ಸಾರ್ವಜನಿಕ ವಲಯದ ಖಾಸಗೀಕರಣದ ತಡೆ ಮತ್ತು ಕನಿಷ್ಠ ಮಾಸಿಕ ವೃದ್ಧಾಪ್ಯ ಮತ್ತು ವಿಧವಾ ಪಿಂಚಣಿಯನ್ನು 3,000 ರೂ.ಗಳಿಗೆ ಹೆಚ್ಚಿಸುವುದು, ನೌಕರರ ಕನಿಷ್ಠ ವೇತನವನ್ನು ತಿಂಗಳಿಗೆ 21,000 ರೂ. ನಿಗದಿಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 10 ರಿಂದ 16 ರವರೆಗೆ ಪ್ರತಿಭಟನೆ ನಡೆಸಲು ಎಡಪಕ್ಷಗಳು ನಿರ್ಧರಿಸಿವೆ.
ನೀರು ನುಗ್ಗಿರುವ ಮನೆಗಳ ಮಾಲೀಕರಿಗೆ ತಲಾ ಹತ್ತು ಸಾವಿರ ರೂ.ಗಳ ಪರಿಹಾರ ಕೊಟ್ಟಿರುವುದನ್ನು ಬಿಟ್ಟರೆ ಪ್ರವಾಹಪೀಡಿತ ಪ್ರದೇಶಗಳಲ್ಲಿ ಯಾವುದೇ ಕೆಲಸವಾಗಿಲ್ಲ. ಮನೆಗಳನ್ನು ಕಳೆದುಕೊಂಡಿರುವ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ಗಳನ್ನು ಬಹುತೇಕ ಕಡೆ ನಿರ್ಮಿಸಿಲ್ಲ.
ಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಿಂದ ಹೊರಟು ಫ್ರೀಡಂ ಪಾರ್ಕಿನತ್ತ ಸಾಗಿರುವ ಪ್ರತಿಭಟನಾಕಾರರು ಕೇಂದ್ರ ಸರ್ಕಾರ, ನರೇಂದ್ರ ಮೋದಿ ಮತ್ತು ಅಮಿತ್ ಷಾ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕಲ್ಲು ತೂರಾಟ, ಬಸ್ಸಿಗೆ ಬೆಂಕಿ ಹಚ್ಚುವ ಕಾರ್ಯಗಳನ್ನು ನಮ್ಮ ಕಾರ್ಯಕರ್ತರು ಮಾಡಿಲ್ಲ. ಯಾರೋ ಕಿಡಿಗೇಡಿಗಳು ಪ್ರತಿಭಟನೆ ನೆಪದಲ್ಲಿ ಈ ದುಷ್ಕೃತ್ಯ ಎಸಗಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಬುಧವಾರ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ ಮತ್ತಷ್ಟು ತೀವ್ರಗೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು-ಕನಕಪುರ ಮಾರ್ಗವಾಗಿ ಸಂಚರಿಸುವ ಕೆಎಸ್ಆರ್ಟಿಸಿ ಬಸ್ ಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ಅವರನ್ನು ದೆಹಲಿಯಲ್ಲಿ ಬಂಧಿಸಿರುವ ಜಾರಿ ನಿರ್ದೇಶನಾಲಯದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಡಿಕೆಶಿ ಬೆಂಬಲಿಗರು ಅವರ ಸ್ವಕ್ಷೇತ್ರ ಕನಕಪುರದಲ್ಲಿ ಬೀದಿಗಿಳಿದು ತೀವ್ರ ಪ್ರತಿಭಟನೆ ನಡೆಸಿದ್ದಾರೆ.
10 ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ನಾಲ್ಕು ಘಟಕಗಳಾಗಿ ವಿಲೀನಗೊಳಿಸುವ ಕೇಂದ್ರದ ನಿರ್ಧಾರವನ್ನು ವಿರೋಧಿಸಿ ಅಖಿಲ ಭಾರತ ಬ್ಯಾಂಕ್ ನೌಕರರ ಸಂಘದ ಸದಸ್ಯರು ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿದರು. ಎಲ್ಲಾ ಸಾರ್ವಜನಿಕ ಮತ್ತು ಖಾಸಗಿ ವಲಯದ ಬ್ಯಾಂಕುಗಳ ನೌಕರರು ಸರ್ಕಾರದ ನಿರ್ಧಾರಕ್ಕೆ ಪ್ರತಿಭಟನೆಯ ಸಂಕೇತವಾಗಿ ಕಪ್ಪು ಬ್ಯಾಡ್ಜ್ಗಳನ್ನು ಧರಿಸಿದ್ದರು.
ಕೇಂದ್ರ ಸರ್ಕಾರ ಮಂಡಿಸಿರುವ ವೇತನ ಮಸೂದೆ 2019 ಮತ್ತು ಔದ್ಯೋಗಿಕ ರಕ್ಷಣೆ, ಆರೋಗ್ಯ ಮತ್ತು ಕಾರ್ಯಸ್ಥಳದ ಸ್ಥಿತಿಗತಿ ಕಾಯ್ದೆಯಲ್ಲಿ ಕಾರ್ಮಿಕರ ಹಕ್ಕುಗಳನ್ನು ಕಡಿತಗೊಳಿಸಲಾಗಿದೆ..ಇದನ್ನು ವಿರೋಧಿಸಿ ನಾಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು.
ಬೆಂಗಳೂರಿನ ವಿಧಾನಸೌಧ ಆವರಣದಲ್ಲಿರುವ ದೇವರಾಜ್ ಅರಸು ಪ್ರತಿಮೆ ಮುಂಭಾಗದಲ್ಲಿ ಔರಾದ್ಕರ್ ಸಮಿತಿ ವರದಿ ಜಾರಿಮಾಡುವಂತೆ ಒತ್ತಾಯಿಸಿ ಪೊಲೀಸ್ ಸಮವಸ್ತ್ರ ಧರಿಸಿ ವಾಟಾಳ್ ಪ್ರತಿಭಟನೆ ನಡೆಸಿದರು.
ರೈಲ್ವೇ ಇಲಾಖೆಯ ನೇಮಕಾತಿಯಲ್ಲಿ ವಂಚನೆಯಾಗಿದೆ ಎಂದು ಆರೋಪಿಸಿ ಇಲ್ಲಿನ ಮಾತುಂಗ ಮತ್ತು ಛತ್ರಪತಿ ಶಿವಾಜಿ ರೈಲ್ವೆ ನಿಲ್ದಾಣಗಳಲ್ಲಿ ಸಾವಿರಾರು ವಿದ್ಯಾರ್ಥಿಗಳು ರೈಲು ತಡೆದು ಪ್ರತಿಭಟನೆ ನಡೆದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.