Amit Shah's Tribute to Martyrs of Pulwama terror attack: ಶ್ರೀನಗರದಲ್ಲಿ ಮಂಗಳವಾರ ಬೆಳಗ್ಗೆ ಪುಲ್ವಾಮಾ ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ 40 ಸಿಆರ್ಪಿಎಫ್ ಯೋಧರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶ್ರದ್ಧಾಂಜಲಿ ಸಲ್ಲಿಸಿದರು.
ಕಳೆದ ವರ್ಷದ ಪುಲ್ವಾಮಾ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಮಂಗಳವಾರ ಒಬ್ಬ ವ್ಯಕ್ತಿಯನ್ನು ಮತ್ತು ಆತನ ಮಗಳನ್ನು ಬಂಧಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.ಪುಲ್ವಾಮಾದಲ್ಲಿ ಆತ್ಮಹತ್ಯಾ ಬಾಂಬರ್ ತನ್ನ ವಾಹನವನ್ನು ಅರೆಸೈನಿಕ ಬಸ್ಗೆ ನುಗ್ಗಿ 40 ಸಿಆರ್ಪಿಎಫ್ ಸಿಬ್ಬಂದಿ ಸಾವಿಗೆ ಕಾರಣವಾಗಿತ್ತು.
ಇಂದು ಶುಕ್ರವಾರವಾದ್ದರಿಂದ, ನಿಮ್ಮ ಮನಸ್ಸಿನಲ್ಲಿ ಹೊಸ ಚಿತ್ರವನ್ನು ನೋಡುವ ಯೋಜನೆ ಇರಬಹುದು. ನಿಮ್ಮಲ್ಲಿ ಹೆಚ್ಚಿನವರು ಇದನ್ನು ಚೆನ್ನಾಗಿ ನೆನಪಿಸಿಕೊಳ್ಳುತ್ತಾರೆ, ಕಳೆದ ಒಂದು ವರ್ಷದಲ್ಲಿ ಯಾವ ಚಲನಚಿತ್ರ ತಾರೆಯರು ಬಂದಿದ್ದಾರೆ ಎಂಬುದನ್ನು ನೆನೆಪಿಸಿಕೊಳ್ಳುತ್ತಾರೆ. ಆದರೆ ಪುಲ್ವಾಮಾ ದಾಳಿಯಲ್ಲಿ ಮೃತಪಟ್ಟ ಯಾವುದೇ ಜವಾನ್ ಹೆಸರು ನಿಮ್ಮಲ್ಲಿ ಯಾರಿಗಾದರೂ ನೆನಪಿದೆಯೇ?
2019 ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಆತ್ಮಾಹುತಿ ದಾಳಿಯ ಸಂದರ್ಭದಲ್ಲಿ ಸಿಆರ್ಪಿಎಫ್ ಜವಾನರು ಹುತಾತ್ಮರಾದರು. ಈ ದುರಂತ ಘಟನೆಯ ಮೊದಲ ವಾರ್ಷಿಕೋತ್ಸವದಂದು ಪುಲ್ವಾಮಾ ದಾಳಿಯ ಹುತಾತ್ಮರನ್ನು ರಾಷ್ಟ್ರವು ನೆನಪಿಸಿಕೊಳ್ಳುತ್ತಿದ್ದರೂ, ಅವರ ಕುಟುಂಬಗಳಿಗೆ ನೀಡಿದ ಭರವಸೆಗಳು ಇನ್ನೂ ಈಡೇರಿಲ್ಲ.
ಅಕ್ಟೋಬರ್ 8ರಂದು ವಾಯುಪಡೆ ದಿನ ಆಚರಣೆ ಹಿನ್ನೆಲೆಯಲ್ಲಿ ಭಾರತೀಯ ವಾಯುಪಡೆ ಪ್ರಮೋಶನಲ್ ಫಿಲಂ ಸಿದ್ಧಪಡಿಸಲಾಗಿದೆ. ಇದರಲ್ಲಿ ಫೆಬ್ರವರಿ 26ರ ಬಾಲಕೋಟ್ ವಾಯುದಾಳಿಯ ಆಯ್ದ ಭಾಗಗಳನ್ನು ತೋರಿಸಲಾಗಿದ್ದು, ಇಂದು ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವೀಡಿಯೋವನ್ನು ಬಿಡುಗಡೆ ಮಾಡಲಾಯಿತು.
ಭಾನುವಾರ ಟ್ರಾಲ್ನಲ್ಲಿ ನಡೆದ ಎನ್ಕೌಂಟರ್ನಲ್ಲಿ ಭದ್ರತಾ ಪಡೆಗಳು ಪುಲ್ವಾಮಾ ದಾಳಿಯ ಪ್ರಮುಖ ಆರೋಪಿ ಮುದಾಸಿರ್ ಅಹ್ಮದ್ ಖಾನ್ ಎನ್ನುವವನ್ನು ಹತ್ಯೆಗೈದಿವೆ ಎಂದು ಸೇನಾ ಮೂಲಗಳು ತಿಳಿಸಿವೆ.
