82 ವರ್ಷದ ಯಡಿಯೂರಪ್ಪ ಅವರ ಮೇಲೆ ಕಾಂಗ್ರೆಸ್ ಸೇಡಿನ ರಾಜಕಾರಣ ಮಾಡುತ್ತಿದೆ. ರಾಜ್ಯದ ರೈತ ನಾಯಕ ಯಡಿಯೂರಪ್ಪ ಅವರ ಮೇಲೆ ರಾಜಕೀಯ ಷಡ್ಯಂತ್ರ ನಡೆಯುತ್ತಿದೆ. ಅವರನ್ನು ಜೈಲಿಗೆ ಕಳಿಸಲೇಬೇಕು ಎಂಬಂತೆ ಕಾಂಗ್ರೆಸ್ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿಯವರು ಗುಡುಗಿದರು.
POCSO Case: ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಯಡಿಯೂರಪ್ಪನವರು ಅಸಭ್ಯವಾಗಿ ವರ್ತಿಸಿದ್ದಾರೆ ಅಂತಾ ಆರೋಪಿಸಿ ಮಹಿಳೆಯೊಬ್ಬರು ಕಳೆದ ಮಾರ್ಚ್ ತಿಂಗಳಿನಲ್ಲಿ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಸಾವನ್ನಪ್ಪಿದ್ದರು.
ಮಹಿಳೆಯರು ಸೂಕ್ತ ವಯಸ್ಸಿನಲ್ಲಿ ತಾಯ್ತನವನ್ನು ಸ್ವೀಕರಿಸಬೇಕು, ಇಲ್ಲದಿದ್ದರೆ ಅದು ವೈದ್ಯಕೀಯ ತೊಡಕುಗಳಿಗೆ ಕಾರಣವಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.ಇಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರ್ಮಾ, ಅಪ್ರಾಪ್ತ ವಯಸ್ಸಿನ ವಿವಾಹಗಳು ಮತ್ತು ತಾಯ್ತನವನ್ನು ನಿಲ್ಲಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.
Sexual Assault in India: ಸದ್ಯ ಈ ಘಟನೆಯ ಕುರಿತು ಪುಣೆ ಪೊಲೀಸ್ ಠಾಣೆಯಲ್ಲಿ ಬಾಲಕಿ ದೂರು ನೀಡಿದ್ದಾಳೆ. ಈ ದೂರಿನಲ್ಲಿ ತಂದೆ, ಚಿಕ್ಕಪ್ಪ ಅತ್ಯಾಚಾರ ನಡೆಸಿದ್ದು, ಅಜ್ಜ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಬರೆದಿದ್ದಾಳೆ.
ಚಿತ್ರದುರ್ಗದ ಮಠದ ಮುರುಘಾಶರಣರ ವಿರುದ್ಧ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಪ್ರಕರಣದ ವಿಚಾರವಾಗಿ ತನಿಖೆ ನಡೆಸಿರುವ ಪೊಲೀಸರು ಮುರುಘಾ ಮಠದ ಆವರಣದಲ್ಲಿ ಇಂದು ಸುಮಾರು ನಾಲ್ಕು ತಾಸುಗಳ ಕಾಲ ಸ್ಥಳ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.
ಅಪ್ರಾಪ್ತ ಬಾಲಕಿಯ ಮೇಲೆ ಆಕೆಯ ಹದಿಹರೆಯದ ಸಹೋದರ ಮತ್ತು ಅವರ ತಂದೆ ಪ್ರತ್ಯೇಕವಾಗಿ ಅತ್ಯಾಚಾರವೆಸಗಿದ್ದಾರೆ ಮತ್ತು ಆಕೆಯ ಅಜ್ಜ ಮತ್ತು ದೂರದ ಚಿಕ್ಕಪ್ಪ ಆಕೆಗೆ ಕಿರುಕುಳ ನೀಡುತ್ತಿದ್ದರು ಎಂದು ಪುಣೆ ಪೊಲೀಸರು ಶನಿವಾರ ತಿಳಿಸಿದ್ದಾರೆ, ಕಳೆದ ಐದು ವರ್ಷಗಳಿಂದ ಈ ಅಪರಾಧವನ್ನು ಎಸಗಲಾಗಿದೆ ಎಂದು ಹೇಳಿದರು.
