ಕಾಂಗ್ರೆಸ್, ಲೋಕಸಭೆಯಲ್ಲಿ ಮತ್ತು ವಿಧಾನಸಭೆಗಳಲ್ಲಿ ಒಂದು ರಚನಾತ್ಮಕ ವಿರೋಧ ಪಕ್ಷವಾಗಿ ಹೊರಹೊಮ್ಮಬೇಕು. ಆಡಳಿತ ಪಕ್ಷದೊಂದಿಗೆ ಒಂದು ಪಕ್ವ ವಿಪಕ್ಷವಾಗಿ ಇರಬೇಕು. ಮುಂದಿನ ದಿನಗಳಲ್ಲಿ ಆದರೂ ಕಾಂಗ್ರೆಸ್ ನಾಯಕರು ಈ ನಿಟ್ಟಿನಲ್ಲಿ ಹೆಜ್ಜೆಯಿಡಲಿ ಎಂದು ಸಚಿವ ಜೋಶಿ ಸಲಹೆ ಮಾಡಿದರು.
ಕಳೆದ 10 ವರ್ಷಗಳಲ್ಲಿ ಭಾರತದ ಇಂಧನ ಪ್ರಯಾಣ ಐತಿಹಾಸಿಕ ಮತ್ತು ಸ್ಪೂರ್ತಿದಾಯಕವಾಗಿದೆ. ಸೌರ ಫಲಕ, ಸೌರ ಉದ್ಯಾನವನ ಮತ್ತು ಮೇಲ್ಛಾವಣಿ ಸೌರಶಕ್ತಿಯಂತಹ ಯೋಜನೆಗಳು ಕ್ರಾಂತಿಕಾರಿ ಬದಲಾವಣೆ ತಂದಿವೆ. ಪರಿಣಾಮ ಭಾರತ ಇಂದು 100 GW ಸೌರಶಕ್ತಿ ಉತ್ಪಾದನೆಯ ಗುರಿಯನ್ನು ಯಶಸ್ವಿಯಾಗಿ ಸಾಧಿಸಿದೆ ಎಂದು ಸಚಿವರು ಸಂತಸ ವ್ಯಕ್ತಪಡಿಸಿದ್ದಾರೆ.
Pralhad Joshi: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚೇ ತೆರಿಗೆ ಹಂಚಿಕೆ ಮಾಡಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ.
ಸರ್ಕಾರಿ ಆಸ್ಪತ್ರೆಗಳಲ್ಲಿ ಔಷಧಿಯೇ ಲಭ್ಯವಿಲ್ಲ. ವೈದ್ಯರು ಹೊರಗಡೆ ತರಲು ಚೀಟಿ ಬರೆದು ಕೊಡುತ್ತಿದ್ದಾರೆ. ರಾಜ್ಯವನ್ನು ಇಂಥ ಅವಸ್ಥೆಗೆ ತಂದಿಟ್ಟಿದೆ ಈ ಸರ್ಕಾರ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರದ ಹಣೆಬರಹವೂ ಇರುತ್ತದೆ. ಇವರಿಂದ ಕ್ಷೇತ್ರದ ಪುಣ್ಯ ಹೆಚ್ಚಾಗಿದೆ ಎಂದು ಭಾವಿಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರಬಹುದು. ಜನರ ತೀರ್ಪನ್ನು ನಾವು ತಲೆಬಾಗಿ ಸ್ವೀಕರಿಸಬೇಕಾಗುತ್ತದೆ ಎಂದು ಮಾಜಿ ಸಚಿವ ಸಿ.ಸಿ. ಪಾಟೀಲ್ ಹೇಳಿದರು.
Maharashtra election result live 2024 : ಮಹಾರಾಷ್ಟ್ರ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ರಾಹುಲ್ ಗಾಂಧಿ ಕಾಂಗ್ರೆಸ್ನ ಒಬ್ಬ ಫೇಲ್ಡ್ ಲೀಡರ್ ಎಂದು ಹೇಳಿಕೆ ನೀಡಿದ್ದಾರೆ..
ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಲಾಗಿದೆ ಎಂಬ ಭಾರತೀಯ ಜನತಾ ಪಕ್ಷ ಮಾಡಿದ ಆರೋಪ ಕುರಿತು ಮುಖ್ಯಮಂತ್ರಿಗಳು ಆರೋಪ ಸಾಬೀತಾದರೆ ರಾಜಕೀಯ ನಿವೃತ್ತಿ ಪಡೆಯುವೆ ಎಂಬ ಸಿಎಂ ಹೇಳಿಕೆಗೆ ತಿರುಗೆಟು ನೀಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
Pralhad Joshi: ರಾಜ್ಯ ಕಾಂಗ್ರೆಸ್ ಸರ್ಕಾರ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲೂ ಗಲಭೆ ಕೋರರ ಮೇಲಿನ ಕೇಸ್ ಹಿಂಪಡೆಯಲು ಸಿದ್ಧತೆ ನಡೆಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಗಂಭೀರ ಆರೋಪ ಮಾಡಿದರು.
