ಧಾರವಾಡ ಜಿಲ್ಲೆಯಾದ್ಯಂತ ಮಳೆರಾಯನ ಆರ್ಭಟ ಜೋರಾಗಿದೆ. ಕುಂದಗೋಳ ತಾಲೂಕು ವರುಣನ ಆರ್ಭಟಕ್ಕೆ ನಲುಗಿದೆ. ಕುಂದಗೋಳ ತಾಲೂಕಿನ ಗ್ರಾಮೀಣ ಭಾಗದಲ್ಲಿ ಹೆಚ್ಚಿನ ಮಳೆಯಾಗ್ತಿದ್ದು ಮನೆಗಳಿಗೆ ನೀರು ನುಗ್ಗಿದೆ.. ರಸ್ತೆಗಳು ಕೆರೆಯಂತಾಗಿವೆ..
ರಾತ್ರಿ ಇಡೀ ಸುರಿದ ಮಳೆಗೆ ಬೆಂಗಳೂರಿನ ಜನ ತತ್ತರಿಸುವಂತಾಗಿದೆ. ಯುಮಲೂರಿನಲ್ಲಿ ಮಳೆಯಿಂದ ಜನರ ನರಕಯಾತನೆ ಅನುಭವಿಸುವಂತಾಗಿದೆ. ರಸ್ತೆ ಮೇಲೆ ನಿಂತಿರುವ ನೀರು ಇನ್ನೂ ಕಡಿಮೆಯಾಗಿಲ್ಲ. ಯಮಲೂರು ಬಳಿ ಮಳೆಯಿಂದ ಜಲಪ್ರಳಯ ಸೃಷ್ಟಿಯಾಗಿದೆ. ಅಪಾರ್ಟ್ಮೆಂಟ್ ನಿವಾಸಿಗಳು ಟ್ರ್ಯಾಕ್ಟರ್ನಲ್ಲಿ ತೆರಳ್ತಿದ್ದಾರೆ.
ರಾಯಚೂರು ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ರಾಯಚೂರಿನ ಸಿರವಾರ-ಕುರುಕುಂದ ಬಳಿ ನೀರಿನ ರಭಸಕ್ಕೆ ಕಾಲುವೆ ಒಡೆದುಹೋಗಿದೆ. ಕಳಪೆ ಕಾಮಗಾರಿಯಿಂದ ಕಾಲುವೆ ಒಡೆದು ಹೋಗಿದ್ದು, ಏಕಾಏಕಿ ಅಕ್ಕಪಕ್ಕದ ಹೊಲ-ಗದ್ದೆಗಳಿಗೆ ನೀರು ನುಗ್ಗಿದೆ.
ಮಳೆಗೆ ಶಾಲೆ ಹಾಗೂ ಮನೆಗಳು ಜಲಾವೃತ. ಮನೆಯಲ್ಲಿದ್ದ ದವಸ ಧಾನ್ಯಗಳು ನೀರಿನಲ್ಲಿ ಮುಳುಗಡೆ. ರಾಯಚೂರು ಜಿಲ್ಲೆಯಲ್ಲಿ ಸುರಿದ ಮಳೆಗೆ ಅಪಾರ ಹಾನಿ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಕಕ್ಕಲದೊಡ್ಡಿ ಗ್ರಾಮದಲ್ಲಿ ಘಟನೆ. ಗ್ರಾಮದ ಬಹುತೇಕ ಮನೆಗಳಿಗೆ ನುಗ್ಗಿದ ನೀರು.
ರಾಮನಗರ ಜಿಲ್ಲೆಯಲ್ಲಿ ಮತ್ತೆ ವರುಣನ ಅಬ್ಬರ. ಜಿಲ್ಲೆಯ ಹಲವೆಡೆ ಜೋರು ಮಳೆ. ಧಾರಾಕಾರ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತ. ಕೆರೆ ಕಟ್ಟೆ ಕೋಡಿ ಬಿದ್ದು ರಸ್ತೆ, ಮನೆ, ಜಮೀನುಗಳಿಗೆ ನುಗ್ಗಿದ ನೀರು. ಕಳೆದೆರಡು ದಿನಗಳ ಮಳೆಯ ಅಬ್ಬರಕ್ಕೆ ಜನ ಹೈರಾಣು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.