Karnataka Budget 2024 : ಬೊಗಸ್ ಬಜೆಟ್ ಮಂಡನೆ ಮಾಡಿದ ಸಿದ್ದರಾಮಯ್ಯ 15ನೇ ದಾಖಲೆಯ ಬಜೆಟ್ ಮಂಡಿಸಿದ್ದಾರೆ. ಜಾನುವಾರುಗಳ ರಕ್ಷಣೆಗೆ ಅದರ ಅಭಿವೃದ್ದಿಗೆ ಬಜೆಟ್ ನಲ್ಲಿ ಯಾವುದೇ ಹೊಸ ಕಾರ್ಯಕ್ರಮ ರೂಪಿಸಿಲ್ಲ ಎಂದು ಶಾಸಕ ಪ್ರಭು ಚವ್ಹಾಣ್ ಹೇಳಿದರು.
ಸನಾತನ ಧರ್ಮಕ್ಕೆ ಅನಾದಿ ಕಾಲದಿಂದಲೂ ತನ್ನದೆ ಆದ ಪರಂಪರೆ ಇದೆ. ಎಲುಬಿಲ್ಲದ ನಾಲಿಗೆ ಇದೆಯೆಂದು ಬಾಯಿಗೆ ಬಂದಂತೆ ಹೇಳಿಕೆ ನೀಡಿದರೆ ಜನ ಎಲ್ಲದಕ್ಕು ಸೂಕ್ತ ಸಮಯದಲ್ಲಿ ಉತ್ತರ ಕೊಡುತ್ತಾರೆಂಬುದು ಮರೆಯಬಾರದು ತಕ್ಷಣವೆ ಕ್ಷಮೆ ಕೇಳಬೇಕು ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಆಗ್ರಹಿಸಿದ್ದಾರೆ.
ಮತಾಂಧ ಟಿಪ್ಪುವಿನ ಪಾಠ ಮಕ್ಕಳು ಕಲಿತು ಯಾವ ದೇಶಭಕ್ತಿಯನ್ನು ಬೆಳೆಸಿಕೊಳ್ಳಲು ಸಾಧ್ಯ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಒಂದು ತಿಂಗಳು ಪೂರೈಸುತಿದ್ದಂತೆ ಸಮುದಾಯಗಳ ನಡುವೆ ಒಡಕು ಮೂಡಿಸಿ ದ್ವೇಷದ ರಾಜಕಾರಣದ ಮೂಲಕ ವಿಷ ಬೀಜ ಬಿತ್ತುವ ಕೆಲಸ ಮಾಡುತ್ತಿದೆ ಎಂದು ಮಾಜಿ ಸಚಿವ ಪ್ರಭು ಚೌಹಾಣ್ ಪ್ರಶ್ನಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ಹೋರಡಿಸಿರುವ ಅವರು, “ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆ ತನ್ನ ನಿಜ ಬಣ್ಣವನ್ನು ತೋರಿಸಲು ಪ್ರಾರಂಭಿಸಿದೆ. ಯಾರ ಹೊಟ್ಟೆಯನ್ನು ತುಂಬಲು ಗೋವುಗಳನ್ನು ಕಡಿಯಲು ಪ್ರೇರಣೆ ನೀಡುತ್ತಿದ್ದೀರಿ?” ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಸರ್ಕಾರದ ಪಶುಸಂಗೋಪನಾ ಸಚಿವರಾದ ಪ್ರಭು ಚೌಹಾನ್ ಅವರಿಗೆ ಮೇಕೆ, ದನಗಳು ಎಂದರೆ ಯಾವು ಎಂಬುದೇ ಗೊತ್ತಿಲ್ಲ. ಸದನದಲ್ಲಿ ನನ್ನ ಪ್ರಶ್ನೆಗೆ ಕೂಡ ತಪ್ಪು ತಪ್ಪಾಗಿ ಲಿಖಿತ ಉತ್ತರ ನೀಡಿದ್ದರು. ಅವರ ವಿರುದ್ಧ ಸದನದ ಹಕ್ಕು ಚ್ಯುತಿ ಮಂಡಿಸಬಹುದಿತ್ತು ಆದರೆ ನೀನು ಪೆದ್ದ ಆಗಿರುವ ಕಾರಣಕ್ಕೆ ನಿನ್ನ ವಿರುದ್ಧ ಯಾವುದೇ ನೋಟಿಸ್ ನೀಡುವುದಿಲ್ಲ ಎಂದಿದ್ದೆ, ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದರು.
ಚಳಿಗಾಲ ಅಧಿವೇಶನದ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಜಾನುವಾರಿನ ಗಂಟು ರೋಗ ವಿಚಾರವಾಗಿ ಪಶು ಸಂಗೋಪನೆ ಇಲಾಖೆ ಕಾರ್ಯನಿರ್ವಾಹಣೆ ಬಗ್ಗೆ ಪ್ರಶ್ನೆ ಮಾಡಿದ ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಪಶು ಸಂಗೋಪನ ಸಚಿವರನ್ನ ಇಕ್ಕಟಿಕೆ ಸಿಲುಕಿಸಿದರು.
ಬೀದರ್ : ಕಮಲನಗರ ತಾಲೂಕಿನ ಮುರ್ಕಿ ಗ್ರಾಮದಲ್ಲಿ ಸಂತ ಸೇವಾಲಾಲ್ ಮಹಾರಾಜರ ಮೂರ್ತಿ ಸ್ಥಾಪನೆ ನಿಮಿತ್ತ ನಡೆದ ಮೆರವಣಿಗೆಯಲ್ಲಿ ಸಚಿವ ಪ್ರಭು ಚವ್ಹಾಣ ಬಂಜಾರಾ ಸಾಂಪ್ರದಾಯಿಕ ಉಡುಗೆ ತೊಟ್ಟು ಸಖತ್ ಸ್ಟೇಪ್ ಹಾಕಿದ್ದಾರೆ.
ಹೈನುಗಾರಿಕೆಗೆ ಉತ್ತೇಜನ ನೀಡುವ ಸಲುವಾಗಿ ಹಾಗೂ ರೈತರ ಏಳಿಗೆಗಾಗಿ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ರೈತರು ನೀಡುವ ಹಾಲಿಗೆ 1 ರೂ. ಹೆಚ್ಚಿಸುವ ಕುರಿತು ಶೀಘ್ರವೇ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಜೊತೆ ಸಮಾಲೋಚನೆ ನಡೆಸಲಾಗುವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.