Rahul Gandhi defamation case : ರಾಹುಲ್ ಗಾಂಧಿ ಚುನಾವಣೆಗೆ ಸ್ಪರ್ಧಿಸಬಾರದು ಎಂಬ ಕಾರಣಕ್ಕೆ ಅಂತಹ ಕ್ರಮಗಳನ್ನು ಕೈಗೊಂಡಿಲ್ಲ. ರಾಹುಲ್ ಗಾಂಧಿ ಬಿಜೆಪಿಯ ಬ್ರಾಂಡ್ ಅಂಬಾಸಿಡರ್ ಇದ್ದಂತೆ, ಅವರು ಚುನಾವಣೆಗೆ ಸ್ಪರ್ಧಿಸಿದರೆ ಮಾತ್ರ ಬಿಜೆಪಿ ಗೆಲ್ಲುತ್ತದೆ. ರಾಹುಲ್ ಗಾಂಧಿ ಸ್ಪರ್ಧಿಸಬೇಕು ಎಂದು ಬಿಜೆಪಿ ಬಯಸುತ್ತದೆ ಎಂದು ಅಣ್ಣಾಮಲೈ ತಿಳಿಸಿದರು.
ಗುಜರಾತ್ ನ್ಯಾಯಾಲಯದಲ್ಲಿ 2019 ರ ಮಾನನಷ್ಟ ಮೊಕದ್ದಮೆ ವಿಚಾರವಾಗಿ ನ್ಯಾಯಾಲಯದಿಂದ ಶಿಕ್ಷೆ ಪ್ರಕಟವಾದ ನಂತರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇನ್ನು ಮುಂದೆ ಸಂಸತ್ತಿನ ಸದಸ್ಯರಾಗಿರುವುದಿಲ್ಲ ಎಂದು ಲೋಕಸಭೆಯ ಕಾರ್ಯದರ್ಶಿ ಶುಕ್ರವಾರ ಪ್ರಕಟಿಸಿದ್ದಾರೆ.
Rahul Gandhi defamation case : ಬಿಜೆಪಿ ಮತ್ತು ಎನ್ಡಿಎ ಸರ್ಕಾರದ ವಿರುದ್ದ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದೆ, ನರೇಂದ್ರ ಮೋದಿ ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.