ನಮ್ಮ ನಗರಗಳಲ್ಲಿ ತ್ಯಾಜ್ಯ, ಮಾಲಿನ್ಯ, ಧೂಳು, ಇಂಗಾಲದ ಕಾರುವಿಕೆ ಎಲ್ಲವೂ ಅಂಕೆ ಮೀರಿವೆ. ಇವುಗಳನ್ನು ಬಗೆಹರಿಸಲು ಎಷ್ಟೇ ಪ್ರಯತ್ನಪಟ್ಟರೂ ಯಶಸ್ವಿಯಾಗಿಲ್ಲವೆಂದು ಬಿಬಿಎಂಪಿ ವಿಶೇಷ ಆಯುಕ್ತ ಡಾ.ತ್ರಿಲೋಕಚಂದ್ರ ಹೇಳಿದ್ದಾರೆ.
ಉತ್ತರಪ್ರದೇಶದಲ್ಲಿ ಇನ್ನೂ ಮುಂದೆ ಎರಡು ಮಕ್ಕಳ ನೀತಿಯನ್ನು ಉಲ್ಲಂಘಿಸಿದ್ದೇ ಆದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸ್ಪರ್ಧಿಸುವುದಾಗಲಿ, ಸರ್ಕಾರಿ ಉದ್ಯೋಗಗಳಲ್ಲಿ ಅರ್ಜಿ ಸಲ್ಲಿಸುವ ಅಥವಾ ಬಡ್ತಿ ಪಡೆಯುವುದಾಗಲಿ ಮತ್ತು ಯಾವುದೇ ರೀತಿಯ ಸರ್ಕಾರಿ ಸಬ್ಸಿಡಿ ಪಡೆಯುವುದಕ್ಕೆ ಅನರ್ಹರಾಗುತ್ತಾರೆ ಎನ್ನಲಾಗಿದೆ.
ವಿಶ್ವ ಜನಸಂಖ್ಯಾ ದಿನದ ನಿಮಿತ್ತ ಜುಲೈ 11 ರಂದು ಉತ್ತರ ಪ್ರದೇಶ ಸರ್ಕಾರ 2021-30ರಂದು ಜನಸಂಖ್ಯೆ ನಿಯಂತ್ರಣ ಕುರಿತ ತನ್ನ ಹೊಸ ನೀತಿಯನ್ನು ಅನಾವರಣಗೊಳಿಸಲಿದೆ. ಜನರು ಉತ್ತಮ ಸೌಲಭ್ಯಗಳನ್ನು ಪಡೆಯಲು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಜನಸಂಖ್ಯೆ ನಿಯಂತ್ರಣಕ್ಕೆ ಸಮುದಾಯ ಕೇಂದ್ರಿತ ವಿಧಾನವನ್ನು ಕೋರಿದ್ದಾರೆ ಎಂದು ಐಎಎನ್ಎಸ್ ವರದಿ ಮಾಡಿದೆ.
ರಾಷ್ಟ್ರೀಯ ಸ್ವಯಂಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರು ದೇಶದ ಬೆಳೆಯುತ್ತಿರುವ ಜನಸಂಖ್ಯೆಯನ್ನು ನಿಯಂತ್ರಿಸುವ ಕಾನೂನುಗಾಗಿ ಒತ್ತಾಯಿಸಿದ್ದಾರೆ, ಈ ನಿಟ್ಟಿನಲ್ಲಿ ಸಂಸತ್ತಿನಲ್ಲಿ ಶಾಸನವನ್ನು ತರಬೇಕು ಎಂಬ ಚರ್ಚೆಯನ್ನು ಪುನರುಚ್ಚರಿಸಿದ್ದಾರೆ.
ಯೋಗ ಗುರು ಬಾಬಾ ರಾಮ್ದೇವ್ ಅವರ ಜನಸಂಖ್ಯಾ ನಿಯಂತ್ರಣ ಹೇಳಿಕೆಗೆ ಮಂಗಳವಾರ ಕೇಂದ್ರ ಸಚಿವ ಮತ್ತು ಬಿಜೆಪಿ ನಾಯಕ ಗಿರಿರಾಜ್ ಸಿಂಗ್ ಬೆಂಬಲ ನೀಡಿದ್ದಾರೆ.ಇಂತಹ ಕಾನೂನುಗಳು ದೇಶದ ಅಭಿವೃದ್ಧಿಗೆ ಪೂರಕ ಎಂದು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.