ಪಾರಿವಾಳ ಹಿಡಿಯಲು ಹೋಗಿದ್ದ ಇಬ್ಬರು ಬಾಲಕರಿಗೆ ಹೈ ಟೆನ್ಷನ್ ವಯರ್ ತಗುಲಿ ಗಂಭೀರ ಗಾಯಗೊಂಡಿದ್ದರವರ ಪೈಕಿ ಓರ್ವ ಬಾಲಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಖಾಸಗಿ ಆಸ್ಪತ್ರೆಯಲ್ಲಿ ಇಬ್ಬರು ಬಾಲಕರು ಚಿಕಿತ್ಸೆ ಪಡೆಯುತ್ತಿದ್ದರು. ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೇ ಸುಪ್ರೀತ್ ಮೃತಪಟ್ಟಿದ್ದಾನೆ.
ಬೆಂಗಳೂರಿನ ನಂದಿನಿ ಲೇಔಟ್ ವಿಜಯಾನಂದ ನಗರದಲ್ಲಿ ನಿನ್ನೆ ಸಂಜೆ 6:30 ರ ಸುಮಾರಿಗೆ ಚಂದ್ರು(10), ಸುಪ್ರೀತ್ (12) ಎಂಬ ಮಕ್ಕಳು ಹೈಟೆನ್ಷನ್ ವೈರ್ ಮೇಲೆ ಕುಳಿತಿದ್ದ ಪಾರಿವಾಳನ್ನು ಹಿಡಿಯೋಕೆ ಹೋಗಿದ್ದ ಸಂದರ್ಭದಲ್ಲಿ ಹೈಟೆನ್ಷನ್ ತಂತಿ ತಗುಲಿದ ಪರಿಣಾಮ ಕರೆಂಟ್ ಶಾಕ್ ಹೊಡೆದಿದ್ದು, ಇಬ್ಬರೂ ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮನೆಗೆ ಪಾರಿವಾಳ ಬಂದರೆ ಅದನ್ನು ತುಂಬಾ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ. ಮನೆಗೆ ಪಾರಿವಾಳದ ಆಗಮನವು ಕೆಲವು ಒಳ್ಳೆಯ ಸುದ್ದಿಗಳನ್ನು ಪಡೆಯುವ ಪೂರ್ವಭಾವಿ ಸೂಚನೆ ಎನ್ನಲಾಗುತ್ತದೆ. ಇದಲ್ಲದೆ, ಪಾರಿವಾಳದ ಗರಿಯನ್ನು ಸಹ ಬಹಳ ಮಂಗಳಕರವೆಂದು ಪರಿಗಣಿಸಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.