ಭಾನುವಾರ ಫೆ.26ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಗೆ ಬ್ಯಾಂಕ್ ಭದ್ರಾತಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ. ಗುಂಡಿನ ದಾಳಿಯಲ್ಲಿ ಸಂಜಯ್ ಶರ್ಮಾ ಎಂಬುವರು ಮೃತ ಪಟ್ಟಿದ್ದಾರೆ. ದಾಳಿಯಿಂದಾಗಿ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಪುಲ್ವಾಮಾದ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರು ಕಾಶ್ಮೀರಿ ಪಂಡಿತ್ ಗುಂಪಿಗೆ ಸೇರಿದವರಾಗಿದ್ದು, ಕಳೆದ 40 ವರ್ಷಗಳಿಂದ ಬ್ಯಾಂಕ್ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಫೆಬ್ರವರಿ 14, ಭಾರತೀಯರು ಮರೆಯಲಾಗದ ದಿನ, ನೆಮ್ಮದಿಯಾಗಿ ಇದ್ದ ಭಾರತೀಯರಲ್ಲಿ ಪಾಕಿಸ್ತಾನದ ವಿರುದ್ಧ ಆಕ್ರೋಶದ ಕಟ್ಟೆ ಹೊಡೆಯುವಂತೆ ಮಾಡಿದ ದಿನ. ಭಾರತದ ಇತಿಹಾಸದಲ್ಲಿ ಒಂದು ಕರಾಳ ದಿನ..ಭಾರತದ ಪ್ರತಿಯೊಬ್ಬ ಮನೆಮನೆಯ ಜನರು ಕಣ್ಣೀರಿಟ್ಟ ದಿನ..
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಇಂದು ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಮೂವರು ಭಯೋತ್ಪಾದಕರು ಹತರಾಗಿದ್ದಾರೆ, ಕಳೆದ ನಾಲ್ಕು ದಿನಗಳಲ್ಲಿ ಹತರಾದ ಒಟ್ಟು ಭಯೋತ್ಪಾದಕರ ಸಂಖ್ಯೆ 8 ಕ್ಕೆ ತಲುಪಿದೆ.ಇತ್ತೀಚಿನ ಎನ್‌ಕೌಂಟರ್ ಪುಲ್ವಾಮಾ ಜಿಲ್ಲೆಯ ಪಹೂ ಗ್ರಾಮದಲ್ಲಿ ನಡೆದಿದೆ ಎಂದು ತಿಳಿದುಬಂದಿದೆ.
ಎರಡು ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ, ಪುಲ್ವಾಮಾ ದಾಳಿಯ (Pulwama Attack) ರೂವಾರಿಯಾಗಿದ್ದ ಜೆಇಎಂನ ಉನ್ನತ ಕಮಾಂಡರ್ ಜಾಹಿದ್ ವಾನಿ ಸೇರಿದಂತೆ 4 ಜೆಇಎಂ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಗಳು ಲಷ್ಕರ್ ಕಮಾಂಡರ್ ಸೇರಿದಂತೆ ಮೂವರು ಭಯೋತ್ಪಾದಕರನ್ನು ಕೊಂದಿದ್ದು, ಈ ಪ್ರದೇಶದಲ್ಲಿ ಇನ್ನೂ ಶೋಧ ಕಾರ್ಯಾಚರಣೆ ನಡೆಯುತ್ತಿದೆ.
ಮತ್ತೊಂದು ಘಟನೆಯಲ್ಲಿ, ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಶಿಬಿರದಲ್ಲಿ ಶರಣಾದ ಭಯೋತ್ಪಾದಕನು ಪೊಲೀಸ್ ಸಿಬ್ಬಂದಿಯಿಂದ ರೈಫಲ್ ಅನ್ನು ಕಿತ್ತು ಅವರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ.
ಸೈನ್ಯದ 50 RR, ಸಿಆರ್ಪಿಎಫ್ನ 185 ಬಿಎನ್ ಮತ್ತು ಪೊಲೀಸರ ಜಂಟಿ ತಂಡವು ಖ್ರೂನ ಶರ್ಸಾಲಿ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ ಎಂದು ವರದಿಗಳು ತಿಳಿಸಿವೆ.
ಕಳೆದ ವರ್ಷದಲ್ಲಿನ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಭಾಗಿಯಾಗಿದ್ದಕ್ಕಾಗಿ ಪಾಕಿಸ್ತಾನ ಮೂಲದ ಭಯೋತ್ಪಾದಕ ಗುಂಪು ಜೈಶ್-ಎ-ಮೊಹಮ್ಮದ್ (ಜೆಎಂ) ನ ಕಾರ್ಯಕರ್ತನನ್ನು ಎನ್ಐಎ ಶುಕ್ರವಾರ ಬಂಧಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಯೋತ್ಪಾದಕರಿಂದ ಒಂದು ಎಕೆ -47, ಎಕೆ -56, ಪಿಸ್ತೂಲ್ ಮತ್ತು ಕೈ-ಗ್ರೆನೇಡ್ ಅನ್ನು ವಶಪಡಿಸಿಕೊಳ್ಳಲಾಗಿದೆ. ಜಮ್ಮು ಮತ್ತು ಕಾಶ್ಮೀರ ಪೊಲೀಸ್, ಸಿಆರ್ಪಿಎಫ್ ಮತ್ತು ಸೇನೆಯ ಜಂಟಿ ತಂಡ ಈ ಕ್ರಮವನ್ನು ತೆಗೆದುಕೊಂಡಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.