ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬೆನ್ ವಿಧಿವಶರಾಗಿದ್ದಾರೆ. ಅಮ್ಮನ ಅಂತ್ಯ ಸಂಸ್ಕಾರ ನೆರವೇರಿಸಿರುವ ಮೋದಿಯ, ಹೃದಯದಲ್ಲಿ ಸಾಕಷ್ಟು ನೋವು ತುಂಬಿಕೊಂಡಿದ್ದರು ಸಹ ಎಂದಿನಂತೆ ತಮ್ಮ ಕೆಲಸಕ್ಕೆ ಮುಂದಾಗಿದ್ದಾರೆ. ಇಂದು ಸಾಲು ಸಾಲು ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಪ್ರಧಾನಿ ಭಾಗವಹಿಸಿದ್ದಾರೆ. ಮೋದಿ ಕರ್ತವ್ಯ ನಿಷ್ಠೆಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಕಳೆದ ಎರಡು ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಮನೆಯಲ್ಲಿ ಎರಡು ಪ್ರಮುಖ ಘಟನೆಗಳು ನಡೆದಿವೆ. ಮೊದಲು ಅವರ ಸಹೋದರ ಪ್ರಹ್ಲಾದ್ ಮೋದಿ ಅವರು ಕಾರು ರಾಜ್ಯದ ಮೈಸೂರಿನಲ್ಲಿ ಅಪಘಾತವಾಗಿತ್ತು. ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬುಧವಾರ ಅವರ ತಾಯಿ ಹೀರಾಬೆನ್ ಅವರ ಆರೋಗ್ಯ ಇದ್ದಕ್ಕಿದ್ದಂತೆ ಹದಗೆಟ್ಟಿದೆ. ಅವರನ್ನು ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವರ ಆರೋಗ್ಯ ಸ್ಥಿತಿ ಹದಗೆಟ್ಟಿದ್ದು, ಚಿಕಿತ್ಸೆಗಾಗಿ ಅಹಮದಾಬಾದ್ನ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಸುಮಾರು 100 ವರ್ಷದ ತಾಯಿ ಹೀರಾ ಬೆನ್ ಅವರು ಅಯೋಧ್ಯೆಯ ರಾಮ್ ಮಂದಿರ ಭೂಮಿ ಪೂಜೆಗೆ ಸಾಕ್ಷಿಯಾಗಿದ್ದಾರೆ. ಅವರು ಇಡೀ ಪೂಜಾ ಕಾರ್ಯಕ್ರಮವನ್ನು ಟಿವಿಯಲ್ಲಿ ನೇರಪ್ರಸಾರದ ಮೂಲಕ ವಿಕ್ಷೀಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.