Chitrakoot Gang Rape Case - ಉತ್ತರ ಪ್ರದೇಶದ (Uttar Pradesh) ಹಿಂದಿನ ಅಖಿಲೇಶ್ ಸರ್ಕಾರದಲ್ಲಿ (Akhilesh Government) ಗಣಿಗಾರಿಕೆ ಸಚಿವರಾಗಿದ್ದ (Mining Minister) ಗಾಯತ್ರಿ ಪ್ರಜಾಪತಿ (Gayatri Prajapati) ಮತ್ತು ಅವರ ಇಬ್ಬರು ಸಹಚರರಿಗೆ ಸಾಮೂಹಿಕ ಅತ್ಯಾಚಾರ (Gang Rape Case) ಮತ್ತು ಪೋಕ್ಸೊ (POCSO Act) ಕಾಯ್ದೆ ಪ್ರಕರಣದಲ್ಲಿ ಸಂಸದ/ಶಾಸಕ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.
ಇದಕ್ಕೂ ಮೊದಲು ಪ್ರಕರಣದ ತೀರ್ಪು ಪ್ರಕಟಿಸಿದ್ದ ದೆಹಲಿ ನ್ಯಾಯಾಲಯ ಬೃಜೇಶ್ ಠಾಕೂರ್ ನನ್ನು ಪೋಕ್ಸೋ ಕಾಯ್ದೆ, ಅತ್ಯಾಚಾರ ಹಾಗೂ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತೀರ್ಪು ನೀಡಿತ್ತು.
ಲೈಂಗಿಕ ಅಪರಾಧಗಳಿಂದ ಮಕ್ಕಳಿಗೆ ರಕ್ಷಣೆ ನೀಡುವ (ಪೋಕ್ಸೋ) ಕಾಯ್ದೆಯಡಿ ಆತ್ಯಾಚಾರದ ಶಿಕ್ಷೆಗೆ ಗುರಿಯಾದ ಆರೋಪಿಗಳಿಗೆ ಕ್ಷಮಾದಾನ ಅರ್ಜಿ ಸಲ್ಲಿಸುವ ಹಕ್ಕು ಇರಬಾರದು ಎಂದು ರಾಷ್ಟ್ರಪತಿ ರಾಮನಾಥ್ ಕೊವಿಂದ್ ಅವರು ಹೇಳಿದ್ದಾರೆ. ರಾಜಸ್ಥಾನದ ಸಿರೋಹಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಅತ್ಯಾಚಾರ ಪ್ರಕರಣವೊಂದರ ವಿಚಾರಣೆಯನ್ನು ಉತ್ತರ ಪ್ರದೇಶದ ಮಹೋಬಾ ಜಿಲ್ಲಾ ನ್ಯಾಯಾಲಯವು ಒಂಬತ್ತು =ದಿನಗಳಲ್ಲಿ ಮುಕ್ತಾಯಗೊಳಿಸಿ ಅಪರಾಧಿಗೆ 20 ವರ್ಷಗಳ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಿದೆ.
10ನೇ ತರಗತಿಯಲ್ಲಿ ಓದುತ್ತಿದ್ದ ಅಪ್ರಾಪ್ತ ಬಾಲಕಿಯನ್ನು ಆಕೆ ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂಬಾಲಿಸಿದ್ದಲ್ಲದೆ, ಆಕೆ ಬಸ್ ನಲ್ಲಿ ತೆರಳುವಾಗ ಆಕೆಯ ಪಕ್ಕದಲ್ಲಿ ಕುಳಿತು ಮೈಮುಟ್ಟಲು ಪ್ರಯತ್ನಿಸಿದ್ದ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.