ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ. ಪಾಟೀಲ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಗಂಭೀರ ಆರೋಪ ಮಾಡುವ ಮೂಲಕ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
R Ashok Statement : ಇದನ್ನು ನಿರ್ವಹಿಸಲು ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಬೆಸ್ಕಾಂ ಹಾಗೂ ಇಲಾಖೆಗಳು ನಷ್ಟದಲ್ಲಿವೆ. ಕಾಂಗ್ರೆಸ್ ಶಾಸಕರೇ ಸರ್ಕಾರದ ವಿರುದ್ಧ ಧಿಕ್ಕಾರ ಹಾಕುವ ಸ್ಥಿತಿ ಬರಲಿದೆ. ಅದಕ್ಕೂ ಮುಂದೆ ಎಚ್ಚೆತ್ತುಕೊಳ್ಳಲಿ ಎಂದರು.
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. "ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
250 ಮೀಟರ್ ಎತ್ತರದ ಈ ಸ್ಕೈಡೆಕ್ಗಾಗಿ 25 ಎಕರೆ ಜಾಗದ ಅಗತ್ಯವಿದೆ. ಕೊಮ್ಮಘಟ್ಟ ಹಾಗೂ ಬೆಂಗಳೂರು ವಿವಿ ಬಳಿಯ ಜಾಗವನ್ನು ನೋಡಿದ್ದೆವು. ಬೆಂಗಳೂರು ಬೆಳೆಯುತ್ತಿರುವಾಗ ಬೆಂಗಳೂರು ವಿವಿಯ ಬಳಿ 25 ಎಕರೆ ಭೂಮಿ ವ್ಯರ್ಥ ಮಾಡುವುದು ಬೇಡ, ವಿದ್ಯಾರ್ಥಿಗಳಿಗೆ ತೊಂದರೆಯಾಗಬಹುದು ಎಂದು ಶಾಸಕರು ಅಭಿಪ್ರಾಯಪಟ್ಟರು. ಹೀಗಾಗಿ ಈಗ ನೈಸ್ ರಸ್ತೆಯ ಬಳಿ ಮಾಡಲು ವಿಪಕ್ಷದ ನಾಯಕ ಆರ್.ಅಶೋಕ್ ಸೇರಿದಂತೆ ಎಲ್ಲಾ ಶಾಸಕರು ಒಪ್ಪಿದ್ದಾರೆ ಎಂದು ಡಿಕೆಶಿ ತಿಳಿಸಿದ್ದಾರೆ.
ಕೊಪ್ಪಳದಲ್ಲಿ ಕೂಡ ಜನರು ಕಲುಷಿತ ನೀರು ಸೇವಿಸಿ ಆಸ್ಪತ್ರೆ ಸೇರಿದ್ದಾರೆ. ಕುಡಿಯುವ ನೀರಿನ ಟ್ಯಾಂಕರ್ ಗಳನ್ನು ಸ್ವಚ್ಛಗೊಳಿಸಲು ಸರ್ಕಾರದ ಬಳಿ ಹಣವಿಲ್ಲ. ಇದರಿಂದಲೇ ಜನರು ಕಲುಷಿತ ನೀರು ಕುಡಿಯಬೇಕಾಗಿದೆ. ಶಾಸಕರು ಅನುದಾನ ಕೇಳಿದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಬಾಯ್ಮುಚ್ಚಿಕೊಂಡು ಸುಮ್ಮನಿರಿ ಎಂದಿದ್ದಾರೆ. ಜನರ ಸಾವಿಗೆ ಸರ್ಕಾರದ ನಿರ್ಲಕ್ಷ್ಯವೇ ನೇರ ಕಾರಣ ಎಂದು ಕಿಡಿಕಾರಿದರು.
ಭಾರತ್ ಮಾತಾ ಕೀ ಜೈ ಎಂಬ ಘೋಷಣೆ ಕೂಗಿದ್ದಕ್ಕೆ ಬಿಜೆಪಿ ಕಾರ್ಯಕರ್ತರಾದ ಹರೀಶ್ ಮತ್ತು ನಂದಕುಮಾರ್ ಅವರಿಗೆ ಚೂರಿ ಇರಿಯಲಾಗಿದೆ.ಈ ತಾಲಿಬಾನ್ ಸರ್ಕಾರದಿಂದ ಪಾಕಿಸ್ತಾನಕ್ಕೆ ಜೈಕಾರದ ಘೋಷಣೆ ಕೇಳಿಬರುತ್ತಿದೆ. ಈ ಘಟನೆಯನ್ನು ಸದನದಲ್ಲೂ ಪ್ರಶ್ನಿಸಿ ಹೋರಾಟ ಮಾಡುತ್ತೇವೆ. ಸ್ಪೀಕರ್ ಮತ್ತು ಆರೋಗ್ಯ ಸಚಿವರು ಆಸ್ಪತ್ರೆ ಕಾರ್ಯಕ್ರಮಕ್ಕೆ ಬಂದಿದ್ದರೂ, ಗಾಯಾಳುಗಳನ್ನು ನೋಡಿ ಸಾಂತ್ವನ ಹೇಳುವ ಕೆಲಸ ಮಾಡಿಲ್ಲ ಎಂದು ದೂರಿದರು.
ಲೋಕಸಭೆ ಚುನಾವಣೆಯಲ್ಲಿ ಗ್ಯಾರಂಟಿಗಳಿಂದ ಕಾಂಗ್ರೆಸ್ಗೆ ಮತ ಬಂದಿಲ್ಲ. ಸರ್ಕಾರ ಪಾಪರ್ ಆಗಿ ಅಭಿವೃದ್ಧಿ ಶೂನ್ಯವಾಗಿರುವುದರಿಂದಲೇ ಕಾಂಗ್ರೆಸ್ ಸೋತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
Phone tapping: ಫೋನ್ ಟ್ಯಾಪ್ ಮಾಡುವವರನ್ನು ಜೈಲಿಗೆ ಕಳುಹಿಸಬೇಕು. ಹಿಂದೆಯೂ ಈ ರೀತಿ ಪೊಲೀಸ್ ಅಧಿಕಾರಿಗಳು ಮಾಡಿ ತನಿಖೆಗೆ ಒಳಗಾಗಿದ್ದರು. ಸರ್ಕಾರ ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು. ಸರ್ಕಾರ ಇದನ್ನು ಮಾಡಿಲ್ಲವೆಂದು ಎದೆ ಮುಟ್ಟಿ ಹೇಳುವುದಾದರೆ ತನಿಖೆಗೆ ನೀಡಲಿ. ಇದನ್ನು ತಾರ್ಕಿಕ ಅಂತ್ಯಕ್ಕೆ ಮುಟ್ಟಿಸಲಿ ಎಂದು ಒತ್ತಾಯಿಸಿದರು.
ಕೇಂದ್ರ ಸರ್ಕಾರದ ಈ ಮಧ್ಯಂತರ ಬಜೆಟ್ ಬಡವರು, ಯುವಕರು, ಮಹಿಳೆಯರು ಹಾಗೂ ರೈತರು ಈ ನಾಲ್ಕು ವರ್ಗಗಳು ದೇಶದ ಆಧಾರ ಸ್ಥಂಭಗಳು ಎಂಬ ಪರಿಕಲ್ಪನೆಯೊಂದಿಗೆ ರೂಪಿಸಲಾಗಿದೆ. ಜಗತ್ತಿನ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲು ಈ ಬಜೆಟ್ ವೇದಿಕೆ ಕಲ್ಪಿಸಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.