R. Ashoka: ಅನ್ವರ್ ಮಾಣಿಪ್ಪಾಡಿ ಸಮಿತಿಯ ವರದಿಯ ಆಧಾರದ ಮೇಲೆ ವಕ್ಫ್ ಜಮೀನು ಕಬಳಿಸಿದವರಿಗೆ ಬಿಜೆಪಿ ಸರ್ಕಾರ ನೋಟಿಸ್ ನೀಡಿತ್ತು. ಒಂದು ವೇಳೆ ತಪ್ಪಾಗಿ ರೈತರಿಗೆ ನೋಟಿಸ್ ನೀಡಿದ್ದರೆ ಅಂತಹ ಅಧಿಕಾರಿಗಳ ವಿರುದ್ಧ ಈಗಿನ ಕಾಂಗ್ರೆಸ್ ಸರ್ಕಾರ ಕ್ರಮ ಕೈಗೊಳ್ಳಲಿ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಬಡವರ ಪರ ಎಂದು ಹೇಳುವ ಸಿಎಂ ಸಿದ್ದರಾಮಯ್ಯ ಎಷ್ಟು ಜಲಾಶಯ ನಿರ್ಮಿಸಿದ್ದಾರೆ? ಮೇಕದಾಟು ಎಂದು ಪ್ರತಿಭಟನೆ ಮಾಡಿ, ಅಲ್ಲಿ ಅಣೆಕಟ್ಟು ಕಟ್ಟುವ ಕೆಲಸ ಮಾಡಿಲ್ಲ. ಒಂದೇ ಒಂದು ಆಸ್ಪತ್ರೆ ಕೂಡ ನಿರ್ಮಿಸಿಲ್ಲ. ಆದರೆ ಆಸ್ಪತ್ರೆಯಲ್ಲಿ ಶುಲ್ಕಗಳನ್ನು ಮಾತ್ರ ಏರಿಸಲಾಗಿದೆ. ಎಲ್ಲವೂ ಉಚಿತ ಎಂದು ಸುಳ್ಳು ಹೇಳಿ ಈಗ ಎಲ್ಲ ದರಗಳನ್ನು ಏರಿಸಲಾಗಿದೆ.
ಶಾಸಕ ಮುನಿರತ್ನ ಅವರನ್ನು ಬಂಧಿಸಿರುವುದು ದ್ವೇಷದ ರಾಜಕಾರಣ. ಆ ಧ್ವನಿ ಮುದ್ರಣ ಅವರದ್ದೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅದನ್ನು ಪ್ರಯೋಗಾಲಯಕ್ಕೆ ಕಳುಹಿಸಬೇಕಿತ್ತು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
R. Ashoka on CM: ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ರೂ. ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಭಾಗಿಯಾಗಿದ್ದು, ಅವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.
ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿಗಳ ಜೊತೆಗೆ ಜನರಿಗೆ ನಾಮ ಹಾಕುವ ಗ್ಯಾರಂಟಿಯನ್ನೂ ನೀಡಿದೆ. ಖಜಾನೆ ಖಾಲಿ ಮಾಡಿಕೊಂಡ ಸರ್ಕಾರ ಬೀಗ ಹಾಕಿಕೊಳ್ಳುವ ಸ್ಥಿತಿ ಬಂದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.