ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳನ್ನ ಮುಂದೂಡಿರುವ ಸರ್ಕಾರದ ನಿರ್ಧಾರ ರಾಜಕೀಯವಾಗಿ ಮಹತ್ವ ಪಡೆದಿದೆ. ಸ್ಥಳೀಯ ಸಂಸ್ಥೆಗಳ ಮೂಲಕವೇ ಗ್ರಾಮೀಣಾಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳುವ ಕಾರಣ, ಚುನಾವಣೆ ವಿಳಂಬದಿಂದ ಆಡಳಿತ ವ್ಯವಸ್ಥೆಯ ಮೇಲೂ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಡುತ್ತಿದ್ದಾರೆ.
ಈ ಬೆಳವಣಿಗೆಗೆ ಕಾಂಗ್ರೆಸ್ ನಾಯಕತ್ವದಿಂದ ಇನ್ನೂ ಯಾವುದೇ ಅಧಿಕೃತ ಪ್ರತಿಕ್ರಿಯೆ ಬಂದಿಲ್ಲ. ರಾಮಲಿಂಗಾ ರೆಡ್ಡಿ ಹಾಗೂ ಜಮೀರ್ ಅಹಮದ್ ಖಾನ್ ಅವರ ಕಡೆಯಿಂದಲೂ ಸಭೆಗೆ ಗೈರಾಗಿರುವ ಕುರಿತು ಸ್ಪಷ್ಟನೆ ಹೊರಬಿದ್ದಿಲ್ಲ. ಹೀಗಾಗಿ ಅವರ ಅನುಪಸ್ಥಿತಿಯ ಬಗ್ಗೆ ರಾಜಕೀಯ ವಲಯದಲ್ಲಿ ಹಲವು ರೀತಿಯ ಊಹಾಪೋಹಗಳು ಮುಂದುವರಿದಿವೆ.
ಸಚಿವ ಸಂಪುಟ ವಿಸ್ತರಣೆ ಕುರಿತು ದೆಹಲಿ ಮಟ್ಟದಲ್ಲಿ ಚರ್ಚೆ ಸಾಧ್ಯತೆ ಇದ್ದು, ಪ್ರಮುಖವಾಗಿ 13 ಹೊಸ ಮುಖಗಳ ಹೆಸರುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಪ್ರಾದೇಶಿಕ ಮತ್ತು ಜಾತಿ ಸಮತೋಲನ ಪ್ರಮುಖ ಮಾನದಂಡವಾಗುವ ಸಾಧ್ಯತೆ ಇದೆ. ಯುವ ನಾಯಕತ್ವಕ್ಕೆ ಅವಕಾಶ ನೀಡುವ ಬಗ್ಗೆ ಒತ್ತಡ ಹೆಚ್ಚಾಗಿದೆ. ಅಂತಿಮ ನಿರ್ಧಾರ ಹೈಕಮಾಂಡ್ ಸಭೆಯ ಬಳಿಕವೇ ಪ್ರಕಟವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ರಾಜ್ಯ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಳೆದ ಹಲವು ತಿಂಗಳಿಂದ ಕಾಂಗ್ರೆಸ್ ಪಕ್ಷದೊಳಗೆ ತೀವ್ರ ಚರ್ಚೆಗಳು ನಡೆಯುತ್ತಿವೆ. ಸಚಿವ ಸ್ಥಾನಾಕಾಂಕ್ಷಿಗಳ ಸಂಖ್ಯೆ ಹೆಚ್ಚಿರುವ ಕಾರಣ, ಹೈಕಮಾಂಡ್ ಮಟ್ಟದಲ್ಲಿ ಸಮಾಲೋಚನೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಮಳೆಯ ನಿರೀಕ್ಷೆಯಲ್ಲಿದ್ದಾರೆ. ಹಲವೆಡೆ ಬಿತ್ತನೆ ಮಾಡಿದ ಬೆಳೆಗಳು ಮಳೆಯ ಕೊರತೆಯಿಂದ ಒಣಗುವ ಹಂತಕ್ಕೆ ತಲುಪಿದ್ದು, ಹೆಸರು, ಉದ್ದು, ಸೋಯಾಬಿನ್, ಮೆಕ್ಕೆಜೋಳ ಸೇರಿದಂತೆ ಹಲವು ಬೆಳೆಗಳ ಮೇಲೆ ಪರಿಣಾಮ ಬೀರುವ ಆತಂಕ ಎದುರಾಗಿದೆ.
