ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ(ಎನ್ಡಿಆರ್ಎಫ್) ತಂಡ ನಿರಂತರವಾಗಿ ಕಾರ್ಯಾಚರಣೆ ನಡೆಸಿ ಸತತ 110 ಗಂಟೆಗಳ ಬಳಿಕ 150 ಅಡಿ ಆಳದ ಕೊಳವೆ ಬಾವಿಯಲ್ಲಿ ಜೂನ್ 6 ರಂದು ಬಿದ್ದಿದ್ದ ಎರಡು ವರ್ಷದ ಮಗು ಫತೇವಿರ್ ಸಿಂಗ್ ನನ್ನು ಜೀವಂತವಾಗಿ ರಕ್ಷಿಸಿತ್ತು.
ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಹರಿಂದರ್ ಸಿಂಗ್ ಖಾಲ್ಸಾ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಎಎಪಿ ಟಿಕೆಟ್ ಪಡೆದು ಪಂಜಾಬ್ ನ ಫತೇಘರ್ ಸಾಹಿಬ್ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿದ್ದರು.
ಮೇ 19 ರಂದು ಪಂಜಾಬ್ನಲ್ಲಿ ಏಳನೇ ಹಂತದಲ್ಲಿ ಲೋಕಸಭಾ ಚುನಾವಣೆಗಾಗಿ ಮತದಾನ ನಡೆಯಲಿದೆ. ಪಂಜಾಬ್ನಲ್ಲಿ 13 ಲೋಕಸಭಾ ಕ್ಷೇತ್ರಗಳಿದ್ದು, ಕಳೆದ ಚುನಾವಣೆಯಲ್ಲಿ ಆಮ್ ಆದ್ಮಿ ಪಾರ್ಟಿ 4 ಸ್ಥಾನಗಳನ್ನು ವಶಪಡಿಸಿಕೊಂಡಿತ್ತು.
ದಾಳಿಕೋರರ ಬಗ್ಗೆ ಮಾಹಿತಿ ಲಭ್ಯವಿದ್ದಲ್ಲಿ ಪೊಲೀಸ್ ಸಹಾಯವಾಣಿ 181ಗೆ ಕರೆ ಮಾಡಬಹುದು. ಅಷ್ಟೇ ಅಲ್ಲದೆ, ಮಾಹಿತಿ ನೀಡಿದವರಿಗೆ ಬಹುಮಾನ ನೀಡುವುದರೊಂದಿಗೆ ಅವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಮುಖ್ಯಮಂತ್ರಿಗಳು ಘೋಷಣೆ ಮಾಡಿದ್ದಾರೆ.
ಪಾಕಿಸ್ತಾನ ಮೂಲದ ಜೈಶ್-ಎ-ಮೊಹಮ್ಮದ್ (ಜೆಎಂ) ಗೆ ಸೇರಿದ ಕನಿಷ್ಠ ಅರ್ಧ ಡಜನ್ ಭಯೋತ್ಪಾದಕರು ಫಿರೋಜ್ಪುರ್ ಪ್ರದೇಶದಲ್ಲಿ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಪ್ರವೇಶಿಸಿದ್ದಾರೆ. ಈಗ ಅವರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ ಎಂದು ಪಂಜಾಬ್ ಪೊಲೀಸರ ಗುಪ್ತಚರ ಇಲಾಖೆ ತಿಳಿಸಿದೆ ಎಂದು ಐಎಏನ್ಎಸ ವರದಿ ಮಾಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.