ಫೆಬ್ರವರಿ 14 ರಂದು ನಡೆದ ಪುಲ್ವಾಮಾ ಭಯೋತ್ಪಾದನಾ ದಾಳಿಗೆ ಹಿಂದೆ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕ ಮುದಾಸಿರ್ ಅಹ್ಮದ್ ಖಾನ್ ಅಲಿಯಾಸ್ ಮೊಹದ್ ಭಾಯಿ ಕೈವಾಡವಿದೆ ಎಂದು ಅಧಿಕಾರಿಗಳು ಸಂಶಯ ವ್ಯಕ್ತಪಡಿಸಿದ್ದಾರೆ. ಈತನ ಕೈವಾಡದಿಂದಲೇ 40ಕ್ಕೂ ಅಧಿಕ ಸಿಆರ್ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದರು ಎನ್ನಲಾಗಿದೆ.
ದೆಹಲಿಯಿಂದ ಶ್ರೀನಗರಕ್ಕೆ ಹಾಗೂ ಶ್ರೀನಗರದಿಂದ ದೆಹಲಿಗೆ ಮತ್ತು ಜಮ್ಮುವಿನಿಂದ ಶ್ರೀನಗರಕ್ಕೆ ಹಾಗೂ ಶ್ರೀನಗರದಿಂದ ಜಮ್ಮುವಿಗೆ ವಿಮಾನದಲ್ಲಿ ಯೋಧರನ್ನು ಸ್ಥಳಾಂತರಿಸಲು ಕೇಂದ್ರ ಗೃಹ ಸಚಿವಾಲಯ ನಿರ್ಧರಿಸಿದೆ.
ಪುಲ್ವಾಮಾ ಭಯೋತ್ಪಾದನಾ ದಾಳಿಯ ನಂತರ ಕಾಶ್ಮೀರಿ ವಿದ್ಯಾರ್ಥಿಗಳ ಮೇಲೆ ಯಾವುದೇ ಬೆದರಿಕೆ ಆಥವಾ ಹಲ್ಲೆಗಳಾದ ವರದಿಗಳನ್ನು ಕೇಂದ್ರ ಮಾನವ ಸಂಪನ್ಮೂಲ ಸಚಿವ ಪ್ರಕಾಶ್ ಜಾವಡೇಕರ್ ತಳ್ಳಿ ಹಾಕಿದ್ದಾರೆ.
ಇದು ದಾಳಿ, ಪ್ರತಿದಾಳಿಯ ವಿಚಾರವಲ್ಲ, ಜಮ್ಮು ಕಾಶ್ಮೀರದಲ್ಲಿ ಉಗ್ರ ಚಟುವಟಿಕೆಗಳಿಂದ ಅಮಾಯಕ ಜನರು ಬಲಿಯಾಗುತ್ತಿದ್ದಾರೆ. ಹೀಗಾಗಿ ಕಾಶ್ಮೀರದಲ್ಲಿ ಉತ್ತಮ ವಾತಾವರಣ ನಿರ್ಮಾಣ ಮಾಡಬೇಕಿದೆ ಎಂದು ಹೆಚ್. ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.
ಪುಲ್ವಾಮಾ ಉಗ್ರರ ದಾಳಿಯ ವಿಚಾರವಾಗಿ ಭಾರತದಲ್ಲಿ ಪಾಕ್ ನಡೆಗೆ ತೀವ್ರ ಖಂಡನೆ ವ್ಯಕ್ತವಾಗಿದ್ದು ಈ ಬೆನ್ನಲ್ಲೇ ಈಗ ಪಾಕಿಸ್ತಾನ ಭಾರತದಲ್ಲಿನ ತನ್ನ ಹೈಕಮಿಷನರ್ ಗೆ ಪಾಕ್ ಗೆ ವಾಪಸ್ ಬರುವಂತೆ ಸೂಚನೆ ನೀಡಿದೆ.
ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿ ಹಿನ್ನಲೆಯಲ್ಲಿ ಈಗ WION ಸಂಸ್ಥೆ ಗ್ಲೋಬಲ್ ಶೃಂಗಸಭೆಯಲ್ಲಿ ಭಾಗವಹಿಸುವ ಪಾಕಿಸ್ತಾನದ ಅತಿಥಿಗಳ ಆಹ್ವಾನವನ್ನು ಹಿಂತೆಗೆದುಕೊಂಡಿದೆ. ಈ ದಕ್ಷಿಣ ಏಷ್ಯಾ ಆವೃತ್ತಿಯ ಶೃಂಗಸಭೆ ಫೆಬ್ರವರಿ 20 ರಂದು ದುಬೈನಲ್ಲಿ ನಡೆಯಲಿದೆ.
ಮಂಡ್ಯ ಜಿಲ್ಲೆಯ ಮೂಡಿಗೆರೆಯ ಹುತಾತ್ಮ ಯೋಧ ಗುರು ಅವರ ಅಂತ್ಯ ಸಂಸ್ಕಾರಕ್ಕೆ ದೊಡ್ಡರಸಿನಕೆರೆ ಬಳಿಯಿರುವ ಅಂಬರೀಶ್ ಅವರಿಗೆ ಸೇರಿದ ಅರ್ಧ ಎಕರೆಯನ್ನು ಅಂತ್ಯ ಸಂಸ್ಕಾರ ಮತ್ತು ಸಮಾಧಿ ನಿರ್ಮಾಣಕ್ಕೆ ಬಿಟ್ಟುಕೊಡುವುದಾಗಿ ಸುಮಲತಾ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.