Ponniyin Selvan-2: ಖ್ಯಾತ ನಿರ್ದೇಶಕ ಮಣಿರತ್ನಂ ಅವರ ಡ್ರೀಮ್ ಪ್ರಾಜೆಕ್ಟ್ ‘ಪೊನ್ನಿಯಿನ್ ಸೆಲ್ವನ್' ಸಿನಿಮಾ. ಕಾರ್ತಿ, ಐಶ್ವರ್ಯಾ ರೈ, ಚಿಯಾನ್ ವಿಕ್ರಮ್, ಜಯಂ ರವಿ, ತ್ರಿಶಾ, ಶರತ್ ಕುಮಾರ್, ಪ್ರಕಾಶ್ ರಾಜ್ ರಂತಹ ದಿಗ್ಗಜ ಕಲಾವಿದರ ಸಮಾಗಮವಿರುವ ಈ ಚಿತ್ರ ಪ್ರೇಕ್ಷಕ ಮಹಾಶಯರಿಂದಲೂ ಬಹುಪರಾಕ್ ಪಡೆದುಕೊಂಡಿತ್ತು. ಇದೀಗ ಸೀಕ್ವೆಲ್ 2 ಏಪ್ರಿಲ್ 28ರಂದು ಮನರಂಜನೆ ನೀಡಲು ಸಜ್ಜಾಗಿದೆ.