, ಮುಂಬರುವ ಬಜೆಟ್ ಅಧಿವೇಶನದಲ್ಲಿ ಯಾವುದೇ ಮಾಜಿ ಪ್ರಧಾನಿ ಹಾಜರಾಗುವುದಿಲ್ಲ.
ಒಂದು ಕಾಲದಲ್ಲಿ ಬಿಜೆಪಿಯ ಉಕ್ಕಿನ ಮನುಷ್ಯ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಉಪಪ್ರಧಾನಿ ಎಲ್.ಕೆ ಅಡ್ವಾಣಿ ಈಗ ಸಂಸತ್ತಿನಲ್ಲಿ ಶೇ 92 ರಷ್ಟು ಹಾಜರಾತಿ ಹೊಂದಿದ್ದರೂ ಸಹಿತ ಇದುವರೆಗೆ ಕಳೆದ ಐದು ವರ್ಷದಲ್ಲಿ ಕೇವಲ 365 ಪದಗಳಷ್ಟು ಮಾತ್ರ ಮಾತನಾಡಿದ್ದಾರೆ ಎನ್ನುವ ವಿಷಯ ಈಗ ಬೆಳಕಿಗೆ ಬಂದಿದೆ.
ಭಾರತದ ಸಂಸತ್ತಿನ ಇತಿಹಾಸದಲ್ಲಿ ಸುದೀರ್ಘ ಭಾಷಣ ಮಾಡಿದವರಲ್ಲಿ ಮೋದಿ ಮೊದಲಿಗರೇನಲ್ಲ. ಈ ಹಿಂದೆ ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯ ಮಂಡಿಸಲು ಸುದೀರ್ಘ ಸಮಯ ತೆಗೆದುಕೊಂಡ ಬಹಳಷ್ಟು ನಾಯಕರನ್ನು ನಾವು ಕಾಣಬಹುದು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.