Pralhad Joshi: ಅನುದಾನ ಹಂಚಿಕೆ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಆಪಾದನೆ "ಹಾಡಿದ್ದೇ ಹಾಡೋ ಕಿಸಬಾಯಿ ದಾಸ" ಎಂಬ ಗಾದೆ ಮಾತಿನಂತಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿರುಗೇಟು ನೀಡಿದ್ದಾರೆ.
Pralhad Joshi: ಹುಬ್ಬಳ್ಳಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್ನವರು ಈ ಮೂರೂ ಕ್ಷೇತ್ರಗಳಲ್ಲಿ ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಸಚಿವರುಗಳನ್ನು ಇರಿಸಿದೆ. ಹಣದ ಹೊಳೆ ಹರಿಸುತ್ತಿದೆ ಎಂದು ಆರೋಪಿಸಿದರು.
Dinesh Gundu Rao About Pralhad Joshi: ಮಾಜಿ ಶಾಸಕ ದೇವಾನಂದ ಚೌಹಾಣ್ ಗೌರವಯುತವಾದ ವ್ಯಕ್ತಿ. ಚೌಹಾಣ್ ಅವರಿಗೆ ಲೋಕಸಭೆಯಲ್ಲಿ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಜೋಶಿಯವರ ಸಹೋದರ ಗೋಪಾಲ್ ಜೋಶಿ 2 ಕೋಟಿ ಹಣ ಪಡೆದು ವಂಚಿಸಿದ್ದಾರೆ. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ವಿರುದ್ಧ ಮಾತನಾಡುವ ಹಕ್ಕಿಲ್ಲ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಟ್ವೀಟ್ ಗೆ ಪ್ರಲ್ಹಾದ ಜೋಶಿ ಸಹ ಖಡಕ್ ಆಗಿಯೇ ಟ್ವೀಟ್ ವಾರ್ ನಡೆಸಿದ್ದಾರೆ.
ವರ್ಷದಲ್ಲಿ ಅದೆಷ್ಟು ಬಾರಿ ಹಾಲಿನ ದರ ಹೆಚ್ಚಳ ಮಾಡುತ್ತಾರೆ ಇವರು? ಎರಡು ತಿಂಗಳ ಹಿಂದಷ್ಟೇ ಬೆಲೆ ಹೆಚ್ಚಳ ಮಾಡಿದ್ದಾರೆ. ಈಗ ಮತ್ತೆ ಬೆಲೆ ಏರಿಕೆಯೇ? ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರು ಪ್ರಶ್ನಿಸಿದರು.
ನಾಗಮಂಗಲ ಗಲಭೆಯಲ್ಲಿ ಗಣಪತಿ ಪ್ರತಿಷ್ಠಾಪಿಸಿದ ಮಂಡಳಿಯವರನ್ನೇ A 1 ಆರೋಪಿಯನ್ನಾಗಿ ಮಾಡಿದ್ದಾರೆ. ಗೃಹಮಂತ್ರಿ ಮತ್ತು ಎಸ್ಪಿಗೆ ಮಾನಾ- ಮರ್ಯಾದೆ ಇದೆಯೇ? ಎಂದು ಕೇಂದ್ರ ಸಚಿವ ಜೋಶಿ ತರಾಟೆಗೆ ತೆಗೆದುಕೊಂಡರು.
ಅಹ್ಮದಾಬಾದ್ ನಿಂದ ವರ್ಚುವಲ್ ಮೂಲಕ ವಂದೇ ಭಾರತ್ ರೈಲು ಸಂಚಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚಾಲನೆ ನೀಡಲಿದ್ದಾರೆ. ಸೆ.16ರಂದು ಹುಬ್ಬಳ್ಳಿ- ಪುಣೆ ನಡುವೆ ವಂದೇ ಭಾರತ್ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದೆ.. ಹೆಚ್ಚಿನ ಮಾಹಿತಿ ಇಲ್ಲಿದೆ..
ಉಚಿತ ಯೋಜನೆಗಳನ್ನು ಘೋಷಿಸಿದ ಹಿಮಾಚಲ ಪ್ರದೇಶದ ಸ್ಥಿತಿಯೇ ಕರ್ನಾಟಕಕ್ಕೂ ಎದುರಾಗಲಿದೆ. ಕಾಂಗ್ರೆಸ್ಸಿನ ಯೋಚನಾ ರಹಿತವಾದಂತಹ ಉಚಿತ ಯೋಜನೆಗಳಿಂದಾಗಿ ಈಗ ರಾಜ್ಯದಲ್ಲಿ ದೊಡ್ಡ ಆರ್ಥಿಕ ಅಸಮತೋಲನವೇ ಉಂಟಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕಳವಳ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.