2019 ರ 'ಮೋದಿ ಉಪನಾಮ' ಟೀಕೆ ವಿಚಾರವಾಗಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣದ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್ ಈಗ ತಕ್ಷಣದ ತಡೆ ನೀಡಿದೆ. ಆ ಮೂಲಕ ಸಂಸತ್ ಸ್ಥಾನದಿಂದ ಅನರ್ಹರಾಗಿದ್ದ ರಾಹುಲ್ ಗಾಂಧಿ ಗೆ ನಿರಾಳತೆ ಸಿಕ್ಕಿದೆ.
ರಾಹುಲ್ ಗಾಂಧಿ ಅವರ ಮೇಲೆ ಮಾನನಷ್ಟ ಮೊಕದ್ದಮೆ ದಾಖಲು ಮಾಡಿ ಅದರ ತೀರ್ಪಿನ ಅನ್ವಯ ಅವರನ್ನು ಸಂಸತ್ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಿದ್ದಾರೆ. ಅವರ ರಾಜಕೀಯ ಬೆಳವಣಿಗೆ ತಡೆಯಲು ಬಿಜೆಪಿ ಕುತಂತ್ರ ನಡೆಸಿದ್ದು, ಇದನ್ನು ನಾವು ಖಂಡಿಸುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.
ಸರಿಯಾಗಿ ನಾಲ್ಕು ವರ್ಷಗಳ ಹಿಂದೆ ಚುನಾವಣೆಯ ಸಂದರ್ಭದಲ್ಲಿ ಮಾಡಿದ್ದ ‘ಮೋದಿ ಉಪನಾಮ’ ಹೇಳಿಕೆಗೆ ಸಂಬಂಧಿಸಿದಂತೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಶಿಕ್ಷೆಗೆ ತಡೆಯಾಜ್ಞೆ ನೀಡುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಾಡಿದ ಮನವಿಯ ಆದೇಶವನ್ನು ಏಪ್ರಿಲ್ 20 ರಂದು ಪ್ರಕಟಿಸುವುದಾಗಿ ಇಲ್ಲಿನ ಸೆಷನ್ಸ್ ನ್ಯಾಯಾಲಯ ಗುರುವಾರ ಹೇಳಿದೆ.
Rahul Gandhi defamation case : ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ 2019 ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಗಾಂಧಿ ಭಾಷಣ ಮಾಡುತ್ತಿದ್ದರು. ಕೋಲಾರದ ಜಿಲ್ಲಾ ಕ್ರೀಡಾಂಗಣದಲ್ಲಿ ಕೆ.ಎಚ್ ಮುನಿಯಪ್ಪ ಪರ ಮತಯಾಚನೆ ಮಾಡುವ ವೇಳೆ ರಾಹುಲ್ ಗಾಂಧಿ ನಿಂದನೆಯ ಮಾತು ಆಡಿದ್ದರು. ರಾಹುಲ್ ಗಾಂಧಿ ಹೇಳಿಕೆ ಆಧರಿಸಿ ಬಿಜೆಪಿ ಶಾಸಕ ಪೂರ್ಣೆಶ್ ಮೋದಿ ಕ್ರಿಮಿನಲ್ ಮಾನಹಾನಿ ಕೇಸ್ ದಾಖಲು ಮಾಡಿದ್ದರು.
Rahul Gandhi defamation case : ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಕಾರಣಕ್ಕೆ ಅಂತಹ ಕ್ರಮಗಳನ್ನು ಕೈಗೊಂಡಿಲ್ಲ. ರಾಹುಲ್ ಗಾಂಧಿ ಬಿಜೆಪಿಯ ಬ್ರಾಂಡ್ ಅಂಬಾಸಿಡರ್ ಇದ್ದಂತೆ, ಅವರು ಚುನಾವಣೆಗೆ ಸ್ಪರ್ಧಿಸಿದರೆ ಮಾತ್ರ ಬಿಜೆಪಿ ಗೆಲ್ಲುತ್ತದೆ. ರಾಹುಲ್ ಗಾಂಧಿ ಸ್ಪರ್ಧಿಸಬೇಕು ಎಂದು ಬಿಜೆಪಿ ಬಯಸುತ್ತದೆ ಎಂದು ಅಣ್ಣಾಮಲೈ ತಿಳಿಸಿದರು.
Rahul Gandhi defamation case : ಬಿಜೆಪಿ ಮತ್ತು ಎನ್ಡಿಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದೆ, ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಮೋದಿ ಸಮುದಾಯಕ್ಕೆ ಅವಮಾನಿಸಿದ ಪ್ರಕರಣದಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ಸೂರತ್ ನ್ಯಾಯಾಲಯ ಎರಡು ವರ್ಷಗಳ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಲೋಕಸಭಾ ಸದಸ್ಯ ಸ್ಥಾನದಿಂದ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯದರ್ಶಿ ಉತ್ಪಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.