2002ರ ಬಳಿಕ ಮತದಾರರ ಪಟ್ಟಿಗೆ ಸೇರ್ಪಡೆಯಾದವರು ಅಗತ್ಯ ದಾಖಲೆಗಳನ್ನ ಸಲ್ಲಿಸಬೇಕು. ಎರಡು ಕಡೆ ಹೆಸರು ಹೊಂದಿರುವವರು, ಮೃತಪಟ್ಟವರು ಹಾಗೂ ಬೇರೆಡೆಗೆ ವಲಸೆ ಹೋದವರ ಹೆಸರುಗಳನ್ನ ಪರಿಶೀಲಿಸಿ ಪಟ್ಟಿಯನ್ನ ಶುದ್ಧೀಕರಿಸುವ ಉದ್ದೇಶವೇ ಎಸ್ಐಆರ್ ಎಂದು ಪ್ರತಾಪ್ ಸಿಂಹವಿವರಿಸಿದರು
ಬಿಜೆಪಿ ಚುನಾವಣೆಯಲ್ಲಿ ಗೆಲ್ಲಲು ಮತಗಳ್ಳತನದ ರಾಜಕಾರಣ ಮಾಡುತ್ತಿದೆ ಎಂದು ಗಂಭೀರ ಆರೋಪ ಮಾಡಿದಯತೀಂದ್ರ ಸಿದ್ದರಾಮಯ್ಯ ಅವರು, ಎಸ್ಐಆರ್ ಪ್ರಕ್ರಿಯೆಯನ್ನ ದುರುಪಯೋಗಪಡಿಸಿಕೊಳ್ಳುವ ಮೂಲಕ ಮತದಾರರ ಪಟ್ಟಿಯಲ್ಲಿ ಬದಲಾವಣೆ ಮಾಡಲು ಯತ್ನಿಸಲಾಗುತ್ತಿದೆ ಎಂದು ಹೇಳಿದರು.
ಮರುನವೀಕರಣದ ವೇಳೆ ಎಪಿಎಲ್ ಅಥವಾ ಬಿಪಿಎಲ್ ಪಡಿತರ ಚೀಟಿ, ವೋಟರ್ ಐಡಿ ಹಾಗೂ ವೈಯಕ್ತಿಕ ಉಳಿತಾಯ ಬ್ಯಾಂಕ್ ಖಾತೆ ಕಡ್ಡಾಯವಾಗಲಿದೆ. ಜಂಟಿ ಬ್ಯಾಂಕ್ ಖಾತೆಗಳನ್ನ ಯೋಜನೆಗೆ ಪರಿಗಣಿಸದಿರುವ ಪ್ರಸ್ತಾವನೆಯೂ ಮಾರ್ಗಸೂಚಿಯಲ್ಲಿ ಸೇರಿಸಲಾಗಿದೆ. ಈ ಹೊಸ ನಿಯಮಗಳಿಗೆ ಸಚಿವ ಸಂಪುಟದ ಅನುಮೋದನೆ ದೊರೆತ ಬಳಿಕ ಅಂತಿಮ ಆದೇಶ ಹೊರಬೀಳಲಿದೆ.
ಆಯೋಧ್ಯೆಯಲ್ಲಿ ಸ್ಫೋಟ ನಡೆಸುವುದಾಗಿ ಬೆದರಿಕೆ ಹಾಕಿದ್ದ ಆರೋಪದಲ್ಲಿ ದಾವಣಗೆರೆಯಲ್ಲಿ ಯುವಕನ ಬಂಧನ ಪ್ರಕರಣದ ಕುರಿತು ಮಾತನಾಡಿದ ಪ್ರಿಯಾಂಕ್ ಖರ್ಗೆ, ಮಾಹಿತಿ ದೊರೆತ ತಕ್ಷಣವೇ ರಾಜ್ಯ ಪೊಲೀಸ್ ಇಲಾಖೆ ತನಿಖೆ ಆರಂಭಿಸಿದೆ ಎಂದರು.
