ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ನಿಷೇಧಿಸಲಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕಚೇರಿ ಹಾಗೂ ಮುಖಂಡರ ಮನೆಗಳ ಮೇಲೆ ದಾಳಿ ನಡೆಸಿ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಈಗ ದಾಖಲೆಗಳ ಪರಿಶೀಲನೆ ವೇಳೆ ದೇಶ-ವಿದೇಶಗಳಿಂದ ಎಟಿಎಂ ಮೂಲಕವೇ ಪಿಎಫ್ಐ ಸಂಘಟನೆಯ ಬ್ಯಾಂಕ್ ಖಾತೆಗಳಿಗೆ ಹಣ ಜಮೆಯಾಗುತಿತ್ತು ಎಂಬ ಅಂಶ ಬೆಳಕಿಗೆ ಬಂದಿದೆ.
ಇಂದು ಬೆಳ್ಳಂಬೆಳಗ್ಗೆ ನಿಷೇಧಿತ ಪಿಎಫ್ಐ ಸಂಘಟನೆಯ ಮುಖಂಡರ ಮನೆ ಮೇಲೆ ಮಂಗಳೂರು ಪೊಲೀಸರು ದಾಳಿ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್ ನೇತೃತ್ವದಲ್ಲಿ ದಾಳಿ ನಡೆದಿದ್ದು ಐವರು ಪಿಎಫ್ಐ ಮುಖಂಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ನಿಷೇಧಿತ ಸಂಘಟನೆ ಪಿಎಫ್ಐ ಕಚೇರಿ ಮೇಲೆ ದಾಳಿ ನಡೆಸಿದಾಗ ಅನೇಕ ಸ್ಪೋಟಕ ಮಾಹಿತಿಗಳು ದೊರೆತಿವೆ. ಕಚೇರಿಯಲ್ಲಿ ಬ್ರೌಸರ್ಗಳು ಸಿಕ್ಕಿದ್ದು ನೂರನೇ ವರ್ಷದ ಸ್ವಾತಂತ್ರ್ಯೋತ್ಸವ ಪಿಎಫ್ಐ ಟಾರ್ಗೆಟ್ ಎಂಬ ಅಘಾತಕಾರಿ ಸಂಗತಿ ಗೊತ್ತಾಗಿದೆ.
ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಅದರ ಮಿತ್ರಪಕ್ಷಗಳು ಮತ್ತು ಅದರ ಎಲ್ಲಾ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿರುವ ಕೇಂದ್ರ ಸರ್ಕಾರ, ತಕ್ಷಣದಿಂದ ಜಾರಿಗೆ ಬರುವಂತೆ ಈ ಎಲ್ಲಾ ಸಂಘಟನೆಗಳಿಗೂ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಈ ಸಂಬಂಧ ಗೃಹ ಸಚಿವಾಲಯ ಅಧಿಸೂಚನೆಯನ್ನೂ ಹೊರಡಿಸಿದೆ.
ಕೇಂದ್ರ ಸರಕಾರ ಬಲವಾದ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಇದಕ್ಕಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿಶ್ ಷಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Ban on PFI: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ), ಅದರ ಮಿತ್ರಪಕ್ಷಗಳು ಮತ್ತು ಅದರ ಎಲ್ಲಾ ಅಂಗಸಂಸ್ಥೆಗಳನ್ನು ಕಾನೂನುಬಾಹಿರ ಸಂಘ ಎಂದು ಘೋಷಿಸಿರುವ ಕೇಂದ್ರ ಸರ್ಕಾರ, ತಕ್ಷಣದಿಂದ ಜಾರಿಗೆ ಬರುವಂತೆ ಈ ಎಲ್ಲಾ ಸಂಘಟನೆಗಳಿಗೂ ಐದು ವರ್ಷಗಳ ಕಾಲ ನಿಷೇಧ ಹೇರಿದೆ. ಈ ಸಂಬಂಧ ಗೃಹ ಸಚಿವಾಲಯ ಅಧಿಸೂಚನೆಯನ್ನೂ ಹೊರಡಿಸಿದೆ.
ಪಿಎಫ್ ಐ ಕಾರ್ಯಕರ್ತರ ಮೇಲೆ ದಾಖಲಿಸಿರುವ ಎಫ್ ಐ ಆರ್ ನಲ್ಲಿ ಪಿಎಫ್ಐ ಮುಖಂಡರು ಕಾರ್ಯಕರ್ತರಿಗೆ ಹರಿತವಾದ ಆಯುದಗಳನ್ನ ಹೇಗೆ ಬಳಸಬೇಕು ಎಂದು ತರಬೇತಿ ನೀಡುತ್ತಿದ್ದರು ಎಂಬ ಅಂಶವನ್ನು ಉಲ್ಲೇಖಿಸಲಾಗಿದೆ.
PFI Ban Demand: 2012ರಲ್ಲೂ ಪಿಎಫ್ಐ ಉಗ್ರರ ನಂಟು ಬಯಲಿಗೆ ಬಂದ ಬಳಿಕ ಅದನ್ನು ನಿಷೇಧಿಸಬೇಕು ಎಂಬ ಆಗ್ರಹ ಕೇಳಿಬಂದಿತ್ತು. ಇದಾದ ಬಳಿಕ 2017ರಲ್ಲೂ ಎನ್ಐಎ ವರದಿ ಬಂದ ಬಳಿಕ ಜನರು ಇದನ್ನು ನಿಷೇಧಿಸುವಂತೆ ಒತ್ತಾಯಿಸಿದ್ದರು.
ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ಸಂಚು ರೂಪಿಸುತ್ತಿದ್ದ ಆರೋಪದ ಮೇಲೆ ಬಂಧನವಾಗಿರುವ ಪಿಎಫ್ ಐ ಸಂಘಟನೆಯ ಪ್ರಮುಖರ ಮನೆಯಲ್ಲಿ ಸಾವರ್ಕರ್ ಪುಸ್ತಕ ಸಿಕ್ಕಿದೆ. ಹೌದು ಸಾವರ್ಕರ್ ಸತ್ಯ ಎಷ್ಟು-ಮಿಥ್ಯ ಎಷ್ಟು ಪುಸ್ತಕ ದೊರೆತಿದ್ದು ಅನೇಕ ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.
Popular Front of India: ಕೆಲವು ಕಾಲೇಜುಗಳು ಹಿಜಾಬ್ ಬಗ್ಗೆ ಅನಗತ್ಯ ವಿವಾದಗಳನ್ನು ಸೃಷ್ಟಿಸುತ್ತಿವೆ ಮತ್ತು ಮುಸ್ಲಿಮರ ಮೂಲಭೂತ, ಧಾರ್ಮಿಕ ಸ್ವಾತಂತ್ರ್ಯವನ್ನು ಉಲ್ಲಂಘಿಸುತ್ತಿವೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಆರೋಪಿಸಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೇಶದಲ್ಲಿ ಹಿಂಸಾಚಾರ ಹುಟ್ಟುಹಾಕಿದ ಮಾಸ್ಟರ್ ಮೈಂಡ್ ಯಾರು? ಈ ಪ್ರಕರಣದಲ್ಲಿ ಪಾಪ್ಯೂಲರ್ ಫ್ರಂಟ್ ಆಫ್ ಇಂಡಿಯಾ ಅಂದರೆ PFI ಇರುವ ಶಂಕೆ ದಟ್ಟವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.