ಸರ್ಕಾರ ನೀಡಿರುವ ಪರಿಹಾರದ ಮೊತ್ತದ ಕುರಿತೂ ಪ್ರಶ್ನೆ ಎತ್ತಿದ ಕುಮಾರಸ್ವಾಮಿ, ಸುಮಾರು 20 ಸಾವಿರ ಕೋಟಿ ರೂಪಾಯಿ ವೆಚ್ಚದ ಯೋಜನೆಗೆ ಇದುವರೆಗೆ ಕೇವಲ 19 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ ಎಂದು ಸರ್ಕಾರವೇ ಹೇಳುತ್ತಿದೆ. ಈ ಪರಿಸ್ಥಿತಿಯಲ್ಲಿ ರೈತರು ಆತಂಕ ವ್ಯಕ್ತಪಡಿಸುವುದು ಸಹಜ ಎಂದು ಅಭಿಪ್ರಾಯಪಟ್ಟರು.
ರಾಜ್ಯಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜ್ಯ ರಾಜಕೀಯದಲ್ಲಿ ಆರೋಪ-ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಎನ್ಡಿಎ ಅಭ್ಯರ್ಥಿಯಾಗಿ ಪ್ರೊ. ಎಂ.ನಾಗರಾಜ ಅವರ ಆಯ್ಕೆ ಸಾಮಾಜಿಕ ಸಮೀಕರಣಗಳ ದೃಷ್ಟಿಯಿಂದ ಮಹತ್ವ ಪಡೆದಿದ್ದು, ಇದರ ಬೆನ್ನಲ್ಲೇ ಒಬಿಸಿ, ಒಕ್ಕಲಿಗ ಹಾಗೂ ಇತರೆ ಸಮುದಾಯಗಳ ರಾಜಕೀಯ ಪ್ರತಿನಿಧಿತ್ವದ ಬಗ್ಗೆ ಹೊಸ ಚರ್ಚೆಗಳು ಆರಂಭವಾಗಿವೆ.
KH Muniyappa-Ramalinga Reddy: ಕಾಂಗ್ರೆಸ್ ಪಕ್ಷದಲ್ಲಿ ಖಾತೆ ಹಂಚಿಕೆಯ ವಿಚಾರವಾಗಿ ಹಿರಿಯ ನಾಯಕರಾದ ರಾಮಲಿಂಗಾ ರೆಡ್ಡಿ ಮತ್ತು ಕೆ.ಹೆಚ್. ಮುನಿಯಪ್ಪ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯನ್ನು ಮತ್ತೆ ಕೆ.ಹೆಚ್ ಮುನಿಯಪ್ಪ ಅವರಿಗೆ ನೀಡಿರುವುದಕ್ಕೆ ಬೇಸರ ತೋರಿದ ಅವರು, ದೇವನಹಳ್ಳಿಯಲ್ಲಿ ಮಾಧ್ಯಮಗಳಿಗೆ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ.
ರಾಮನಗರ ಜಿಲ್ಲೆಯ ರಾಜಕೀಯ ಇತಿಹಾಸ ನೋಡಿದರೆ, ಈ ಭಾಗವು ಒಕ್ಕಲಿಗ ಸಮುದಾಯದ ಪ್ರಭಾವ ಹೊಂದಿರುವ ಪ್ರದೇಶವಾಗಿದೆ. ಜೆಡಿಎಸ್ ಹಾಗೂ ಕಾಂಗ್ರೆಸ್ ಎರಡೂ ಪಕ್ಷಗಳಿಗೂ ಈ ಜಿಲ್ಲೆ ರಾಜಕೀಯವಾಗಿ ಮಹತ್ವದ್ದಾಗಿದೆ. ಚುನಾವಣೆ ಸಮಯದಲ್ಲಿ ರಾಮನಗರದ ರಾಜಕೀಯ ಚಟುವಟಿಕೆಗಳು ರಾಜ್ಯದ ಗಮನ ಸೆಳೆಯುತ್ತವೆ.
ಇತ್ತೀಚಿನ ದಿನಗಳಲ್ಲಿ ರಾಜ್ಯ ಕಾಂಗ್ರೆಸ್ನಲ್ಲಿ ನಾಯಕತ್ವ ಬದಲಾವಣೆ ಕುರಿತ ಮಾತುಕತೆಗಳು ಜೋರಾಗಿವೆ. ಮುಖ್ಯಮಂತ್ರಿ ಸ್ಥಾನ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹಾಗೂ ಕೆಲ ರಾಜಕೀಯ ವಲಯಗಳಲ್ಲಿ ಊಹಾಪೋಹಗಳು ಹರಿದಾಡುತ್ತಿವೆ.
234 ಸದಸ್ಯ ಬಲ ಹೊಂದಿರುವ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಕನಿಷ್ಠ 118 ಶಾಸಕರ ಬೆಂಬಲ ಅಗತ್ಯವಿದೆ. ಟಿವಿಕೆ ಪಕ್ಷದ ಬಳಿ 108 ಶಾಸಕರ ಬೆಂಬಲವಿದ್ದರೂ, ಕಾಂಗ್ರೆಸ್ ಬೆಂಬಲ ಸಿಕ್ಕ ಬಳಿಕವೂ ಬಹುಮತದ ಗುರಿ ತಲುಪಲು ಸಾಧ್ಯವಾಗಿಲ್ಲ.
ಕೇರಳದಲ್ಲಿ ಕಾಂಗ್ರೆಸ್ ಗೆಲ್ಲುವುದು ಬಹುತೇಕ ಖಚಿತವಾಗಿದ್ದು, ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬುದರ ಕುರಿತು ಚರ್ಚೆಗಳು ಆರಂಭವಾಗಿವೆ. ಸಿಎಂ ರೇಸ್ನಲ್ಲಿ ಇರುವ ಪ್ರಮುಖ ಅಭ್ಯರ್ಥಿಗಳು ಯಾರು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
ಒಂದು ವೇಳೆ ಬಹುಮತ ಪಡೆದರೆ ಬಿಜೆಪಿಯಿಂದ ಬಂಗಾಳದ ಮುಖ್ಯಮಂತ್ರಿ ಯಾರು? ಸುವೇಂದು ಅಧಿಕಾರಿ ಅಥವಾ ದಿಲೀಪ್ ಘೋಷ್? ಯಾರಾಗ್ತಾರೆ ಸಿಎಂ ಅನ್ನೋ ದೊಡ್ಡ ಪ್ರಶ್ನೆ ಉದ್ಭವಿಸಿದೆ.
CM Siddaramaiah: ಕೇಂದ್ರ ಸರ್ಕಾರ ಕಾಂಗ್ರೆಸ್ ಪಕ್ಷದವರನ್ನೇ ಗುರಿಯಾಗಿಸಿ ಇಡಿ ದಾಳಿ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ಧಾಳಿ ನಡೆಸಿದರು.
ಕರ್ನಾಟಕದಲ್ಲಿ ಲಕ್ಷಾಂತರ ಕುಟುಂಬಗಳು ಬೈಕ್ ಟ್ಯಾಕ್ಸಿ ಸೇವೆಗಳ ಮೇಲೆ ಜೀವನ ನಡೆಸುತ್ತಿವೆ. ದೇಶದ ಹಲವು ರಾಜ್ಯಗಳಲ್ಲಿ ಬೈಕ್ ಟ್ಯಾಕ್ಸಿ ಕಾನೂನುಬದ್ಧವಾಗಿದೆ. ಎಲ್ಲರಿಗೂ ಒಂದೇ ರೀತಿಯ ಕಾನೂನು ಇರಬೇಕು ಎಂದು ಬೈಕ್ ಟ್ಯಾಕ್ಸಿ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಆದಿ ನಾರಾಯಣ ಅವರು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಮಧ್ಯೆ ಗಲಾಟೆ ಹಚ್ಚಿದ್ದೇ ಸಿದ್ದರಾಮಯ್ಯ. ದಾವಣಗೆರೆಯಲ್ಲಿ ಮುಸ್ಲಿಂರಿಗೆ ಸೀಟು ಕೊಡಬೇಕಾಗಿತ್ತು. ಆದರೆ ಸಿದ್ದರಾಮಯ್ಯ ಒಬ್ಬ ಮೋಸಗಾರ, ಸುಳ್ಳುಗಾರ. ಅಲ್ಪಸಂಖ್ಯಾತರನ್ನ ಹಾಳು ಮಾಡಿದ್ದೇ ಸಿದ್ದರಾಮಯ್ಯ ಎಂದು ಎಚ್.ವಿಶ್ವನಾಥ್ ಕಿಡಿಕಾರಿದ್ದಾರೆ.